ಸೋಮವಾರ, ಮಾರ್ಚ್ 10, 2025
ಮಾ.11 ರಂದು ಉಚಿತ ಸಾಧನ ಸಲಕರಣೆಗಳ ವಿತರಣೆ ಕಾರ್ಯಕ್ರಮ
ಬಳ್ಳಾರಿ,ಮಾ.10(ಕರ್ನಾಟಕ ವಾರ್ತೆ):
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಕೇಂದ್ರ ಸರ್ಕಾರದ ರಾಷ್ಟಿçÃಯ ವಯೋಶ್ರೀ ಯೋಜನೆಯಡಿ ಮಾ.11 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಹಿರಿಯ ನಾಗರಿಕರಿಗೆ ಉಚಿತ ಸಾಧನ ಸಲಕರಣೆಗಳ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರು ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಸಚಿವರಾದ ಲಕ್ಷಿö್ಮÃ ಆರ್.ಹೆಬ್ಬಾಳ್ಕರ್ ಅವರು ಘನ ಉಪಸ್ಥಿತಿ ಇರುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಾಸಕರಾದ ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್.ಕೆ.ಹೆಚ್., ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣಾಧಿಕಾರಿ ಗೋವಿಂದಪ್ಪ.ಹೆಚ್.ಎA ಸೇರಿದಂತೆ ಜಿಲ್ಲಾ ವಿಕಲಚೇತನರ ಪುರ್ನವಸತಿ ಕೇಂದ್ರ, ವಿಕಲಚೇತನರು ಮತ್ತು ಹಿರಿಯ ನಾಗರಿಕರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಘ-ಸAಸ್ಥೆಗಳ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ