ಗುರುವಾರ, ಮಾರ್ಚ್ 27, 2025
ಏ.02 ರಂದು ಪೊಲೀಸ್ ಧ್ವಜ ದಿನಾಚರಣೆ
ಬಳ್ಳಾರಿ,ಮಾ.27(ಕರ್ನಾಟಕ ವಾರ್ತೆ):
ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಏ.02 ರಂದು ಬೆಳಿಗ್ಗೆ 08 ಗಂಟೆಗೆ ನಗರದ ಸಶಸ್ತç ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕುಡುತಿನಿ ಪೋಲಿಸ್ ಠಾಣೆಯ ನಿವೃತ್ತ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕೆ.ವಿರುಪಾಕ್ಷಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸುವರು.
ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕರಾದ ಬಿ.ಎಸ್.ಲೋಕೇಶ್ ಕುಮಾರ್ ಅವರು ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ವಿ.ಜೆ.ಶೋಭಾರಾಣಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕೆ.ಪಿ.ರವಿಕುಮಾರ್, ಎಸ್.ನವೀನ್‌ಕುಮಾರ್ ಸೇರಿದಂತೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ವರ್ಗ ಉಪಸ್ಥಿತರಿರುವರು ಎಂದು ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ