ಸೋಮವಾರ, ಮಾರ್ಚ್ 10, 2025
ಮಾ.12 ರಂದು ಬಳ್ಳಾರಿ ಗ್ರಾಮೀಣದಲ್ಲಿ ವಿದ್ಯುತ್ ವ್ಯತ್ಯಯ
ಬಳ್ಳಾರಿ,ಮಾ.10(ಕರ್ನಾಟಕ ವಾರ್ತೆ):
ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110/11ಕೆ.ವಿ ದಕ್ಷಿಣ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದ ವಾಹಕ ಬದಲಾಯಿಸುವ ಕಾರ್ಯವನ್ನು ತುರ್ತಾಗಿ ಕೈಗೊಳ್ಳುತ್ತಿರುವುದರಿಂದ ಮಾ.12 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 05 ಗಂಟೆಯವರೆಗೆ ಎಫ್43 - ಸಿದ್ದಾಪುರ ರಸ್ತೆ ಕೈಗಾರಿಕಾ ಮಾರ್ಗದ ಟಪಾಲ್ ಸ್ಟೀಲ್, ಸಿದ್ದಾಪುರ ರಸ್ತೆ, ಕೈಗಾರಿಕಾ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕೆಂದು ಜೆಸ್ಕಾಂನ ಕಾರ್ಯ ಮತ್ತು ಪಾಲನಾ ಗ್ರಾಮೀಣ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಮೋಹನಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ