ಶುಕ್ರವಾರ, ಮಾರ್ಚ್ 7, 2025

ಮಾ.08 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಮಾ.07(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯಲ್ಲಿ 11ಕೆವಿ ವಿದ್ಯುತ್ ಲೈನುಗಳ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುದರಿಂದ ಮಾ.08 ರಂದು ಬೆಳಿಗ್ಗೆ 9.30 ಗಂಟೆಯಿAದ ಸಂಜೆ 5 ಗಂಟೆಯವರೆಗೆ ಎಫ್-15 ರ ವ್ಯಾಪ್ತಿಯ ವಾಜಪೇಯಿ ಲೇಔಟ್, ಕನಕ ರ್ದುಗಮ್ಮ ಬಡಾವಣೆ, ಕೃಷ್ಣ ಕಾಲೋನಿ, ಭಾರತಿ ಹಾಲು ಉತ್ಪಾದನಾ ಕೇಂದ್ರದ ಹಿಂಭಾಗ, ಸುಜಾತ ಲೇಔಟ್, ಆಂಧ್ರ, ಕೆಇಬಿ ಹಿಂಭಾಗ ಮತ್ತು ಎಫ್-7 ರ ವ್ಯಾಪ್ತಿಯ ವಡ್ಡರಬಂಡೆ, ರೂಪನಗುಡಿ ರಸ್ತೆ, ಬೆಂಗಳೂರು ರಸ್ತೆ, ದೋಣಪ್ಪ ಬೀದಿ, ರೆಡ್ಡಿ ಬೀದಿ, ಅಲ್ಲಂ ಬೀದಿ, ಮುಲ್ಲಂಗಿ ಸಂಜೀವಪ್ಪ ಬೀದಿ, ರೂಪನಗುಡಿ ನರಪ್ಪ ಬೀದಿ, ತಾಯಮ್ಮ ಕಟ್ಟೆ ಪ್ರದೇಶಗಳ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ