ಸೋಮವಾರ, ಮಾರ್ಚ್ 3, 2025
ಏ.04 ರಂದು ರಂದು ಪರಿಸರ ಸಾರ್ವಜನಿಕ ಆಲಿಕೆ ಸಭೆ
ಬಳ್ಳಾರಿ,ಮಾ.03(ಕರ್ನಾಟಕ ವಾರ್ತೆ):
ಸಂಡೂರು ತಾಲ್ಲೂಕಿನ ಜೈಸಿಂಗ್ ಪುರ ಗ್ರಾಮದಲ್ಲಿ ಜೆ.ಎಸ್.ಡಬ್ಲೂö್ಯ ಸ್ಟೀಲ್ ಲಿಮಿಟೆಡ್ ಇವರು ‘ಜೈಸಿಂಗ್ ಪುರ ನಾರ್ಥ್ ಬ್ಲಾಕ್’ ನಲ್ಲಿ 298.59 ಹೆಕ್ಟೇರ್ ಅರಣ್ಯ ಪ್ರದೇಶದಲ್ಲಿ ವಾರ್ಷಿಕ 0.883 ಮಿಲಿಯನ್ ಟನ್ ಉತ್ಪಾದನಾ ಸಾಮರ್ಥ್ಯದ ಕಬ್ಬಿಣದ ಅದಿರಿನ ಗಣಿಗಾರಿಕೆ ಹಾಗೂ 225 ಟಿಪಿಹೆಚ್, 250 ಟಿಪಿಹೆಚ್ ಸಾಮರ್ಥ್ಯದ ಕ್ರಷರ್ ಗಳನ್ನು ಸ್ಥಾಪಿಸುವ ಹೊಸ ಗಣಿಗಾರಿಕೆ ಯೋಜನೆ ಕೈಗೊಳ್ಳಲು ಉದ್ದೇಶಿಸಲಾಗಿದ್ದು, ಇದರ ಸಂಬAಧ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಅಧ್ಯಕ್ಷತೆಯಲ್ಲಿ ಏ.04 ರಂದು ಬೆಳಿಗ್ಗೆ 11 ಗಂಟೆಗೆ ಜೆ.ಎಸ್.ಡಬ್ಲೂö್ಯ ಸ್ಟೀಲ್ ಲಿಮಿಟೆಡ್ ಇವರು ಜೈಸಿಂಗ್ ಪುರ ಗ್ರಾಮ(ಜೈಸಿಂಗ್ ಪುರ ನಾರ್ಥ್ ಬ್ಲಾಕ್)ದಲ್ಲಿ ಪರಿಸರ ಸಾರ್ವಜನಿಕ ಆಲಿಕೆ ಸಭೆ ನಡೆಸಲು ತೀರ್ಮಾನಿಸಲಾಗಿದೆ.
ಇದಕ್ಕೆ ಸಂಬAಧಿಸಿದAತೆ ಉದ್ದೇಶಿತ ಯೋಜನೆಯ ಕಾರ್ಯ ನಿರ್ವಾಹಕ ಸಾರಾಂಶ ಪ್ರತಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಸಂಬAಧಿಸಿದ ಕಚೇರಿಗಳಲ್ಲಿ ಸಾರಾಂಶ ಪ್ರತಿಯನ್ನು ಸಾರ್ವಜನಿಕರ ಗಮನಕ್ಕೆ ಇಡಲಾಗಿದೆ.
ಸುತ್ತಮುತ್ತಲಿನ ಸಾರ್ವಜನಿಕರು ಸಭೆಯಲ್ಲಿ ಪಾಲ್ಗೊಂಡು ಅಭಿಪ್ರಾಯ, ಅಹವಾಲು ಸಲ್ಲಿಸಬಹುದು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬಳ್ಳಾರಿ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಸಿದ್ದೇಶ್ವರ ಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ