ಶನಿವಾರ, ಮಾರ್ಚ್ 29, 2025

ನೀರಾವರಿ ಸಲಹಾ ಸಮಿತಿ ವೇಳಾಪಟ್ಟಿಯಂತೆ ಕಾಲುವೆಗಳಿಗೆ ನೀರು ಬಿಡುಗಡೆ

ಬಳ್ಳಾರಿ,ಮಾ.29(ಕರ್ನಾಟಕ ವಾರ್ತೆ): ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ಅಚ್ಚುಕಟ್ಟು ಪ್ರದೇಶದಲ್ಲಿ ರೈತರು ಬಿತ್ತನೆ ವಿಳಂಬವಾಗಿ ಮಾಡಿರುವುದರಿಂದ ಹಿಂಗಾರು ಹಂಗಾಮಿಗೆ ನಿಂತಿರುವ ಬೆಳಗಳನ್ನು ಸಂರಕ್ಷಿಸಲು ಜಲಾಶಯದಲ್ಲಿ ಲಭ್ಯವಾಗುವ ನೀರಿನ ಪ್ರಮಾಣವನ್ನು ಅಂದಾಜಿಸಿ ವಿವಿಧ ಕಾಲುವೆಗಳಿಗೆ ಕುಡಿಯುವ ನೀರು ಒಳಗೊಂಡAತೆ ನೀರು ಹರಿಸಲು ನಿರ್ಧರಿಸಲಾಗಿದೆ ಎಂದು ಮುನಿರಾಬಾದ್ ನ ತುಂಗಭದ್ರಾ ಯೋಜನಾ ವೃತ್ತದ ಕನೀನಿನಿ ಅಧೀಕ್ಷಕ ಅಭಿಯಂತರರು ಹಾಗೂ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಎಲ್.ಬಸವರಾಜ ಅವರು ತಿಳಿಸಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರಾದ ಶಿವರಾಜ ಎಸ್. ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ 2024-25ನೇ ಸಾಲಿನ 123ನೇ ತುರ್ತು ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ. *ನೀರು ಹರಿಸುವ ಕಾಲಾವಧಿ:* ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ: ಎಡದಂಡೆ ಕಾಲುವೆಯಡಿ ಲಭ್ಯವಾಗುವ ನೀರಿನಲ್ಲಿ ಏ.01 ರಿಂದ 10 ರವರೆಗೆ ಕುಡಿಯುವ ನೀರು ಒಳಗೊಂಡAತೆ ಹಾಗೂ ನಿಂತ ಬೆಳೆಗಳ ಸಂರಕ್ಷಣೆಗಾಗಿ 3000 ಕ್ಯೂಸೆಕ್ ನಂತೆ ಹರಿಸಲಾಗುವುದು. ಎಡದಂಡೆ ವಿಜಯನಗರ ಕಾಲುವೆ: ಏ.11 ರಿಂದ ರಿಂದ ಮೇ 10 ರವರೆಗೆ 150 ಕ್ಯೂಸೆಕ್ ನಂತೆ ವಿತರಣಾ ಕಾಲುವೆ 1 ರಿಂದ 11ಎ ವರೆಗೆ ಅಥವಾ ಈ ಕಾಲುವೆಯಡಿ ನೀರಿನ ಲಭ್ಯತೆಯು ಇರುವವರೆಗೆ ಮಾತ್ರ, ಇದರಲ್ಲಿ ಯಾವುದು ಮೊದಲು ಅದು ಅನ್ವಯಿಸುತ್ತದೆ. ತುಂಗಭದ್ರಾ ಬಲದಂಡೆ ಕೆಳಮಟ್ಟದ ಕಾಲುವೆ: ಬಲದಂಡೆ ಕೆಳಮಟ್ಟದ ಕಾಲುವೆಯಡಿ ಲಭ್ಯವಾಗುವ ನೀರಿನಲ್ಲಿ ಏ.01 ರಿಂದ 10 ರ ವರೆಗೆ ಕುಡಿಯುವ ನೀರು ಒಳಗೊಂಡAತೆ ಹಾಗೂ ನಿಂತ ಬೆಳೆಗಳ ಸಂರಕ್ಷಣೆಗಾಗಿ 450 ಕ್ಯೂಸೆಕ್ ನಂತೆ ಹರಿಸಲಾಗುವುದು. ರಾಯ ಬಸವಣ್ಣ ಕಾಲುವೆ: ಏ.01 ರಿಂದ ಮೇ 31 ರವರೆಗೆ ಲಭ್ಯವಾಗುವ ನೀರನಲ್ಲಿ 200 ಕ್ಯೂಸೆಕ್ ನಂತೆ ಹರಿಸಲಾಗುವುದು. ನದಿ ಪೂರಕ: ಸುಮಾರು 90 ಕ್ಯೂಸೆಕ್ ನಂತೆ ನದಿ ಪೂರಕ ಕಾರ್ಖಾನೆ ಒಳಗೊಂಡAತೆ ನೀರು ಹರಿಸಲಾಗುವುದು. *ರೈತ ಭಾಂದವರಲ್ಲಿ ಮನವಿ:* ತುಂಗಭದ್ರಾ ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಹಿಂಗಾರು ಹಂಗಾಮಿನ ಬೆಳೆದು ನಿಂತ ಬೆಳಗಳನ್ನು ಸಂರಕ್ಷಿಸಲು ಹಾಗೂ ಕುಡಿಯುವ ನೀರು ಒಳಗೊಂಡAತೆ ಹರಿಸಲಾಗುವುದು. ಹಾಗಾಗಿ ರೈತರು ನೀರನ್ನು ಮಿತವ್ಯಯವಾಗಿ ಬಳಸಿ ಅಧಿಕೃತ ಅಚ್ಚುಕಟ್ಟು ಪ್ರದೇಶದಲ್ಲಿ ನಿಗಧಿತ ಬೆಳೆಗಳನ್ನು ಮಾತ್ರ ಬೆಳೆಯಲು ಹಾಗೂ ಸಮರ್ಪಕ ನೀರು ನಿರ್ವಹಣೆಗೆ ಇಲಾಖೆಯೊಡನೆ ಸಹಕರಿಸಬೇಕು ಎಂದು ರೈತ ಭಾಂದವರಲ್ಲಿ ಕೋರಲಾಗಿದೆ. ರೈತರು ಅನಧಿಕೃತವಾಗಿ ನೀರು ಪಡೆದು ಭತ್ತ, ಇತರೆ ಬೆಳೆಗಳನ್ನು ಬೆಳೆದಲ್ಲಿ ನೀರಾವರಿ ಕಾಯ್ದೆಯನ್ವಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಏಪ್ರಿಲ್ 1 ರಿಂದ ಮಹಾತ್ಮಗಾಂಧಿ ನರೇಗಾ ಕೂಲಿ 370/- ರೂ. ಗೆ ಹೆಚ್ಚಳ ಹಾಗೂ ಬೇಸಿಗೆಯಲ್ಲಿ ನಿರಂತರ ಕೆಲಸ: ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್

ಬಳ್ಳಾರಿ,ಮಾ.29(ಕರ್ನಾಟಕ ವಾರ್ತೆ): ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ನೀಡುತ್ತಿದ್ದ ಕೂಲಿಯು ಏ.01 ರಿಂದ 370/- ರೂ. ಗೆ ಹೆಚ್ಚಳವಾಗಿದ್ದು, ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ನಿರಂತರವಾಗಿ ಕೆಲಸ ನೀಡಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ತಿಳಿಸಿದ್ದಾರೆ. ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕೂಲಿ ಪ್ರಸ್ತುತ ವರ್ಷದಲ್ಲಿ ನೀಡುತ್ತಿರುವ 349/-ರೂ. ಗಳಿಂದ 370/- ರೂ. ಗಳಿಗೆ ಪರಿಷ್ಕರಿಸಿ ಏ.01 ರಿಂದ ಆರ್ಥಿಕ ವರ್ಷ 2025-26 ನೇ ಸಾಲಿಗೆ ಅನ್ವಯವಾಗುವಂತೆ ಪಾವತಿಸಲು ಕ್ರಮವಹಿಸುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ. ಜನರು ವಲಸೆ ಹೋಗುವುದನ್ನು ತಡೆಗಟ್ಟಲು ಗ್ರಾಮದ ಬಡ ಕೂಲಿ ಕಾರ್ಮಿಕರು ನಮೂನೆ-6 ರಲ್ಲಿ ಅರ್ಜಿಯನ್ನು ಗ್ರಾಮ ಪಂಚಾಯತಿಗೆ ಸಲ್ಲಿಸಿ, ಕೂಲಿ ಕೆಲಸವನ್ನು ತಮ್ಮ ಗ್ರಾಮದಲ್ಲೇ ಪ್ರತಿ ಕುಟುಂಬವು 100 ದಿನಗಳವರೆಗೆ ನರೇಗಾ ಕೆಲಸದಲ್ಲಿ ಭಾಗವಹಿಸುವಂತೆ ಅವರು ತಿಳಿಸಿದ್ದಾರೆ. *ವಿಶೇಷ ಚೇತನರು ಹಾಗೂ ಮಹಿಳೆಯರಿಗೆ ಸಿಗುವ ಸೌಲಭ್ಯಗಳು:* ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ವಿಶೇಷ ಚೇತನರು ಹಾಗೂ ಹಿರಿಯ ನಾಗರಿಕರಿಗೆ ದಿನ ಒಂದಕ್ಕೆ ನಿಗದಿತ ಕೂಲಿ ಪಡೆಯಲು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ.50 ರಷ್ಟು ರಿಯಾಯತಿ ಇರುತ್ತದೆ. ಶೇ.60 ಕ್ಕಿಂತ ಹೆಚ್ಚಿನ ಪ್ರಮಾಣದ ಮಹಿಳೆಯರನ್ನು ಹೊಂದಿರುವ ಕಾಮಗಾರಿಗಳಲ್ಲಿ ಮಹಿಳೆಯರು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ.10 ರಷ್ಟು ರಿಯಾಯತಿ ನೀಡಲಾಗುತ್ತದೆ. ನರೇಗಾ ಯೋಜನೆಯ ಕಾಮಗಾರಿಗಳಲ್ಲಿ ಕೆಲಸ ನಿರ್ವಹಿಸುವ 06 ತಿಂಗಳ ಗರ್ಭಿಣಿಯರಿಗೆ ಮಗುವಿನ ಜನನದವರೆಗೆ ಹಾಗೂ ಬಾಣಂತಿಯರಿಗೆ ಮಗುವಿನ ಜನನ ದಿನಾಂಕದಿAದ 06 ತಿಂಗಳವರೆಗೆ ಯೋಜನೆಯಡಿ ನಿಗದಿತ ಕೂಲಿ ಪಡೆಯಲು ನಿಗದಿಪಡಿಸಲಾದ ಕೆಲಸದ ಪ್ರಮಾಣದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಲಾಗಿದೆ. ರಿಯಾಯತಿ ಪಡೆಯಲು ಆರೋಗ್ಯ ಇಲಾಖೆಯು ನೀಡುವ ತಾಯಿ ಕಾರ್ಡ್ ನ್ನು ಆಧಾರವಾಗಿ ಪರಿಗಣಿಸಲಾಗುತ್ತದೆ. ನಮೂನೆ-1 ರಲ್ಲಿ 18 ವರ್ಷ ಮೇಲ್ಪಟ್ಟ ಕುಟುಂಬದ ಸದಸ್ಯರು ಉದ್ಯೋಗ ಚೀಟಿಗೆ ಅರ್ಜಿ ಸಲ್ಲಿಸುವುದು. ಅರ್ಜಿ ಜೊತೆಗೆ ಪಾಸ್ ಪೋಟ್ ಅಳತೆಯ ಪೋಟೋ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಬ್ಯಾಂಕ್ ಖಾತೆ ಮಾಹಿತಿಯನ್ನು ಆಯಾ ಗ್ರಾಮ ಪಂಚಾಯತಿಗೆ ನೀಡಿ, ಉದ್ಯೋಗ ಚೀಟಿಯನ್ನು ಪಡೆದುಕೊಳ್ಳಬಹುದು ಎಂದು ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಜೆಎಸ್‌ಎಸ್ ಶಾಲೆ ಹಾಗೂ ಉಚಿತ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ,ಮಾ.29(ಕರ್ನಾಟಕ ವಾರ್ತೆ): ಮೈಸೂರಿನ ಸುತ್ತೂರು ಶ್ರೀಕ್ಷೇತ್ರದ ಜೆಎಸ್‌ಎಸ್ ಶಾಲೆಗೆ ಹಾಗೂ ಉಚಿತ ವಿದ್ಯಾರ್ಥಿ ನಿಲಯಕ್ಕೆ 2025-26ನೇ ಸಾಲಿನ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕನ್ನಡ ಮಾಧ್ಯಮಕ್ಕೆ 1 ರಿಂದ 8ನೇ ತರಗತಿವರೆಗೆ ಮತ್ತು ಇಂಗ್ಲೀಷ್ ಮಾಧ್ಯಮಕ್ಕೆ 1, 5, 6 ಹಾಗೂ 8ನೇ ತರಗತಿಗಳಿಗೆ ಮಾತ್ರ ಪ್ರವೇಶಕ್ಕೆ ಅವಕಾಶವಿದೆ. ಗ್ರಾಮಾಂತರ ಪ್ರದೇಶದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಬಾಲಕ ಹಾಗೂ ಬಾಲಕಿಯರಿಗೆ ಪ್ರವೇಶ ನೀಡಲಾಗುವುದು. ಅರ್ಜಿಯನ್ನು ಶಾಲಾ ಕಚೇರಿಯಲ್ಲಿ ಖುದ್ದಾಗಿ ಪಡೆಯಬಹುದು ಅಥವಾ www.jssschoolsuttur.org ಹಾಗೂ www.jssonline.org ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ದೂರವಾಣಿಯಿಂದ ಸಂಪರ್ಕಿಸಿದರೆ ವಾಟ್ಸ್ಆಪ್ ಮೂಲಕವೂ ಅರ್ಜಿ ನಮೂನೆ ಕಳುಹಿಸಿಕೊಡಲಾಗುವುದು. ಅಂಚೆ ಮುಖಾಂತರ ಅರ್ಜಿ ಪಡೆಯಲು ಇಚ್ಛಿಸುವವರು, ವಿದ್ಯಾರ್ಥಿಯು ಪ್ರವೇಶ ಬಯಸುವ ತರಗತಿಯ ವಿವರ ಹಾಗೂ ಸ್ವ-ವಿಳಾಸವುಳ್ಳ 5 ರೂ.ಗಳ ಪೋಸ್ಟಲ್ ಸ್ಟಾö್ಯಂಪ್ ಹಚ್ಚಿದ ಲಕೋಟೆಯನ್ನು ಆಡಳಿತಾಧಿಕಾರಿಗಳು, ಜೆಎಸ್‌ಎಸ್ ಸಂಸ್ಥೆಗಳು, ಸುತ್ತೂರು-571129, ನಂಜನಗೂಡು ತಾಲ್ಲೂಕು, ಮೈಸೂರು ಜಿಲ್ಲೆ. ಈ ವಿಳಾಸಕ್ಕೆ ಕಳುಹಿಸಿ ಪಡೆಯಬಹುದು. ಅರ್ಜಿಗಳನ್ನು ಏ.02 ರಿಂದ ನೀಡಲಾಗುವುದು. ಭರ್ತಿ ಮಾಡಿದ ಅರ್ಜಿಗಳನ್ನು ಮೇ.15 ರ ಒಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.7411486938 ಅಥವಾ ದೂ.08221-232332 ಗೆ ಸಂಪರ್ಕಿಸಬಹುದು ಎಂದು ಜೆಎಸ್‌ಎಸ್ ಶಾಲೆಯ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಶುಕ್ರವಾರ, ಮಾರ್ಚ್ 28, 2025

ಬಳ್ಳಾರಿ: ಜಿಲ್ಲಾ ಉಸ್ತುವಾರಿ ಸಚಿವರಿಂದ ‘ಭರವಸೆಯ ಬೆಳಕು- ಪಂಚಗ್ಯಾರAಟಿ ಯೋಜನೆಗಳು’ ಕಿರುಹೊತ್ತಿಗೆ ಬಿಡುಗಡೆ

ಬಳ್ಳಾರಿ,ಮಾ.28(ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳ ಕುರಿತಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಿಸಿರುವ ‘ಭರವಸೆಯ ಬೆಳಕು-ಪಂಚ ಗ್ಯಾರಂಟಿ ಯೋಜನೆಗಳು' ಕುರಿತ ಬಳ್ಳಾರಿ ಜಿಲ್ಲೆಯ ಕಿರು ಹೊತ್ತಿಗೆಯನ್ನು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಝಡ್ ಜಮೀರ್ ಅಹಮದ್ ಖಾನ್ ಅವರು ಬೆಂಗಳೂರಿನ ಸಚಿವರ ಕಚೇರಿಯಲ್ಲಿ ಬಿಡುಗಡೆ ಮಾಡಿದರು. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷಿö್ಮ, ಗೃಹಜ್ಯೋತಿ, ಶಕ್ತಿ ಹಾಗೂ ಯುವನಿಧಿ ಯೋಜನೆಗಳು ರಾಜ್ಯದಲ್ಲಿ ಅಭೂತಪೂರ್ವ ಯಶಸ್ಸು ಕಂಡಿದ್ದು, ಯೋಜನೆಗಳು ಸರ್ವರಿಗೂ ಸಮಪಾಲು, ಸಾಮಾಜಿಕ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ರಾಜ್ಯದ ಪ್ರತಿ ವರ್ಗಕ್ಕೂ ತಲುಪುತ್ತಿವೆ. ರಾಜ್ಯದ ಪ್ರತಿಯೊಬ್ಬ ಪ್ರಜೆಯೂ ಒಂದಲ್ಲ ಒಂದು ರೀತಿಯಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಯಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಸರ್ಕಾರವು ದೀನ ದಲಿತರ ಹಾಗೂ ಬಡವರ ಶ್ರೇಯೋಭಿವೃದ್ಧಿಗಾಗಿ ನಿರಂತರ ಶ್ರಮಿಸುತ್ತಿದ್ದು, ಚುನಾವಣೆಗೂ ಮುನ್ನ ನೀಡಿದ್ದ ಭರವಸೆಗಳನ್ನು ಈಡೇರಿಸುವುದರೊಂದಿಗೆ ನಮ್ಮದು ನುಡಿದಂತೆ ನಡೆದ ಸರ್ಕಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಝಡ್ ಜಮೀರ್ ಅಹಮದ್ ಖಾನ್ ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ. ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷಿö್ಮ, ಗೃಹಜ್ಯೋತಿ, ಶಕ್ತಿ ಹಾಗೂ ಯುವನಿಧಿ ಯೋಜನೆಗಳ ಫಲಾನುಭವಿಗಳು, ಯೋಜನೆಗಳಿಂದ ತಮಗೆ ಆದ ಅನುಕೂಲ ಹಾಗೂ ಬದುಕಿಗೆ ನೆರವಾದ ಕುರಿತಂತೆ ಅನಿಸಿಕೆಗಳನ್ನು ವ್ಯಕ್ತಪಡಿಸಿದ್ದು, ಫಲಾನುಭವಿಗಳ ಅನಿಸಿಕೆಗಳು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಂದೇಶವನ್ನು “ಭರವಸೆಯ ಬೆಳಕು- ಪಂಚ ಗ್ಯಾರಂಟಿ ಯೋಜನೆಗಳು’ ಕಿರುಹೊತ್ತಿಗೆ ಒಳಗೊಂಡಿದೆ. ಈ ವೇಳೆ ಸಚಿವರ ಆಪ್ತ ಕಾರ್ಯದರ್ಶಿ ಸರ್ಫಾರಾಜ್ ಖಾನ್, ಸಚಿವರ ಮಾಧ್ಯಮ ಸಲಹೆಗಾರ ಎಸ್.ಲಕ್ಷಿö್ಮÃ ನಾರಾಯಣ ಉಪಸ್ಥಿತರಿದ್ದರು. -------------

ಬಳ್ಳಾರಿ: ಐತಿಹಾಸಿಕ ಏಕಶಿಲಾ ಬೆಟ್ಟಕ್ಕೆ ರೋಪ್ ವೇ; ಸ್ಥಳ ಪರಿಶೀಲನೆ

ಬಳ್ಳಾರಿ,ಮಾ.28(ಕರ್ನಾಟಕ ವಾರ್ತೆ): ನಗರದ ಹೃದಯ ಭಾಗದಲ್ಲಿರುವ ಏಕಶಿಲಾ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಮಾಡುವ ಸಂಬAಧ ಕಾರ್ಯ ಸಾಧ್ಯತೆಯ ಕುರಿತು ಸ್ಥಳ ಪರಿಶೀಲನೆ ಮಾಡಲು ಮೇ.ರೈಟ್ಸ್ ಸಂಸ್ಥೆಯ ಪ್ರತಿನಿಧಿಗಳು ಬಳ್ಳಾರಿಯ ಏಕಶಿಲಾ ಬೆಟ್ಟಕ್ಕೆ ಶುಕ್ರವಾರ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು. ಸ್ಥಳ ಪರಿಶೀಲನೆ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆಗಮಿಸಿ ಬಳ್ಳಾರಿ ನಗರದ ಏಕಶಿಲಾ ಬೆಟ್ಟಕ್ಕೆ ರೋಪ್ ವೇ ಅಳವಡಿಸುವ ಸಂಬAಧ ಅಗತ್ಯ ಸಲಹೆ ಹಾಗೂ ನಿರ್ದೇಶನ ನೀಡಿದರು. ಮುಖ್ಯವಾಗಿ ರೋಪ್ ವೇ ಯ ಪ್ರಾರಂಭಿಕ ಸ್ಥಳ ಹಾಗೂ ಅಂತ್ಯದ ಸ್ಥಳವನ್ನು ಗುರುತಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ಅಧಿಕಾರಿಗಳಿಂದ ಇದೇ ಸಂದರ್ಭದಲ್ಲಿ ಮಾಹಿತಿ ಪಡೆದುಕೊಂಡರು. ಬೆಟ್ಟದ ಸುತ್ತಲೂ ಸರ್ಕಾರಿ ನಿವೇಶನ ಅಥವಾ ಸ್ಥಳ ಲಭ್ಯವಿದ್ದಲ್ಲಿ ಗುರುತಿಸುವಂತೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಏಕಶಿಲಾ ಬೆಟ್ಟಕ್ಕೆ ರೋಪ್ ವೇ ಅಳವಡಿಸುವ ಸಂಬAಧ ಸ್ಥಳ ಪರಿಶೀಲನಾ ವರದಿಯನ್ನು ಪ್ರವಾಸೋದ್ಯಮ ಇಲಾಖೆಯ ಕೇಂದ್ರ ಕಚೇರಿಗೆ ಸಲ್ಲಿಸುವಂತೆ ಮೇ.ರೈಟ್ಸ್ ಸಂಸ್ಥೆಯ ಪ್ರತಿನಿಧಿಗಳಿಗೆ ಸೂಚಿಸಿದರು. ಈ ಬಗ್ಗೆ ನವದೆಹಲಿಯ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಮಹಾನಿರ್ದೇಶಕರೊಂದಿಗೆ ಚರ್ಚಿಸಿ ಶೀಘ್ರದಲ್ಲಿಯೇ ಗೂಗಲ್ ಮೀಟ್ ಸಭೆ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದರು. ಸ್ಥಳ ಪರಿಶೀಲನೆಯ ಸಂದರ್ಭದಲ್ಲಿ ರೈಟ್ಸ್ ಸಂಸ್ಥೆಯ ಪ್ರತಿನಿಧಿ ಸತೀಶ್ ವರ್ಮ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ರವೀಂದ್ರ ಸಿ.ಎ., ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಪ್ರಭುಲಿಂಗ.ಎಸ್ ತಳಕೇರಿ ಹಾಗೂ ಮತ್ತೀತರರು ಹಾಜರಿದ್ದರು. -------------

ಮಹಿಳೆಯರು ಸ್ವಾವಲಂಬಿ ಜೀವನ ಹೊಂದಬೇಕು: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ

ಬಳ್ಳಾರಿ,ಮಾ.28(ಕರ್ನಾಟಕ ವಾರ್ತೆ): ಮಹಿಳೆಯರು ಸ್ವ-ಸಹಾಯ ಗುಂಪುಗಳ ಮೂಲಕ ಕಿರು ಉದ್ಯಮಗಳನ್ನು ಆರಂಭಿಸಿ ಸ್ವಾವಲಂಬಿ ಜೀವನ ಕಟ್ಟಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು. ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ–ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮತ್ತು ಲಿಂಗತ್ವ ಪರಿವರ್ತಾನ ಅಭಿಯಾನ ಅಂಗವಾಗಿ ನಗರದ ಜಿಪಂ ನ ನಜೀರ್ ಸಾಬ್ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಅಂತರಾಷ್ಟಿçÃಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರವು ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದೆ. ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಸದುಪಯೋಗ ಪಡೆದುಕೊಂಡು ಅಭಿವೃದ್ಧಿ ಹೊಂದಬೇಕು ಎಂದು ತಿಳಿಸಿದರು. ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ಮಾತನಾಡಿ, 2025-26 ನೇ ಸಾಲಿನ ಆರ್ಥಿಕ ವರ್ಷದಲ್ಲಿ ಮಹಾತ್ಮಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಸಮುದಾಯಿತ ಕಾಮಗಾರಿಗಳು ಪ್ರಾರಂಭ ಆಗುತ್ತಿದ್ದು, ಉದ್ಯೋಗ ಚೀಟಿ ಹೊಂದಿದ ಕುಟುಂಬಗಳು ಮತ್ತು ವಿಶೇಷವಾಗಿ ಮಹಿಳೆಯರು ಬೇರೆ ಕಡೆ ಪಟ್ಟಣ, ನಗರ ಪ್ರದೇಶಗಳಿಗೆ ವಲಸೆ ಹೋಗದೆ ನಿಮ್ಮ ಗ್ರಾಮದಲ್ಲೇ ಪ್ರತಿ ಕುಟುಂಬವು 100 ದಿನಗಳ ವರೆಗೆ ನರೇಗಾ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ ಅವರು ಮಾತನಾಡಿ, ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ತೊಡಗಿದ್ದಾರೆ. ಸಾಧಿಸುವ ಛಲ ಹೊಂದಬೇಕು. ಯಾವುದೇ ಸಮಯದಲ್ಲಿ ಆತ್ಮಸ್ಥೆöÊರ್ಯ ಕಳೆದುಕೊಳ್ಳಬಾರದು ಎಂದು ಸಲಹೆ ನೀಡಿದರು. ಬಳಿಕ ಆಯುಷ್ ಇಲಾಖೆ ವೈದ್ಯರಾದ ಡಾ.ಮುಕ್ಕಣ್ಣ ಅವರು ಮಹಿಳೆಯರ ಆರೋಗ್ಯ, ಶುಚಿತ್ವ ಮತ್ತು ನೈರ್ಮಲ್ಯ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ರಚಿಸಿ ಉತ್ತಮ ಮತ್ತು ವಿಶೇಷವಾಗಿ ಕೆಲಸ ನಿರ್ವಹಿಸುತ್ತಿರುವ ವಿವಿಧ ತಾಲ್ಲೂಕುಗಳಿಗೆ ಮೂರು ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳು ಮತ್ತು ಮೂರು ಸ್ವ ಸಹಾಯ ಗುಂಪುಗಳಿಗೆ ಅವರು ನಿರ್ವಹಿಸುತ್ತಿರುವ ವಿವಿಧ ಚಟುವಟಿಕೆ, ಪ್ರಗತಿ ಸಾಧಿಸಿದ ಆಧಾರದ ಮೇರೆಗೆ ಪುರಸ್ಕಾರ, ಪ್ರಮಾಣ ಪತ್ರ ಮತ್ತು ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಸಂಡೂರು ತಾಲ್ಲೂಕಿನ ದರೋಜಿ ಗ್ರಾಮದ ಅಕ್ಕಮಹಾದೇವಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ- ಪ್ರಥಮ ಸ್ಥಾನ. ಕಂಪ್ಲಿ ತಾಲ್ಲೂಕಿನ ಮೆಟ್ರಿ ಗ್ರಾಮದ ಮೆಟ್ರಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ- ದ್ವಿತೀಯ ಸ್ಥಾನ. ಕುರುಗೋಡು ತಾಲ್ಲೂಕಿನ ಸೋಮಸಮುದ್ರ ಗ್ರಾಮದ ಕೊಟ್ಟೂರೇಶ್ವರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ- ತೃತೀಯ ಸ್ಥಾನ. ಆಯುಷ್ ಇಲಾಖೆಯ ವೈದ್ಯರಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ವೈ.ಪರಿಮಳ, ಉಪಕಾರ್ಯದರ್ಶಿ ಗಿರಿಜಾ ಶಂಕರ್, ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ, ಯೋಜನಾ ನಿರ್ದೇಶಕ ವಿನೋದ್ ಕುಮಾರ್, ಸಹಾಯಕ ನಿರ್ದೇಶಕ ಬಸವರಾಜ್ ಹಿರೇಮಠ್, ಕುರುಗೋಡು ತಾಪಂ ಇಒ ನಿರ್ಮಲಾ, ಸಂಡೂರು ತಾಪಂ ಇಒ ರೇಣುಕಾಚಾರ್ಯ, ಬಿಸಿ ಊಟ ಯೋಜನೆ ಇಒ ಕಸ್ತೂರಿ, ಎನ್‌ಆರ್‌ಎಲ್‌ಎಂ ಯೋಜನೆಯ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ರಾಜೇಂದ್ರ.ಎA ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಸಿಬ್ಬಂದಿಗಳು, ತಾಲ್ಲೂಕು ಮತ್ತು ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮಹಿಳೆಯರು, ಸ್ವ ಸಹಾಯ ಗುಂಪಿನ ಮಹಿಳೆಯರು, ವಿವಿಧ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿದ್ದರು. ------------

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ: ಅರ್ಜಿ ಆಹ್ವಾನ

ಬಳ್ಳಾರಿ,ಮಾ.28(ಕರ್ನಾಟಕ ವಾರ್ತೆ): ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿವಿಧ ವೃತ್ತಿಪರ ತರಬೇತಿ ಕೋರ್ಸ್ ಗಳಲ್ಲಿ ತರಬೇತಿ ಜೊತೆಗೆ ಶಿಷ್ಯವೇತನ ನೀಡಲು ಉದ್ದೇಶಿಸಲಾಗಿದ್ದು, ಪರಿಶಿಷ್ಟ ಪಂಗಡದ ಇಂಜಿನಿಯರಿAಗ್ ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ. ಐಐಎಸ್‌ಸಿ, ಐಐಟಿ ಮತ್ತು ಎನ್‌ಐಟಿ ಸಂಸ್ಥೆಗಳ ಮೂಲಕ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮಷಿನ್ ಲರ್ನಿಂಗ್ ತರಬೇತಿ ನೀಡಲಾಗುತ್ತಿದ್ದು, ಒಟ್ಟು 200 ಇಂಜಿನೀಯರಿAಗ್ ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದ್ದು, ರೂ.15000/- ಗಳ ಶಿಷ್ಯವೇತನ ಮತ್ತು ತರಬೇತಿ ನೀಡಲಾಗುತ್ತದೆ. ಅರ್ಹ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಗಳನ್ನು ನಗರದ ವಾಲ್ಮೀಕಿ ಭವನದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಬಳ್ಳಾರಿ, ಸಂಡೂರು, ಸಿರುಗುಪ್ಪ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗಳಿಂದ ಉಚಿತವಾಗಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಇದೇ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಏ.11 ಕೊನೆಯ ದಿನ ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂ.08392-242453 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಅನಾಮಧೇಯ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ

ಬಳ್ಳಾರಿ,ಮಾ.28(ಕರ್ನಾಟಕ ವಾರ್ತೆ): ತಾಲ್ಲೂಕಿನ ಚೆಳ್ಳಗುರ್ಕಿ ಗ್ರಾಮದ ರೂಪನಗುಡಿ ರಸ್ತೆಯ ರ‍್ರಿತಾತ ಜೀವ ಸಮಾಧಿ ಮಠದ ತೇರುಗಡ್ಡೆ ನಿಲ್ಲುವ ಶೆಡ್ ನ ಬಳಿ ಸುಮಾರು 65-70 ವರ್ಷದ ಅನಾಮಧೇಯ ವ್ಯಕ್ತಿಯು ವಯೋಸಹಜ ಖಾಯಿಲೆಯಿಂದ ಮಾ.27 ರಂದು ಮೃತಪಟ್ಟಿದ್ದು, ಮೃತನ ವಾರಸುದಾರರ ಬಗ್ಗೆ ಮಾಹಿತಿ ಇರುವುದಿಲ್ಲ. ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಪಿ.ಡಿ.ಹಳ್ಳಿ ಪೋಲಿಸ್ ಠಾಣೆಯ ಠಾಣಾಧಿಕಾರಿಗಳು ಮನವಿ ಮಾಡಿದ್ದಾರೆ. ಚಹರೆ: ಅಂದಾಜು 5.5 ಅಡಿ ಎತ್ತರ, ತೆಳ್ಳನೆ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ದುಂಡು ಮುಖ, ಬಿಳಿ ಕೂದಲು, ಮತ್ತು ಕೆಂಪು ಬಣ್ಣದ ಕರಿ ಗೀರಿಯುಳ್ಳ ಚೆಕ್ಸ್ ಶರ್ಟ್, ಬಿಳಿ ಬಣ್ಣದ ಪ್ಯಾಂಟ್, ಗ್ರೇ ಕಲರ್ ಒಳಉಡುಪು ಧರಿಸಿರುತ್ತಾನೆ. ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100, 102 ಬಳ್ಳಾರಿ ಎಸ್.ಪಿ ಅವರ ಕಚೇರಿ ದೂ.08392-258400, ಸಿರುಗುಪ್ಪ ಡಿ.ಎಸ್.ಪಿ ದೂ.08392-276000, ಪಿ.ಡಿ.ಹಳ್ಳಿ ವೃತ್ತ ಸಿ.ಪಿ.ಐ ಮೊ.08392-276461, ಪಿ.ಡಿ.ಹಳ್ಳಿ ಪೊಲೀಸ್ ಠಾಣೆ ದೂ.08392-265010 ಮತ್ತು ಪಿಎಸ್‌ಐ ಮೊ.9480803052 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ. -----------

ಗುರುವಾರ, ಮಾರ್ಚ್ 27, 2025

ನವೀಕರಣಗೊಳಿಸಿದ ಸುಸಜ್ಜಿತ ವಾರ್ಡ್ ಉದ್ಘಾಟಿಸಿದ ಉಪಮೇಯರ್ ಡಿ.ಸುಕುಂ | ಆರೋಗ್ಯ ಸೇವೆಗಳನ್ನು ತಪ್ಪದೇ ಪಡೆಯುವಂತೆ ಸಲಹೆ

ಬಳ್ಳಾರಿ,ಮಾ.27(ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರವು ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸುತ್ತಿದ್ದು, ನಗರ ಪ್ರದೇಶಗಳಲ್ಲಿರುವ ದುರ್ಬಲ ವರ್ಗದವರು, ಕಡುಬಡವರು ಸೇರಿದಂತೆ ಎಲ್ಲರೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ಸೇವೆ ಪಡೆದುಕೊಳ್ಳಬೇಕು ಎಂದು ಮಹಾನಗರ ಪಾಲಿಕೆಯ ಉಪಮಹಾಪೌರರಾದ ಡಿ.ಸುಕುಂ ಅವರು ಹೇಳಿದರು. ಗುರುವಾರದಂದು ಬಳ್ಳಾರಿ ನಗರದ ನಾಯ್ಡು ಸ್ಟಿçÃಟ್‌ನ ಕೌಲಬಜಾರ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಎಬಿಎಆರ್‌ಕೆ, ಕಾಯಕಲ್ಪ ಅಡಿ ಲಭ್ಯವಿರುವ ಅನುದಾನದಡಿ ನವೀಕರಣಗೊಳಿಸಿದ ಸುಸಜ್ಜಿತ ವಾರ್ಡ್ನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರವು ಜನತೆಯ ಆರೋಗ್ಯದ ಸುರಕ್ಷತೆಗೆ ಹೆಚ್ಚು ಒತ್ತು ನೀಡುತ್ತಿದೆ. ರಕ್ತದೊತ್ತಡ, ಸಕ್ಕರೆ ಕಾಯಿಲೆ, ಕ್ಯಾನ್ಸರ್‌ನಂತಹ ಕಾಯಿಲೆಗಳನ್ನು ಪತ್ತೆಹಚ್ಚಲು ಅಗತ್ಯ ಪರಿಕರಗಳನ್ನು ಒದಗಿಸುತ್ತಿದೆ. ಜನರು ನಿಯಮಿತವಾಗಿ ಸಕಾಲದಲ್ಲಿ ಪರೀಕ್ಷಿಸಿಕೊಂಡು ಆರೋಗ್ಯದಿಂದಿರಬೇಕು ಎಂದು ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಮಾತನಾಡಿ, ಬಳ್ಳಾರಿ ಮತ್ತು ಸಿರುಗುಪ್ಪ ತಾಲ್ಲೂಕುಗಳಲ್ಲಿ ಒಟ್ಟು 9 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಬಳ್ಳಾರಿ ನಗರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಹ ಗುಣಮಟ್ಟದ ಆರೋಗ್ಯ ಸೇವೆಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು. ಜ್ವರ ಪ್ರಕರಣಗಳ ಪತ್ತೆಗಾಗಿ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ರಕ್ತ ಪರೀಕ್ಷೆ ಕೈಗೊಳ್ಳುವ ಸೌಲಭ್ಯ ಕಲ್ಪಿಸಿ ಸೊಳ್ಳೆಯ ಕಚ್ಚುವಿಕೆಯಿಂದ ಹರಡುವ ಡೆಂಗ್ಯೂ, ಚಿಕಿನ್ ಗುನ್ಯಾ, ಮಲೇರಿಯಾ ಮುಂತಾದವುಗಳ ನಿಯಂತ್ರಣ ಜೊತೆಗೆ ಟೈಪಾಯಿಡ್ ಗುರ್ತಿಸುವಿಕೆಯನ್ನು ಸಹ ಮಾಡಲಾಗುತ್ತಿದೆ. ಯಾವುದೇ ಜ್ವರವಿದ್ದರೂ ಸಹ ನಿರ್ಲಕ್ಷ ಮಾಡದೇ ಆಸ್ಪತ್ರೆಗೆ ಭೇಟಿ ನೀಡಿ ಜ್ವರದ ಸ್ವರೂಪ ತಿಳಿದುಕೊಂಡು ಚಿಕಿತ್ಸೆ ಪಡೆಯಲು ಮುಂದೆ ಬರಬೇಕು ಎಂದು ತಿಳಿಸಿದರು. ಗರ್ಭಿಣಿಯರಿಗೆ ರಕ್ತಹೀನತೆ ಕಂಡುಬAದಲ್ಲಿ ಆರೋಗ್ಯ ಕೇಂದ್ರದಲ್ಲಿಯೇ ಐರನ್ ಸುಕ್ರೋಸ್ ಚುಚ್ಚುಮದ್ದನ್ನು ನೀಡಲಾಗುತ್ತಿದ್ದು, ಕನಿಷ್ಟ 5 ಬಾರಿ ಒದಗಿಸುವ ಹಾಗೂ ಕುಟುಂಬ ಕಲ್ಯಾಣ ತಾತ್ಕಾಲಿಕ ವಿಧಾನಗಳಾದ ವಂಕಿ ಅಳವಡಿಸಿಕೆ, ನುಂಗುವ ಮಾತ್ರೆಗಳನ್ನು ಉಚಿತವಾಗಿ ಒದಗಿಸಲಾಗುತ್ತಿದ್ದು, ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿನಂತಿಸಿದರು. ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಔಷಧಿಗಳನ್ನು ದಾಸ್ತಾನು ಮಾಡಲಾಗಿದ್ದು, ಬೇಸಿಗೆ ಹಿನ್ನಲೆಯಲ್ಲಿ ಮಧ್ಯಾಹ್ನ 12 ರಿಂದ 3 ರ ಅವಧಿಯಲ್ಲಿ ಮನೆಯಲ್ಲಿಯೇ ಇರಬೇಕು. ದೇಹದ ನಿರ್ಜಲೀಕರಣ ತಡೆಯಲು ನಿಂಬುಪಾನಕ, ಎಳೆ ನೀರು, ಹಣ್ಣಿನ ರಸ ಸೇವಿಸಬಹುದು ಹಾಗೂ ಗರ್ಭಿಣಿ-ಮಕ್ಕಳು ಸೇರಿದಂತೆ ವಯಸ್ಕರನ್ನು ಹೆಚ್ಚಿನ ಕಾಳಜಿ ವಹಿಸಲು ಹಾಗೂ ಆಸ್ಪತ್ರೆಗೆ ಬರುವ ಜನತೆಯು ಆರೋಗ್ಯ ಕೇಂದ್ರಗಳಲ್ಲಿ ಸಿದ್ದವಾಗಿಟ್ಟಿರುವ ಓ.ಆರ್.ಎಸ್ ದ್ರಾವಣವನ್ನು ಸೇವಿಸುವ ಮೂಲಕ ನಿರ್ಜಲೀಕರಣ ತಡೆಯಲು ಸಹಾಯಕವಾಗುತ್ತಿದ್ದು, ಇದರ ಸದುಪಯೋಗ ಪಡೆಯುವಂತೆ ಕೋರಿದರು. *ಕಿಲ್ಕಾರಿ:* ಗರ್ಭಿಣಿ ಎಂದು ತಿಳಿದ ದಿನದಿಂದ ಹಾಗೂ ಮಗುವಿನ ವಯಸ್ಸು ಒಂದು ವರ್ಷದೊಳಗೆ ಇರುವ ಎಲ್ಲಾ ತಾಯಂದರಿಗೆ ಕೇಂದ್ರ ಸರ್ಕಾರವು ದೂರವಾಣಿ ಕರೆಯ ಮೂಲಕ ಯೋಗ ಕ್ಷೇಮ ವಿಚಾರಿಸುವ ಆಶಯದೊಂದಿಗೆ ತಾಯಿ ಕಾರ್ಡ್ ನಲ್ಲಿ ನಮೂದಿತಗೊಂಡಿರುವ ತಮ್ಮ ಮೊಬೈಲ್ ಸಂಖ್ಯೆಗೆ 0124-4451660 ಸಂಖ್ಯೆಯಿAದ ಕರೆ ಮಾಡುವ ಮೂಲಕ ಪ್ರತಿ ಮಂಗಳವಾರ ಗರ್ಭಿಣಿಯರ ಜೊತೆ ಮಾತನಾಡಿ ಆರೋಗ್ಯ ವಿಚಾರಿಸುವ ಒಂದು ಕಾಳಜಿಯ ವ್ಯವಸ್ಥೆ ಇದಾಗಿದ್ದು, ಕರೆ ಬಂದಾಗ ಅವರೊಂದಿಗೆ ಮಾತನಾಡುವ ಮೂಲಕ ತಾಯ್ತನದ ಸುರಕ್ಷತೆ ಬಗ್ಗೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಮಾತನಾಡುವ ಅವಕಾಶ ಪಡೆಯಬೇಕು ಎಂದು ವಿನಂತಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ರಿಯಾಜ್ ಅಹಮದ್, ಆಡಳಿತ ವೈದ್ಯಾಧಿಕಾರಿ ಡಾ.ನರಸಿಂಹಮೂರ್ತಿ, ಡಾ.ಮುಜಾಮಿಲ್ಲ ಫೀರ್‌ದೋಸ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಅನೀಫ್ ಸೇರಿದಂತೆ ಸಿಬ್ಬಂದಿ, ಇತರರು ಇದ್ದರು. ------------

ಏ.02 ರಂದು ದೇವರದಾಸಿಮಯ್ಯ ಜಯಂತಿ ಕಾರ್ಯಕ್ರಮ

ಬಳ್ಳಾರಿ,ಮಾ.27(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಆದ್ಯ ವಚನಕಾರ ನೇಕಾರ ಸಂತ ದೇವರದಾಸಿಮಯ್ಯ ಜಯಂತಿ ಕಾರ್ಯಕ್ರಮವನ್ನು ಏ.02 ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಹೊಂಗಿರಣ ಸಾಂಸ್ಕೃತಿಕ ಸಮುಚ್ಚಯದಲ್ಲಿ ಆಯೋಜಿಸಲಾಗಿದೆ. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಾಸಕರಾದ ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಜಿಲ್ಲಾ ನೇಕಾರರ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಸಿ.ದೇವಾನಂದ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಬಿ.ಸಿದ್ಧಲಿಂಗಪ್ಪ ಅವರು ಜಯಂತಿ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಬಳ್ಳಾರಿಯ ಅಮಾತಿ ಬಸವರಾಜ ತಂಡದಿAದ ವಚನ ಸಂಗೀತ ಇರಲಿದೆ. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ. ------------

ಬೂತ್ ಮಟ್ಟದ ಅಧಿಕಾರಿಗಳಿಗೆ ತರಬೇತಿ ಆಯೋಜನೆ

ಬಳ್ಳಾರಿ,ಮಾ.27(ಕರ್ನಾಟಕ ವಾರ್ತೆ): ನವದೆಹಲಿಯ ಇಂಡಿಯಾ ಇಂಟರ್ ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಡೆಮಾಕ್ರಸಿ ಮತ್ತು ಎಲೆಕ್ಷನ್ ಮ್ಯಾನೇಜ್ ಮೆಂಟ್ ನಲ್ಲಿ ಕೇಂದ್ರ ಚುನಾವಣಾ ಆಯುಕ್ತರಾದ ಡಾ.ವಿವೇಕ್ ಜೋಶಿ ಅವರೊಂದಿಗೆ ಬೂತ್ ಮಟ್ಟದ ಅಧಿಕಾರಿಗಳ ಮೊದಲ ತರಬೇತಿಯನ್ನು ಬುಧವಾರ ಹಮ್ಮಿಕೊಳ್ಳಲಾಗಿತ್ತು. ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರು ತರಬೇತಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮುಂದಿನ ಕೆಲವು ವರ್ಷಗಳಲ್ಲಿ 10 ಮತಗಟ್ಟೆಗಳಿಗೆ ಸರಾಸರಿ ಒಂದು ಬಿಎಲ್‌ಒ ಹೊಂದಿರುವ 1 ಲಕ್ಷಕ್ಕೂ ಹೆಚ್ಚು ಬಿಎಲ್‌ಒ ಗಳಿಗೆ ಅಂತಹ ತರಬೇತಿ ಕಾರ್ಯಕ್ರಮಗಳಲ್ಲಿ ತರಬೇತಿ ನೀಡಲಾಗುವುದು. ಈ ಉತ್ತಮ ತರಬೇತಿ ಪಡೆದ ಬಿಎಲ್‌ಒ ಗಳು ದೇಶಾದ್ಯಂತ ಅಸೆಂಬ್ಲಿ ಮಟ್ಟದ ಮಾಸ್ಟರ್ ತರಬೇತುದಾರರ ಒಂದು ತುಕಡಿಯನ್ನು ರಚಿಸಿ, 100 ಕೋಟಿ ಮತದಾರರು ಮತ್ತು ಆಯೋಗದ ನಡುವಿನ ಮೊದಲ ಮತ್ತು ಪ್ರಮುಖ ಸಂಪರ್ಕ ಸಾಧನವಾಗಿದೆ ಎಂದು ಹೇಳಿದರು. ಈ ವಿಶಿಷ್ಟ ಸಾಮರ್ಥ್ಯ ವೃದ್ಧಿ ಕಾರ್ಯಕ್ರಮವು ಹಂತ ಹಂತವಾಗಿ ಮುಂದುವರಿಯಲಿದ್ದು, ಪ್ರಸ್ತುತ, ಬಿಹಾರ, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನ 109 ಬಿಎಲ್‌ಒ ಗಳು ಈ 2 ದಿನಗಳ ವಸತಿ ತರಬೇತಿ ಕಾರ್ಯಕ್ರಮದಲ್ಲಿ ಬಿಹಾರ, ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ಪುದುಚೇರಿ ಮತ್ತು ತಮಿಳುನಾಡಿನ 24 ಇಆರ್‌ಒ ಗಳು ಮತ್ತು 13 ಡಿಇಒಗಳೊಂದಿಗೆ ಭಾಗವಹಿಸುತ್ತಿದ್ದಾರೆ. ಬಿಎಲ್‌ಒ ಗಳು ರಾಜ್ಯ ಸರ್ಕಾರಿ ಅಧಿಕಾರಿಗಳಾಗಿದ್ದು, ಜಿಲ್ಲಾ ಚುನಾವಣಾ ಅಧಿಕಾರಿಗಳ (ಡಿಇಒ) ಅನುಮೋದನೆಯ ನಂತರ ಚುನಾವಣಾ ನೋಂದಣಿ ಅಧಿಕಾರಿಗಳು (ಇಆರ್‌ಒ) ನೇಮಕ ಮಾಡುತ್ತಾರೆ ಎಂದು ತಿಳಿಸಿದರು. ಮತದಾರರ ಪಟ್ಟಿಯ ದೋಷ-ಮುಕ್ತ ನವೀಕರಣದಲ್ಲಿ ಇಆಆರ್‌ಒ ಗಳು ಮತ್ತು ಬಿಎಲ್‌ಒ ಗಳ ನಿರ್ಣಾಯಕ ಪಾತ್ರವನ್ನು ಗುರುತಿಸಿದ ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್, ರಾಜ್ಯ ಸರ್ಕಾರಗಳು ಎಸ್ಡಿಎಂ ಮಟ್ಟದ ಅಥವಾ ಸಮಾನ ಅಧಿಕಾರಿಗಳನ್ನು ಇಆರ್‌ಒಗಳಾಗಿ ನಾಮನಿರ್ದೇಶನ ಮಾಡಬೇಕು, ನಂತರ ಅವರು ತಮ್ಮ ಜೇಷ್ಠತೆಯನ್ನು ಪರಿಗಣಿಸಿ ಬಿಎಲ್‌ಒ ಗಳನ್ನು ನೇಮಿಸಬೇಕು ಎಂದರು. ಸAವಿಧಾನದ 326 ನೇ ವಿಧಿ ಮತ್ತು ಆರ್ಪಿ ಕಾಯ್ದೆ 1950 ರ ಸೆಕ್ಷನ್ 20 ರ ಪ್ರಕಾರ, 18 ವರ್ಷಕ್ಕಿಂತ ಮೇಲ್ಪಟ್ಟ ಮತ್ತು ಕ್ಷೇತ್ರದಲ್ಲಿ ಸಾಮಾನ್ಯವಾಗಿ ವಾಸಿಸುವ ಭಾರತದ ನಾಗರಿಕರನ್ನು ಮಾತ್ರ ಮತದಾರರಾಗಿ ನೋಂದಾಯಿಸಿಕೊಳ್ಳಬಹುದು ಎಂದು ಅವರು ಹೇಳಿದರು. ಎಲ್ಲಾ ಸಿಇಒಗಳು, ಡಿಇಒಗಳು, ಇಆರ್‌ಒ ಗಳು ತಮ್ಮ ಮಟ್ಟದಲ್ಲಿ ಸರ್ವಪಕ್ಷ ಸಭೆಗಳನ್ನು ನಡೆಸಬೇಕು ಮತ್ತು ಮತದಾರರ ಪಟ್ಟಿಯ ಸರಿಯಾದ ನವೀಕರಣ ಸೇರಿದಂತೆ ಅವರ ಅಧಿಕಾರ ವ್ಯಾಪ್ತಿಗೆ ಸಂಬAಧಿಸಿದ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಅವರು ನಿರ್ದೇಶಿಸಿದರು. ಇಆರ್‌ಒ ಅಥವಾ ಬಿಎಲ್‌ಒ ವಿರುದ್ಧದ ಯಾವುದೇ ದೂರುಗಳ ಮೇಲೆ ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ ಅವರು, ಮತದಾರರ ಪಟ್ಟಿಯ ನವೀಕರಣಕ್ಕಾಗಿ ಮನೆ-ಮನೆ ಪರಿಶೀಲನೆಯ ಸಮಯದಲ್ಲಿ ಎಲ್ಲಾ ಬಿಎಲ್‌ಒ ಗಳು ಮತದಾರರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಆಯೋಗವು ಸುಮಾರು 100 ಕೋಟಿ ಮತದಾರರೊಂದಿಗೆ ಇದೆ ಮತ್ತು ಯಾವಾಗಲೂ ನಿಲ್ಲುತ್ತದೆ ಎಂದು ಅವರು ಹೇಳಿದರು. ------------

ಐಎಎಸ್ ಮತ್ತು ಕೆಎಎಸ್ ಪರೀಕ್ಷೆಗಳಿಗೆೆ ತರಬೇತಿ

ಬಳ್ಳಾರಿ,ಮಾ.27(ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕ ಸೇವಾ ಆಯೋಗದ ಐಎಎಸ್ ಹಾಗೂ ಕರ್ನಾಟಕ ಲೋಕ ಸೇವಾ ಆಯೋಗದ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನೀಡಲು ನಿರ್ಧರಿಸಲಾಗಿದೆ. ಆಸಕ್ತರು ಏ.02 ರೊಳಗಾಗಿ ಬೆಳಿಗ್ಗೆ 10 ಗಂಟೆಯಿAದ ಸಂಜೆ 04.30 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ದೂ.0821-2515944 ಗೆ ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವÀ ಪ್ರೊ.ಕೆ.ಬಿ ಪ್ರವೀಣ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾ.28 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಮಾ.27(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ಅಳವಡಿಸುವ ಕಾರ್ಯ ಕೈಗೊಳ್ಳುತ್ತಿರುವುರಿಂದÀ ಮಾ.28 ರಂದು ಮಧ್ಯಾಹ್ನ 02 ಗಂಟೆಯಿAದ ಸಂಜೆ 06 ಗಂಟೆಯವರೆಗೆ ನಗರದ ಫೀಡರ್-02 ರ ವ್ಯಾಪ್ತಿಯ ಗಾಂಧಿನಗರ 1 ನೇ ಕ್ರಾಸ್ ಮತ್ತು 2ನೇ ಕ್ರಾಸ್ ಏರಿಯಾಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಏ.02 ರಂದು ಪೊಲೀಸ್ ಧ್ವಜ ದಿನಾಚರಣೆ

ಬಳ್ಳಾರಿ,ಮಾ.27(ಕರ್ನಾಟಕ ವಾರ್ತೆ): ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಏ.02 ರಂದು ಬೆಳಿಗ್ಗೆ 08 ಗಂಟೆಗೆ ನಗರದ ಸಶಸ್ತç ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕುಡುತಿನಿ ಪೋಲಿಸ್ ಠಾಣೆಯ ನಿವೃತ್ತ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕೆ.ವಿರುಪಾಕ್ಷಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕರಾದ ಬಿ.ಎಸ್.ಲೋಕೇಶ್ ಕುಮಾರ್ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ವಿ.ಜೆ.ಶೋಭಾರಾಣಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕೆ.ಪಿ.ರವಿಕುಮಾರ್, ಎಸ್.ನವೀನ್‌ಕುಮಾರ್ ಸೇರಿದಂತೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ವರ್ಗ ಉಪಸ್ಥಿತರಿರುವರು ಎಂದು ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ. ----------

ಜರ್ಮನಿಯ ಲಿಂಡೌ ನೊಬೆಲ್ ಸಭೆಗೆ ವಿಶ್ರೀಕೃವಿವಿಯ ಇಬ್ಬರು ಆಯ್ಕೆ

ಬಳ್ಳಾರಿ,ಮಾ.27(ಕರ್ನಾಟಕ ವಾರ್ತೆ): ಜರ್ಮನಿಯ ಲಿಂಡೌನಲ್ಲಿ ಜೂನ್ 29ರಿಂದ ಜುಲೈ 4ರವರೆಗೆ ಜರುಗಲಿರುವ ಪ್ರತಿಷ್ಠಿತ ಅಂತರಾಷ್ಟಿçÃಯ ಲಿಂಡೌ ನೊಬೆಲ್ ಪುರಸ್ಕೃತರ ಸಭೆಗೆ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ರಸಾಯನಶಾಸ್ತç ವಿಭಾಗದ ಸಂಶೋಧನಾ ವಿದ್ಯಾರ್ಥಿಗಳಾದ ಗೌತಮಿ ಪಾಟೀಲ್ ಮತ್ತು ಡಾ.ನಸೀಮ್ ಕೌಸರ್ ಆಯ್ಕೆಯಾಗಿದ್ದಾರೆ. ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ಡಿಎಸ್‌ಟಿ ದೇಶವ್ಯಾಪಿ ಆಯ್ಕೆ ಮಾಡಿರುವ ಒಟ್ಟು 29 ಯುವ ವಿಜ್ಞಾನಿಗಳ ಪೈಕಿ ಬಳ್ಳಾರಿಯ ಇಬ್ಬರು ವಿದ್ಯಾರ್ಥಿಗಳು ಸ್ಥಾನ ಪಡೆದಿರುವುದು ವಿಶೇಷ. ಪ್ರತಿವರ್ಷ ಜರುಗುವ ಲಿಂಡೌ ಜಾಗತಿಕ ಸಭೆಯಲ್ಲಿ ವಿಶ್ವದ ಆಯ್ದ 600 ಯುವ ವಿಜ್ಞಾನಿಗಳನ್ನು ಆಹ್ವಾನಿಸಿ ನೊಬೆಲ್ ಪ್ರಶಸ್ತಿ ಪುರಸ್ಕೃತ ದಿಗ್ಗಜರೊಂದಿಗೆ ಚರ್ಚಾಕೂಟ, ದುಂಡು ಮೇಜಿನ ಪರಿಷತ್ತುಗಳನ್ನು ನಡೆಸುತ್ತದೆ. 74ನೇ ಆವೃತ್ತಿಯ ಸಮ್ಮೇಳನವು ಈ ಬಾರಿ ರಸಾಯನಶಾಸ್ತç ವಿಷಯಕ್ಕೆ ಮೀಸಲಿಟ್ಟಿದ್ದು, ಆಯ್ಕೆಗೊಂಡಿರುವ ವಿದ್ಯಾರ್ಥಿಗಳ ಪ್ರವಾಸ ಹಾಗೂ ಇನ್ನಿತರ ಖರ್ಚು, ವೆಚ್ಚಗಳನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ (ಡಿಎಸ್‌ಟಿ) ನಿಭಾಯಿಸಲಿದೆ. ಈ ಸಂಶೋಧನಾರ್ಥಿಗಳು ವಿವಿಯ ರಸಾಯನಶಾಸ್ತç ವಿಭಾಗದ ಪ್ರಾಧ್ಯಾಪಕರಾದ ಪ್ರೊ.ಕೆ.ಎಸ್ ಲೋಕೇಶ್ ಇವರ ಮಾರ್ಗದರ್ಶನದಲ್ಲಿ ಪಿಹೆಚ್‌ಡಿ ಮಾಡುತ್ತಿದ್ದಾರೆ. ಲಿಂಡೌ ನೊಬೆಲ್ ಸಭೆಗೆ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ವಿವಿಯ ಕುಲಪತಿಗಳಾದ ಪ್ರೊ.ಎಂ ಮುನಿರಾಜು, ಕುಲಸಚಿವರಾದ ಎಸ್.ಎನ್ ರುದ್ರೇಶ್ ಹಾಗೂ ಮೌಲ್ಯಮಾಪನ ಕುಲಸಚಿವರಾದ ಪ್ರೊ.ಎನ್.ಎಂ. ಸಾಲಿ ಹಾಗೂ ವಿಭಾಗದ ಸಿಬ್ಬಂದಿ ಶುಭಾಶಯ ತಿಳಿಸಿದ್ದಾರೆ. -------------

ಬಳ್ಳಾರಿ ಮಹಾನಗರ ಪಾಲಿಕೆ: ಆಸ್ತಿ ತೆರಿಗೆ ಪಾವತಿಸಿ

ಬಳ್ಳಾರಿ,ಮಾ.27(ಕರ್ನಾಟಕ ವಾರ್ತೆ): ಬಳ್ಳಾರಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಆಸ್ತಿ ಮಾಲೀಕರು ನಿಗದಿತ ಅವಧಿಯಲ್ಲಿ ಆಸ್ತಿ ತೆರಿಗೆ ಪಾವತಿಸಬೇಕು ಎಂದು ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ, ಕರ್ನಾಟಕ ಪೌರನಿಗಮಗಳ ಅಧಿನಿಯಮ 1976 ನಿಯಮ 108, 109 ಮತ್ತು 109ಎ ನಿಯಮಗಳಿಗೆ ತಿದ್ದುಪಡಿ ಮಾಡಿ ಆಯಾ ವರ್ಷಕ್ಕೆ ಉಪನೊಂದಣಾಧಿಕಾರಿ, ಉಪನೊಂದಣಿ ಕಚೇರಿ ಇವರ ಮಾರುಕಟ್ಟೆ ಮಾರ್ಗಸೂಚಿ ಬೆಲೆಗಳು ಪರಿಷ್ಕರಣೆ ಆಗದಿದ್ದಲ್ಲಿ ಕನಿಷ್ಠ ಶೇ.3 ಕ್ಕಿಂತ ಕಡಿಮೆ ಇಲ್ಲದಂತೆ ಮತ್ತು ಗರಿಷ್ಠ ಶೇ.5 ಕ್ಕಿಂತ ಹೆಚ್ಚಿಗೆ ಮೀರದಂತೆ ಆಸ್ತಿ ತೆರಿಗೆಯನ್ನು ವಿಧಿಸಿ ವಸೂಲಿ ಮಾಡಲು ತಿದ್ದುಪಡಿ ಮಾಡಲಾಗಿದೆ. 2025-26ನೇ ಸಾಲಿಗೆ ಮಾರುಕಟ್ಟೆ ಮೌಲ್ಯದ ಮಾರ್ಗಸೂಚಿ ಬೆಲೆ ಪರಿಷ್ಕರಣೆ ಮಾಡಿರುವುದಿಲ್ಲ ಎಂದು ತಿಳಿಸಿರುವ ಪ್ರಯುಕ್ತ 2025 ರ ಏ.01 ರಿಂದ 2026 ರ ಮಾ.31 ರ ವರೆಗೆ 2024-25ನೇ ಸಾಲಿನ ಆಸ್ತಿ ತೆರಿಗೆಯ ಮೇಲೆ ಶೇ.3 ರಷ್ಟು ನಿಗದಿಪಡಿಸಿ ಹೆಚ್ಚಿಸಿ, 2025-26ನೇ ಸಾಲಿಗೆ ಆಸ್ತಿ ತೆರಿಗೆಯನ್ನು ನಿಗದಿಪಡಿಸಿಕೊಳ್ಳಲು ಮಹಾಪೌರರ ಅಧ್ಯಕ್ಷತೆಯಲ್ಲಿ ಜರುಗಿದ ಸಾಮಾನ್ಯ ಸಭೆಯಲ್ಲಿ ಹಾಜರಿದ್ದು ಸದಸ್ಯರ ಸರ್ವಾನುಮತದಿಂದ ಒಪ್ಪಿ ತೀರ್ಮಾನಿಸಲಾಗಿದೆ. ಹಾಗಾಗಿ ಸಾರ್ವಜನಿಕರು ನಿಗದಿತ ಅವಧಿಯಲ್ಲಿ ಆಸ್ತಿ ತೆರಿಗೆಯನ್ನು ಪಾವತಿಸಿ ಬಳ್ಳಾರಿ ಮಹಾನಗರ ಪಾಲಿಕೆಯ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಆಯುಕ್ತರು ಕೋರಿದ್ದಾರೆ. -------------

ಬುಧವಾರ, ಮಾರ್ಚ್ 26, 2025

ಅಗ್ನಿವೀರ್ ಯೋಜನೆಯಡಿ ವಿವಿಧ ಹುದ್ದೆಗಳಿಗಾಗಿ ನೇಮಕಾತಿ

ಬಳ್ಳಾರಿ,ಮಾ.26(ಕರ್ನಾಟಕ ವಾರ್ತೆ): ಭಾರತೀಯ ಸೇನೆ ವತಿಯಿಂದ ಅಗ್ನಿವೀರ್ ಯೋಜನೆಯಡಿ ಭಾರತೀಯ ಸೇನೆಯಲ್ಲಿ ಸೇರಲು ವಿವಿಧ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, 17 ವರ್ಷ 6 ತಿಂಗಳು ತುಂಬಿದ ಹಾಗೂ 21 ವರ್ಷದೊಳಗಿನ ವಯೋಮಿತಿಯ ಅಭ್ಯರ್ಥಿಗಳು ನೇಮಕಾತಿ ರ‍್ಯಾಲಿಯಲ್ಲಿ ಭಾಗವಹಿಸಬಹುದು. 8ನೇ ತರಗತಿಯಿಂದ ದ್ವಿತೀಯ ಪಿಯುಸಿ, ಐಟಿಐ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ನೇಮಕಾತಿ ರ‍್ಯಾಲಿಯಲ್ಲಿ ಭಾಗವಹಿಸಬಹುದಾಗಿದ್ದು, ನೇಮಕಾತಿ ರ‍್ಯಾಲಿಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ. *ಹುದ್ದೆ:* ಅಗ್ನಿವೀರ್ (ಸಾಮಾನ್ಯ ಕರ್ತವ್ಯ) ಎಲ್ಲಾ ಶಸ್ತಾçಸ್ತçಗಳು, ಅಗ್ನಿವೀರ್ (ಸಾಮಾನ್ಯ ಕರ್ತವ್ಯ) (ಮಹಿಳಾ ಮಿಲಿಟರಿ ಪೊಲೀಸ್), ಅಗ್ನಿವೀರ್ (ತಾಂತ್ರಿಕ) (ಎಲ್ಲಾ ಶಸ್ತಾçಸ್ತçಗಳು), ಅಗ್ನಿವೀರ್ ಆಫೀಸ್ ಅಸಿಸ್ಟೆಂಟ್ (ಗುಮಾಸ್ತ)/ಸ್ಟೋರ್ ಕೀಪರ್ ಟೆಕ್ನಿಕಲ್ (ಎಲ್ಲಾ ಆರ್ಮ್ಸ್), ಅಗ್ನಿವೀರ್ ಟ್ರೇಡ್ಸ್ಮ್ಯಾನ್ 10 ನೇ ಪಾಸ್(ಎಲ್ಲಾ ಆರ್ಮ್ಸ್), ಅಗ್ನಿವೀರ್ ಟ್ರೇಡ್ಸ್ಮ್ಯಾನ್ 8 ನೇ ಪಾಸ್(ಎಲ್ಲಾ ಆರ್ಮ್ಸ್). *ಮಹಿಳಾ ಸಂಸದರಿಗೆ ಮಾತ್ರ:* ಸರಂಜಾಮುಗಳಲ್ಲಿ ಮರಣ ಹೊಂದಿದ ರಕ್ಷಣಾ ಸಿಬ್ಬಂದಿಯ ವಿಧವೆಯರಿಗೆ ಸಂಬAಧಿಸಿದAತೆ ಗರಿಷ್ಠ ವಯಸ್ಸಿನ ಮಿತಿಯನ್ನು 30 ವರ್ಷಗಳವರೆಗೆ ಸಡಿಲಗೊಳಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ.08392-294230 ಅಥವಾ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಯ ಅಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ವಿಶ್ವ ಜಲ ದಿನ ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್ ಕರೆ | ನೀರು ಸಂರಕ್ಷಣೆ ನಮ್ಮೆಲ್ಲರ ಹೊಣೆ

ಬಳ್ಳಾರಿ,ಮಾ.26(ಕರ್ನಾಟಕ ವಾರ್ತೆ): ನಿಸರ್ಗ ಕೊಡುಗೆಯಾದ ನೀರು ಅತ್ಯಮೂಲ್ಯವಾದದ್ದು. ಎಲ್ಲರೂ ಮಿತವಾಗಿ ಬಳಸುವ ಮೂಲಕ ಸಂರಕ್ಷಿಸೋಣ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ಹೇಳಿದರು. ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ವೀರಶೈವ ಮಹಾವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ವೀರಶೈವ ಮಹಾವಿದ್ಯಾಲಯದ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ವಿಶ್ವ ಜಲ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಂವಿಧಾನವು ನಮಗೆ ಮೂಲಭೂತ ಹಕ್ಕುಗಳನ್ನು ನೀಡುವುದರ ಜೊತೆಗೆ ಮೂಲಭೂತ ಕರ್ತವ್ಯಗಳನ್ನು ಸಹ ನೀಡಿದೆ. ಅದರಲ್ಲಿ ಪರಿಸರ ರಕ್ಷಣೆ ಜೊತೆಗೆ ನೀರು ಸಂರಕ್ಷಣೆಯೂ ಒಳಗೊಂಡಿದೆ. ಸುಸ್ಥಿರ ಅಭಿವೃದ್ಧಿಯ ಮೂಲಕ ನೀರನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೂ ನೀಡೋಣ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗಿ ಕಂಡುಬರುತ್ತಿದೆ. ಕುಡಿಯುವ ನೀರು ಪೋಲಾಗದಂತೆ ನೋಡಿಕೊಳ್ಳಬೇಕು. ಏ.10 ರವರೆಗೆ ತುಂಗಭದ್ರ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಯಲಿದ್ದು, ಕೃಷಿ ಚಟುವಟಿಕೆಗಳಿಗೂ ಆದ್ಯತೆ ನೀಡಬೇಕಾಗುತ್ತದೆ. ಹಾಗಾಗಿ ನೀರನ್ನು ಮಿತವಾಗಿ ಬಳಸಲು ಸೂಚಿಸಬೇಕು ಎಂದು ಸಲಹೆ ನೀಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಮಾತನಾಡಿ, ಸಕಲ ಜೀವರಾಶಿಗಳಿಗೆ ನೀರು ಬಹುಮುಖ್ಯವಾಗಿದೆ. ಭೂ ಮಂಡಲದಲ್ಲಿ ಇರುವ ನೀರಿನ ಪ್ರಮಾಣದಲ್ಲಿ ಶೇ.97ರಷ್ಟು ಉಪ್ಪು ನೀರು ಇದ್ದು, ಶೇ3.ರಷ್ಟು ಮಾತ್ರ ಸಿಹಿ ನೀರು ಬಳಕೆಗೆ ಉಪಯುಕ್ತವಾಗಿದೆ. ಇದರಲ್ಲಿ ಕೇವಲ ಶೇ.0.07ರಷ್ಟು ನೀರು ಕುಡಿಯಲು ಬಳಕೆಯಾಗುತ್ತಿದೆ. ಉಳಿದ ನೀರು ಘನ ರೂಪದಿ ಹಿಮಪಾತಗಳಲ್ಲಿದೆ ಎಂದು ಅವರು ಹೇಳಿದರು. ಬೇಸಿಗೆ ಬಂತೆAದರೇ ಕುಡಿಯುವ ನೀರಿನ ಬರ ಎದುರಾಗಿ ಹನಿ ನೀರಿಗೂ ಪರದಾಡುವ ಸ್ಥಿತಿ ನಿರ್ಮಾಣವಾಗುತ್ತದೆ. ಹೀಗಾಗಿ ನೀರನ್ನು ಅತಿಯಾಗಿ ಪೋಲು ಮಾಡದೆ ಅಗತ್ಯವಿರುವಷ್ಟು ಮಾತ್ರ ಬಳಸಬೇಕು ಎಂದು ತಿಳಿಸಿದರು. ಭೂಮಿಯ ಮೇಲೆ ಎಲ್ಲಾ ಜೀವಿಗಳಿಗೂ ಬದುಕುವ ಹಕ್ಕಿದೆ. ಎಲ್ಲಾ ಜೀವಿಗಳಿಗೂ ನೀರು ಅತ್ಯವಶ್ಯಕವಾಗಿದೆ. ಸಮುದ್ರಗಳು ಕಡಲತೀರ ಕೊರೆದು ಭೂಮಿಯನ್ನು ಅತಿಕ್ರಮಿಸುತ್ತಿವೆ. ಪ್ರಸ್ತುತದಲ್ಲಿ ಸಣ್ಣ-ಸಣ್ಣ ನದಿ, ಹಳ್ಳಗಳು ಕಣ್ಮರೆಯಾಗುತ್ತಿವೆ ಎಂದು ವಿಷಾದ ವ್ಯಕ್ತಪಡಿಸಿದರು. ಪ್ರಸ್ತುತದಲ್ಲಿ ಕಾರ್ಖಾನೆಗಳಿಂದ ವಾಯು ಮಾಲಿನ್ಯ ಉಂಟಾಗಿ ಓಜೋನ್ ಪದರಿಗೆ ರಂಧ್ರಗಳು ಬಿದ್ದು ಸೂರ್ಯನ ಶಾಖದಿಂದ ಹಲವಾರು ಪರಿಣಾಮ ಬೀರುತ್ತಿದೆ. ಗಿಡ ಮರಗಳನ್ನು ಬೆಳೆಸಬೇಕು. ಪ್ರಕೃತಿ ಸಂರಕ್ಷಣೆ ಮಾಡಬೇಕು ಎಂದು ಕಿವಿಮಾತು ಹೇಳಿದರು. ಸರ್ಕಾರಗಳು ಕೆರೆ-ನದಿಗಳನ್ನು ಸಂರಕ್ಷಿಸಲು ಹಲವಾರು ರೀತಿಯಲ್ಲಿ ಕ್ರಮ ಕೈಗೊಳ್ಳುತ್ತಿವೆ. ತಮ್ಮ ಮನೆಯ ಅಕ್ಕ-ಪಕ್ಕದಲ್ಲಿ ನೀರು ಪೋಲಾಗುವುದು ಕಂಡುಬAದಲ್ಲಿ ಅದನ್ನು ನಿಲ್ಲಿಸುವ ಕೆಲಸ ಮಾಡಬೇಕು ಎಂದು ನ್ಯಾಯಾಧೀಶರು ಹೇಳಿದರು. ಕಾರ್ಯಕ್ರಮದಲ್ಲಿ ವಿಶ್ವ ಜಲ ದಿನ ಅಂಗವಾಗಿ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆ ಮತ್ತು ರಂಗೋಲಿ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಪಂ ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರ ಹೆಚ್.ಇಂದುಧರ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ವೈ.ರಾಮಚಂದ್ರ, ರವೀಂದ್ರ ನಾಯ್ಕ, ವೀರಶೈವ ಮಹಾವಿದ್ಯಾಲಯದ ಅಧ್ಯಕ್ಷ ದರೂರು ಶಾಂತನಗೌಡ, ಸದಸ್ಯ ಖಾರದಪುಡಿ ಮುದ್ದನಗೌಡ, ಕಾಲೇಜಿನ ಪ್ರಾಚಾರ್ಯ ಜಿ.ಮಲ್ಲನಗೌಡ ಸೇರಿದಂತೆ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ------------

ಸಂಡೂರು ಪುರಸಭೆ: ಆಕ್ಷೇಪಣೆಗಳಿಗೆ ಆಹ್ವಾನ

ಬಳ್ಳಾರಿ,ಮಾ.26(ಕರ್ನಾಟಕ ವಾರ್ತೆ): ಸಂಡೂರು ಪುರಸಭೆ ವ್ಯಾಪ್ತಿಯಲ್ಲಿ ಬರುವ ಕಪ್ಪಲಕುಂಟ ರಸ್ತೆಯ ಹತ್ತಿರ ನಿರ್ಮಾಣವಾಗುತ್ತಿರುವ ಜಿ+2 ಯೋಜನೆಯ ಮನೆಗಳಿಗೆ ಸಂಡೂರು ಶಾಸಕರ ಅಧ್ಯಕ್ಷತೆಯಲ್ಲಿ ಮಾ.25 ರಂದು ನಡೆದ ನಗರ ಆಶ್ರಯ ಸಮಿತಿ ಸಭೆಯಲ್ಲಿ 1670 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದ್ದು, ಫಲಾನುಭವಿಗಳ ಆಯ್ಕೆ ಪಟ್ಟಿಯನ್ನು ಸಂಡೂರು ಪುರಸಭೆಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಫಲಾನುಭವಿಗಳ ಹೆಸರು, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರಗಳಲ್ಲಿ ಬದಲಾವಣೆ ಇದ್ದಲ್ಲಿ ಆಕ್ಷೇಪಣೆ ಸಲ್ಲಿಸಬಹುದು ಎಂದು ಸಂಡೂರು ಪುರಸಭೆ ಮುಖ್ಯಾಧಿಕಾರಿ ತಿಳಿಸಿದ್ದಾರೆ. ಆಕ್ಷೇಪಣೆಗಳನ್ನು ಪೂರಕ ದಾಖಲೆಗಳೊಂದಿಗೆ ಪುರಸಭೆಗೆ ಅರ್ಜಿ ಸಲ್ಲಿಸಬಹುದು. ಫಲಾನುಭವಿಗಳ ಆಯ್ಕೆ ಪಟ್ಟಿಯಲ್ಲಿ ಪ್ರಸ್ತುತ ನಿವೇಶನ ಹೊಂದಿದ, ವಸತಿ ಸೌಲಭ್ಯ ಪಡೆದ ಫಲಾನುಭವಿಗಳು ಕಂಡುಬAದಲ್ಲಿ ಅರ್ಜಿಯೊಂದಿಗೆ ಸೂಕ್ತ ದಾಖಲೆ ಲಗತ್ತಿಸಿ ಏ.01 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಂಡೂರು ಪುರಸಭೆ ಕಚೇರಿಗೆ ಸಂಪರ್ಕಿಸಬಹು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಆರ್‌ಟಿಒ ಕಚೇರಿ: ವಿವಿಧೆಡೆ ಶಿಬಿರ(ಕ್ಯಾಂಪ್)

ಬಳ್ಳಾರಿ,ಮಾ.26(ಕರ್ನಾಟಕ ವಾರ್ತೆ): ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ವತಿಯಿಂದ ಸಾರ್ವಜನಿಕರ ಕೆಲಸಗಳಿಗಾಗಿ ವಿವಿಧ ತಾಲ್ಲೂಕುಗಳಲ್ಲಿ ಪ್ರತಿ ತಿಂಗಳು ಶಿಬಿರ(ಕ್ಯಾಂಪ್)ಗಳನ್ನು ಆಯೋಜಿಸಲಾಗುತ್ತಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀನಿವಾಸ ಗಿರಿ ತಿಳಿಸಿದ್ದಾರೆ. ಸಂಡೂರು-ಪ್ರತಿ ತಿಂಗಳು 10ನೇ ತಾರೀಖು, ಕಂಪ್ಲಿ-ಪ್ರತಿ ತಿಂಗಳು 15ನೇ ತಾರೀಖು ಮತ್ತು ಸಿರುಗುಪ್ಪ-ಪ್ರತಿ ತಿಂಗಳು 20ನೇ ತಾರೀಖುಗಳಂದು ನಡೆಯಲಿದೆ. ಈ ಹಿಂದೆ ಸಿರುಗುಪ್ಪ ತಾಲ್ಲೂಕಿನಲ್ಲಿ ಪ್ರತಿ ತಿಂಗಳು 5, 20 ರಂದು ಶಿಬಿರಗಳನ್ನು ಆಯೋಜಿಸಲಾಗುತ್ತಿತ್ತು. ಈಗ ಸಂಡೂರು, ಕಂಪ್ಲಿ ತಾಲ್ಲೂಕು ವಿಜಯನಗರ ಜಿಲ್ಲೆಯ ಹೊಸಪೇಟೆ ಕಚೇರಿಯಿಂದ ಬೇರ್ಪಟ್ಟು ಬಳ್ಳಾರಿ ಜಿಲ್ಲಾ ಕಚೇರಿಗೆ ಸೇರ್ಪಡೆಯಾದ ಕಾರಣ ತಾಲ್ಲೂಕುಗಳು ಕಚೇರಿ ವ್ಯಾಪ್ತಿಗೆ ಒಳಪಡುವುದರಿಂದ ಆಯಾ ತಾಲ್ಲೂಕುಗಳಲ್ಲಿ ಪ್ರತಿ ತಿಂಗಳು ಶಿಬಿರ(ಕ್ಯಾಂಪ್)ಗಳನ್ನು ಆಯೋಜಿಸಲಾಗುವುದು. ಆಯಾ ದಿನಗಳಂದು ಸಾರ್ವತ್ರಿಕ ರಜೆಗಳು ಬಂದಲ್ಲಿ ಮುಂದಿನ ಕೆಲಸದ ದಿನಗಳಲ್ಲಿ ಶಿಬಿರ(ಕ್ಯಾಂಪ್)ಗಳನ್ನು ಆಯೋಜಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬಳ್ಳಾರಿ,ಮಾ.26(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ (ಆಂಗ್ಲ ಮಾಧ್ಯಮ) ಶಾಲೆ ಹಾಗೂ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ (ಸಿಬಿಎಸಿಇ) ಗಳ 2025-26 ನೇ ಶೈಕ್ಷಣಿಕ ಸಾಲಿಗೆ 6 ನೇ ತರಗತಿಗೆ ಉಚಿತ ಪ್ರವೇಶಕ್ಕಾಗಿ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಏ.10 ರ ವರೆಗೆ ವಿಸ್ತರಿಸಲಾಗಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ. ಆಸಕ್ತಿಯುಳ್ಳ ಐದನೇ ತರಗತಿ ಉತ್ತೀರ್ಣ ಹೊಂದಿದ ವಿದ್ಯಾರ್ಥಿಗಳು ಸೇವಾಸಿಂಧು ಆನ್‌ಲೈನ್ ಪೋರ್ಟಲ್ hಣಣಠಿs://sevಚಿsiಟಿಜhuseಡಿviಛಿes.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. *ಶಾಲೆಗಳ ವಿವರ:* ಬಳ್ಳಾರಿ ತಾಲ್ಲೂಕಿನ ಕೊಳಗಲ್ಲಿನ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ(ಸಿ.ಬಿ.ಎಸ್.ಸಿ)ಯ ಪ್ರಾಂಶುಪಾಲರ ಮೊ. 7353346069. ಸಂಡೂರು ತಾಲ್ಲೂಕಿನ ತೋರಣಗಲ್ಲು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಶಾಲೆಯ ಪ್ರಾಂಶುಪಾಲರ ಮೊ.9480933730. ಕಂಪ್ಲಿ ತಾಲ್ಲೂಕಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಶಾಲೆಯ ಪ್ರಾಂಶುಪಾಲರ ಮೊ.9113280239. ಕುರುಗೋಡು ತಾಲ್ಲೂಕಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಶಾಲೆಯ ಪ್ರಾಂಶುಪಾಲರ ಮೊ. 9113280239. ಬಳ್ಳಾರಿ ತಾಲ್ಲೂಕಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಶಾಲೆಯ ಪ್ರಾಂಶುಪಾಲರ ಮೊ.7353346069. *ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಸಂಪರ್ಕ ವಿವರ:* ಬಳ್ಳಾರಿ-8310321101, ಸಂಡೂರು-9036925966, 8660575061 ಮತ್ತು ಸಿರುಗುಪ್ಪ-9148889975. ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಜಿಲ್ಲಾ ಅಲ್ಪಸಂಖ್ಯಾತರ ಜಿಲ್ಲಾ ಅಧಿಕಾರಿಗಳ ಕಾರ್ಯಾಲಯದ ದೂ.08392-200125/224, ಸಹಾಯವಾಣಿ ಕೇಂದ್ರ 8277799990 (24*7) ಅಥವಾ ತಾಲೂಕು ಅಲ್ಪ ಸಂಖ್ಯಾತರ ವಿಸ್ತರಣಾಧಿಕಾರಿಗಳ ಹಾಗೂ ಜಿಲ್ಲೆಯ ಎಲ್ಲಾ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರ, ಅಲ್ಪ ಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಭೇಟಿ ನೀಡಿ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಮಂಗಳವಾರ, ಮಾರ್ಚ್ 25, 2025

ಸರಳಾದೇವಿ ಕಾಲೇಜಿನಲ್ಲಿ ಮದ್ಯ ಮತ್ತು ಮಾದಕ ದುಷ್ಪರಿಣಾಮ ಕುರಿತು ವಿಚಾರ ಸಂಕಿರಣ | ಯುವ ಸಮುದಾಯ ದುಶ್ಚಟಗಳಿಗೆ ಬಲಿಯಾಗದೇ ಆದರ್ಶ ಜೀವನ ರೂಪಿಸಿಕೊಳ್ಳಬೇಕು: ಡಾ.ಪ್ರಹ್ಲಾದ ಚೌದ್ರಿ

ಬಳ್ಳಾರಿ,ಮಾ.25(ಕರ್ನಾಟಕ ವಾರ್ತೆ): ಯುವಕ-ಯುವತಿಯರು ಮದ್ಯ ಮತ್ತು ಮಾದಕ ವಸ್ತುಗಳಿಗೆ ಬಲಿಯಾಗದೇ ಉತ್ತಮ ಆದರ್ಶ ಜೀವನ ರೂಪಿಸಿಕೊಳ್ಳಬೇಕು ಎಂದು ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರಹ್ಲಾದ ಚೌದ್ರಿ ಅವರು ಹೇಳಿದರು. ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬಳ್ಳಾರಿ ಮತ್ತು ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು (ಸ್ವಾಯತ್ತ), ಬಳ್ಳಾರಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಎ,ಬಿ,ಸಿ ಮತ್ತು ಡಿ ಘಟಕ ಇವರ ಸಂಯುಕ್ತಾಶ್ರಯದಲ್ಲಿ ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ‘ಮದ್ಯ ಮತ್ತು ಮಾದಕ ದುಷ್ಪರಿಣಾಮ’ ಕುರಿತು ವಿಚಾರ ಸಂಕಿರಣ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿದ್ಯಾರ್ಥಿ ಜೀವನವು ಹೂವಿನಂತೆ ಸುಂದರವಾಗಿದ್ದು, ಇತ್ತೀಚಿನ ದಿನಗಳಲ್ಲಿ ಮಾದಕ ವಸ್ತುಗಳಿಗೆ ವಿದ್ಯಾರ್ಥಿಗಳು ಸಹ ದಾಸರಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದು ಅಭಿಪ್ರಾಯ ಪಟ್ಟರು. ವಿದ್ಯಾರ್ಥಿಗಳು ದುಶ್ಚಟಗಳಿಗೆ ವ್ಯಸನಿಗಳಾಗದೇ ವಿದ್ಯಾಭ್ಯಾಸದ ಕಡೆಗೆ ಗಮನಹರಿಸಬೇಕು. ತಮ್ಮ ಮನೆಯ ನೆರೆ-ಹೊರೆಯಲ್ಲಿ ಯಾರಾದರೂ ವ್ಯಸನಿಗಳು ಕಂಡುಬAದಲ್ಲಿ ಆರೋಗ್ಯ ಇಲಾಖೆಯ ಸಂಬAಧಿಸಿದ ವಿಭಾಗಕ್ಕೆ ಮಾಹಿತಿ ನೀಡಬೇಕು. ಇದರಿಂದ ಅವರನ್ನು ಮುಖ್ಯವಾಹಿನಿಗೆ ತರಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು. ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ವೀರೇಂದ್ರ ಕುಮಾರ್ ಅವರು ವಿಶೇಷ ಉಪನ್ಯಾಸಕರಾಗಿ ಭಾಗವಹಿಸಿ ಮಾತನಾಡಿ, ಮದ್ಯ ಮತ್ತು ಮಾದಕ ವಸ್ತುಗಳಿಗೆ ಅವಲಂಬಿತರಾದವರು ಮಾನಸಿಕವಾಗಿ, ಶಾರೀರಿಕವಾಗಿ ಕುಗ್ಗುತ್ತಾರೆ. ಇದರಿಂದ ತನ್ನ ಜೀವನ ಮತ್ತು ಕುಟುಂಬವು ಕಷ್ಟದಲ್ಲಿ ಸಿಲುಕುತ್ತದೆ. ಹಾಗಾಗಿ ಮನುಷ್ಯನು ಶಾರೀರಿಕವಾಗಿ, ದೈಹಿಕವಾಗಿ ಸದೃಢನಾಗಿರಬೇಕೆಂದರೆ ಮದ್ಯ ಮತ್ತು ಮಾದಕ ವಸ್ತುಗಳಿಂದ ದೂರವಿರಬೇಕು ಎಂದು ಹೇಳಿದರು. ಮದ್ಯ-ಮಾದಕ ವಸ್ತು ವ್ಯಸನಿಗಳಾಗಿದ್ದಲ್ಲಿ ರಾಜ್ಯ ಸರ್ಕಾರವು ರಾಷ್ಟಿçÃಯ ಟೆಲಿ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ಟೆಲಿ ಮನಸ್ ಎಂಬ 14416 ಉಚಿತ ಸಹಾಯವಾಣಿ ಆರಂಭಿಸಿದ್ದು, ಸಹಾಯವಾಣಿಗೆ ಕರೆ ಮಾಡಿ ಆಪ್ತಸಮಾಲೋಚನೆ ಪಡೆಯಬಹುದು ಎಂದು ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಮಾತನಾಡಿ, 16 ರಿಂದ 22 ರ ವಯಸ್ಸಿನ ಯುವ ಸಮುದಾಯದಲ್ಲಿ ಹೆಚ್ಚಾಗಿ ಮಾದಕ ವಸ್ತುಗಳಿಗೆ ವ್ಯಸನಿಗಳಾಗುವುದು ಕಂಡುಬರುತ್ತಿದ್ದು, ಪ್ರಸ್ತುತದಲ್ಲಿ ಶೇ.55 ರಷ್ಟು ಈ ವಯಸ್ಸಿನ ಅಂತರದ ಯುವ ಸಮುದಾಯವು ಒಳಗೊಂಡಿದೆ ಎಂದು ಕಳವಳ ವ್ಯಕ್ತಪಡಿಸಿದರು. ಯುವಕರು ಮೊಬೈಲ್ ಗೀಳಿಗೆ ದಾಸರಾಗಬಾರದು. ಚಲನಚಿತ್ರಗಳನ್ನು ಮನರಂಜನೆ ದೃಷ್ಟಿಯಿಂದ ನೋಡಬೇಕು. ಒಳ್ಳೆಯ ಸಂದೇಶ ಮಾತ್ರ ಆಯ್ಕೆ ಮಾಡಬೇಕು. ಕೆಟ್ಟ ಅಭ್ಯಾಸಗಳನ್ನು ಅನುಕರಣೆ ಮಾಡಬಾರದು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ವಿದ್ಯಾರ್ಥಿಗಳು ಗುರಿಯನ್ನಿಟ್ಟುಕೊಂಡು ಮುನ್ನಡೆಯಬೇಕು. ತಮ್ಮಲ್ಲಿನ ಪ್ರತಿಭೆಯನ್ನು ಅರಿತುಕೊಳ್ಳಬೇಕು. ದೇಶದ ಭವಿಷ್ಯವು ಈಗಿನ ಯುವ ಸಮುದಾಯವೇ. ಅದಕ್ಕಾಗಿ ದೇಶ ಕಟ್ಟುವ ಪ್ರತಿಭೆಗಳಾಗಿ ಹೊರಹೊಮ್ಮಬೇಕು ಎಂದು ತಿಳಿಸಿದರು. ಬಳಿಕ ಗಣ್ಯರು ರಾಷ್ಟಿçÃಯ ಟೆಲಿ ಮಾನಸಿಕ ಆರೋಗ್ಯ ಕಾರ್ಯಕ್ರಮದ ಟೆಲಿ ಮನಸ್ ಎಂಬ 14416 ಉಚಿತ ಸಹಾಯವಾಣಿಯ ಜಾಗೃತಿ ಭಿತ್ತಿಚಿತ್ರ ಪ್ರದರ್ಶಿಸಿದರು. ಸಸಅ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆಯ ಎ ಘಟಕದ ಕಾರ್ಯಕ್ರಮಾಧಿಕಾರಿ ಪ್ರೊ.ಬಿ.ರಾಮಸ್ವಾಮಿ ಅವರು ಕಾರ್ಯಕ್ರಮ ನಿರೂಪಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿ ಘಟಕದ ಕಾರ್ಯಕ್ರಮಾಧಿಕಾರಿ ಪ್ರೊ.ಪ್ರವೀಣ್ ಕುಮಾರ್ ಅವರು ಗಣ್ಯರನ್ನು ಸ್ವಾಗತಿಸಿದರು. ಬಿ ಘಟಕದ ಕಾರ್ಯಕ್ರಮಾಧಿಕಾರಿ ಡಾ.ಚನ್ನಬಸವಯ್ಯ ಹೆಚ್.ಎಂ ಅವರು ವಂದಿಸಿದರು. ಈ ಸಂದರ್ಭದಲ್ಲಿ ಡಿ ಘಟಕದ ಕಾರ್ಯಕ್ರಮಾಧಿಕಾರಿ ಪ್ರೊ.ನಾಜಿಯಾ ಖಾಜಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಥಮ ದರ್ಜೆ ಸಹಾಯಕ ವಿ.ಸಿ.ಗುರುರಾಜ, ಸಿಬ್ಬಂದಿಗಳಾದ ವಿಜಯ್ ಕುಮಾರ್, ಹನುಮೇಶ್.ಹೆಚ್., ಮಲ್ಲೇಶಪ್ಪ.ವೈ., ಹನುಮಂತಪ್ಪ.ವಿ, ಶ್ರೀಧರ ಕಾವಲಿ ಸೇರಿದಂತೆ ಕಾಲೇಜಿನ ಭೋದಕ-ಭೋದಕೇತರ ಸಿಬ್ಬಂದಿ, ವಿದ್ಯಾರ್ಥಿ- ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. -----------

ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮದಲ್ಲಿ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಸಲಹೆ | ಗ್ರಾಹಕರಿಗಿರುವ ಹಕ್ಕುಗಳ ಮಾಹಿತಿ ಹೊಂದಬೇಕು

ಬಳ್ಳಾರಿ,ಮಾ.25(ಕರ್ನಾಟಕ ವಾರ್ತೆ): ದಿನನಿತ್ಯ ಜೀವನದಲ್ಲಿ ಯಾವುದೇ ವಸ್ತು ಕೊಂಡುಕೊಳ್ಳುವವರು ಗ್ರಾಹಕರಾಗುತ್ತಾರೆ. ಮಾರಾಟಗಾರರ ಜೊತೆ ವ್ಯವಹರಿಸುವ ಪ್ರತಿಯೊಬ್ಬ ಗ್ರಾಹಕರು ತಮಗಿರುವ ಹಕ್ಕುಗಳ ಬಗ್ಗೆ ಮಾಹಿತಿ ಹೊಂದಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತç ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಸಂಯುಕ್ತಾಶ್ರಯದಲ್ಲಿ “ಸುಸ್ಥಿರ ಜೀವನಶೈಲಿಗಳಿಗೆ ಕೇವಲ ಪರಿವರ್ತನೆ” ಎಂಬ ಘೋಷವಾಕ್ಯದಡಿ ನಗರದ ಡಾ.ರಾಜ್ ಕುಮಾರ್ ರಸ್ತೆಯ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಆಧುನಿಕ ತಂತ್ರಜ್ಞಾನ ಅಭಿವೃದ್ಧಿಯಾದಂತೆ ನಾವು ಅದರ ಅನುಗುಣವಾಗಿ ಹೊಂದಿಕೊಳ್ಳುವುದು ಅನಿವಾರ್ಯವಾಗಿದೆ. ಆನ್‌ಲೈನ್ ಅಥವಾ ಆಫ್‌ಲೈನ್‌ನಲ್ಲಿ ಗ್ರಾಹಕರು ತಾವು ಖರೀದಿಸುವ ವಸ್ತುಗಳ ಗುಣಮಟ್ಟ, ಪ್ರಮಾಣದ ಬಗ್ಗೆ ಗಮನಹರಿಸಬೇಕು ಎಂದು ಕಿವಿಮಾತು ಹೇಳಿದರು. ಗ್ರಾಹಕರು ಮಾರಾಟಗಾರರಿಂದ ಮೋಸ, ವಂಚನೆ ಅಥವಾ ಸಮಸ್ಯೆ ಉಂಟಾದಲ್ಲಿ ಜಿಲ್ಲಾ ಗ್ರಾಹಕರ ನ್ಯಾಯಾಲಯದಲ್ಲಿ ದೂರು ನೀಡಿ ಪರಿಹಾರ ಕಂಡುಕೊಳ್ಳಬಹುದು ಎಂದು ಮಾಹಿತಿ ನೀಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನಿ ಅವರು ಮಾತನಾಡಿ, ಗ್ರಾಹಕರು ಪ್ರತಿಯೊಂದು ವಸ್ತುವನ್ನು ಖರೀದಿ ಮಾಡುವಾಗ ಎಚ್ಚರ ವಹಿಸಿಬೇಕು. ಮುಂಬರುವ ದಿನಗಳಲ್ಲಿ ಕೃತಕ ಬುದ್ಧಿಮತ್ತೆಯು ವರ್ತಕರ ಹಾಗೂ ಗ್ರಾಹಕರ ಮಧ್ಯೆ ವಂಚನೆಯಾಗದAತೆ ಕಾರ್ಯ ನಿರ್ವಹಿಸಲು ಅಭಿವೃದ್ಧಿ ಪಡಿಸುತ್ತಿದ್ದು, ಇದು ಸಹಕಾರಿಯಾಗಲಿದೆ ಎಂದು ತಿಳಿಸಿದರು. ತಂತ್ರಜ್ಞಾನ ಅಭಿವೃದ್ಧಿಯಾದಂತೆ, ಮಾನವ ರಹಿತ ಯಂತ್ರಗಳೂ ಕಾರ್ಯ ನಿರ್ವಹಿಸಬಹುದಾದಂತಹ ವಾತಾವರಣವು ಸೃಷ್ಟಿಯಾಗಲಿದೆ. ಇವುಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಇಲ್ಲದಿದ್ದಲ್ಲಿ ಮಾರಕವಾಗಬಹುದು ಎಂದು ಅಭಿಪ್ರಾಯ ಪಟ್ಟರು. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ತಿಪ್ಪೇಸ್ವಾಮಿ.ಎನ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಹಕರು ತಾವು ಕೊಂಡುಕೊಳ್ಳುವ ವಸ್ತುಗಳಲ್ಲಿ ಯಾವುದೇ ರೀತಿಯ ಮೋಸವಾದಾಗ ಮತ್ತು ತಮಗಾದ ಅನ್ಯಾಯದ ವಿರುದ್ಧ ಪ್ರಶ್ನಿಸುವ ಮನೋಭಾವನೆ ಬೆಳೆಸಿಕೊಂಡು, ತಮಗಿರುವ ಗ್ರಾಹಕರ ಹಕ್ಕುಗಳ ಪರವಾಗಿ ಧ್ವನಿಯೆತ್ತಿ ಕಾನೂನಾತ್ಮಕವಾಗಿ ನ್ಯಾಯ ಪಡೆದುಕೊಳ್ಳಬಹುದಾಗಿದೆ ಎಂದರು. ಅಭಿವೃದ್ಧಿ ಹೊಂದಿದ ತಂತ್ರಜ್ಞಾನದಲ್ಲಿ ಗ್ರಾಹಕರ ಹಕ್ಕುಗಳಿಗೆ ಚ್ಯುತಿ ಉಂಟಾದಾಗ ಇರುವ ಗ್ರಾಹಕರ ಹಕ್ಕುಗಳ ಬಗ್ಗೆ ಜನಸಾಮಾನ್ಯರಿಗೆ, ಸಾರ್ವಜನಿಕರಿಗೆ, ಗ್ರಾಹಕರಿಗೆ ಮಾಹಿತಿ ಒದಗಿಸುವ ಮೂಲಕ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ, ವರ್ತಕರಿಗೆ ತಿಳಿಸಿದರು. ಜಿಲ್ಲಾ ಹಿರಿಯ ವಕೀಲರಾದ ಎನ್.ಪ್ರಕಾಶ ಅವರು “ಸುಸ್ಥಿರ ಜೀವನಶೈಲಿಗಳಿಗೆ ಕೇವಲ ಪರಿವರ್ತನೆ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸದಲ್ಲಿ ಮಾತನಾಡಿ, ಗ್ರಾಹಕರು ವಸ್ತುಗಳನ್ನು ಖರೀದಿಸುವಾಗ ಸುರಕ್ಷಿತ ಹಕ್ಕು, ಮಾಹಿತಿ ಹಕ್ಕು, ಆಯ್ಕೆಯ ಹಕ್ಕು, ಕೊಂಡುಕೊಳ್ಳುವ ಹಕ್ಕು, ಗ್ರಾಹಕರ ಶಿಕ್ಷಣದ ಹಕ್ಕುಗಳ ಕುರಿತು ಮಾಹಿತಿ ತಿಳಿದುಕೊಳ್ಳುವುದು ಅಗತ್ಯವಾಗಿದೆ. ಗ್ರಾಹಕರ ಕುಂದು ಕೊರತೆಯ ಸಮಸ್ಯೆಗಳನ್ನು ನಿಖರವಾದ ಮಾಹಿತಿಯೊಂದಿಗೆ ಧಾವೆ ಹೂಡುವುದರ ಮೂಲಕ ಗ್ರಾಹಕರ ವ್ಯಾಜ್ಯಗಳ ಪರಿಹಾರ ಕೇಂದ್ರದಲ್ಲಿ ಕಾನೂನಾತ್ಮಕವಾಗಿ ಪರಿಹಾರ ಪಡೆದುಕೊಳ್ಳಬಹುದು ಎಂದು ತಿಳಿಸಿದರು. ಹಿರಿಯ ವಕೀಲರಾದ ಅಂಕಲಯ್ಯ ಅವರು ಮಾತನಾಡಿ, ಪ್ರಸ್ತುತ ದಿನಮಾನಗಳಲ್ಲಿ ಜಗತ್ತು ತಂತ್ರಜ್ಞಾನದ ಅಭಿವೃದ್ಧಿಯಿಂದ ಕೃತಕ ಬುದ್ಧಿಮತ್ತೆಯು ಅವಲಂಬನೆಗೊಳ್ಳುತ್ತಿದ್ದು, ನ್ಯಾಯಬೆಲೆ ಅಂಗಡಿಗಳಲ್ಲಿ ಉಪಯೋಗಿಸುವುದರಿಂದ ನಿಖರ ತೂಕದ ಜೊತೆಗೆ ನಿಗದಿತ ಸಮಯವನ್ನು ಉಳಿಸಬಹುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ತೂಕ ಮತ್ತು ಅಳತೆ ಕುರಿತ ವಂಚನೆಯ ಜಾಗೃತಿ ಅರಿವು ಮೂಡಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಹಿಳಾ ಸದಸ್ಯೆಯಾದ ಮಾರ್ಲಾ ಶಶಿಕಲಾ, ಕಾನೂನು ಮಾಪನಶಾಸ್ತç ಇಲಾಖೆಯ ಸಹಾಯಕ ನಿಯಂತ್ರಕರಾದ ಅಮೃತಾ.ಪಿ.ಚವ್ಹಾಣ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ಸಕೀನಾ ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ನ್ಯಾಯಬೆಲೆ ಅಂಗಡಿಯ ಮಾಲೀಕರು ಹಾಗೂ ಮತ್ತೀತರರು ಉಪಸ್ಥಿತರಿದ್ದರು. ------------

ಮಹಿಳೆಯರು ನಿಯಮಿತವಾಗಿ ತಪಾಸಣೆಗೆ ಒಳಗಾಗಬೇಕು: ಮೇಯರ್ ಮುಲ್ಲಂಗಿ ನಂದೀಶ್

ಬಳ್ಳಾರಿ,ಮಾ.25(ಕರ್ನಾಟಕ ವಾರ್ತೆ): ಹೆಣ್ಣುಮಕ್ಕಳಲ್ಲಿ ಕಂಡುಬರಬಹುದಾದAತಹ ಗರ್ಭಕಂಠದ ಕ್ಯಾನ್ಸರ್ ಸುಲಭವಾಗಿ ಲಭ್ಯವಿರುವ ಸ್ಕಿçÃನಿಂಗ್ ವಿಧಾನಗಳ ಮೂಲಕ ಆರಂಭದಲ್ಲಿ ಪತ್ತೆಹಚ್ಚಬಹುದಾಗಿದ್ದು, ಮಹಿಳೆಯರು ಸಕಾಲದಲ್ಲಿ ಚಿಕಿತ್ಸೆ ಪಡೆಯಬೇಕು ಎಂದು ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್ ಅವರು ಹೇಳಿದರು. ಮಂಗಳವಾರದAದು, ಬಯೋಸೈಫರ್ ಲ್ಯಾಬ್ ಹಾಗೂ ಬಳ್ಳಾರಿ ಮಹಾನಗರ ಪಾಲಿಕೆ, ಸಂಜೀವಿನಿ ಆಸ್ಪತ್ರೆ, ನವಕರ್ನಾಟಕ ಆಸ್ಪತ್ರೆ, ಸಿರಿ ಡಯಗ್ನೋಸ್ಟಿಕ್ ಲ್ಯಾಬ್ ಇವರ ಸಹಯೋಗದಲ್ಲಿ ನಗರದ ಬಿಡಿಎಎ ಫುಟ್‌ಬಾಲ್ ವೇದಿಕೆ ಸಭಾಂಗಣದಲ್ಲಿ ಮಹಾನಗರ ಪಾಲಿಕೆಯ ಮಹಿಳಾ ಪೌರಕಾರ್ಮಿಕರಿಗೆ ಆಯೋಜಿಸಿದ್ದ ಉಚಿತ ತಪಾಸಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಉಚಿತ ನೋಂದಣಿ, ಅನುಭವಿ ವೈದ್ಯರೊಂದಿಗೆ ಉಚಿತ ಸಮಾಲೋಚನೆ ಮತ್ತು ಉಚಿತ ಪರೀಕ್ಷೆ ಕೈಗೊಳ್ಳಲಾಗುತ್ತದೆ. ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ವೈದ್ಯರಾದ ಡಾ.ಶಂಕರ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಅವರು ಮಾತನಾಡಿ, ಮಹಿಳೆಯರಲ್ಲಿ ಕಂಡುಬರುವ ಗರ್ಭಕಂಠದ ಕ್ಯಾನ್ಸರ್ ಮತ್ತು ಸ್ತನ ಕ್ಯಾನ್ಸರ್ ಗಳಿಂದ ಮಹಿಳೆಯರು ಸಾವನ್ನಪ್ಪಿದ ಪ್ರಕರಣಗಳು ಕಂಡುಬರುತ್ತಿವೆ. ಇದಕ್ಕಾಗಿ 10 ವರ್ಷದಿಂದ 45 ವರ್ಷದೊಳಗಿನ ಹೆಣ್ಣು ಮಕ್ಕಳು ತಪ್ಪದೇ ಪ್ರಾರಂಭಿಕ ಹಂತದಲ್ಲಿ ತಪಾಸಣೆ ಮಾಡಿಸಿಕೊಳ್ಳಬೇಕು. ಒಂದು ವೇಳೆ ದೃಢಪಟ್ಟಲ್ಲಿ ಎರಡು ಹಂತದ ಡೋಸ್ ಗಳಲ್ಲಿ ಗುಣಪಡಿಸಬಹುದಾಗಿದೆ ಎಂದು ಹೇಳಿದರು. ದೇಶದಲ್ಲಿ ಗರ್ಭಕಂಠದ ಕ್ಯಾನ್ಸರ್ ಮತ್ತು ಸ್ತನ ಕ್ಯಾನ್ಸರ್ ಹೆಚ್ಚಾಗಿ ಕಂಡುಬರಬಹುದಾಗಿದ್ದು, ತಪಾಸಣೆ ಮತ್ತು ಚಿಕಿತ್ಸೆಗಾಗಿ ಕೇಂದ್ರ ಸರ್ಕಾರವು ವಿಶೇಷ ಅನುದಾನ ಮೀಸಲಿರಿಸಿದೆ ಎಂದು ತಿಳಿಸಿದರು. ಬಳಿಕ ಕಾರ್ಯಕ್ರಮದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ತಪಾಸಣೆ ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಉಪಮೇಯರ್ ಡಿ.ಸುಕುಂ, ಸಾಮಾಜಿಕ, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಎಂ.ಕೆ.ಪದ್ಮಾರೋಜ, ಪ್ರಭಾರಿ ಆರೋಗ್ಯಾಧಿಕಾರಿ ಡಾ.ಮುನಾಫ್ ಪಟೇಲ್, ವೈದ್ಯರಾದ, ಡಾ.ಶಮೀರ್, ಡಾ.ಗಂಗಾಧರ ಸೇರಿದಂತೆ ಪಾಲಿಕೆಯ ಅಧಿಕಾರಿ ಮತ್ತು ಸಿಬ್ಬಂದಿ, ಮಹಿಳಾ ಪೌರ ಕಾರ್ಮಿಕರು ಹಾಗೂ ಮತ್ತೀತರರು ಇದ್ದರು. -----------