ಶುಕ್ರವಾರ, ಮಾರ್ಚ್ 14, 2025

ಮಾ.15 ರಂದು ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಪರಿಚಯ ಮತ್ತು ಜಾಗೃತಿ ಕಾರ್ಯಾಗಾರ

ಬಳ್ಳಾರಿ,ಮಾ.14(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಮಾಹಿತಿ ಶಿಕ್ಷಣ ಸಂವಹನ ವಿಭಾಗ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟಿçÃಯ ಆರೋಗ್ಯ ಅಭಿಯಾನದಡಿ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಪರಿಚಯ ಮತ್ತು ಜಾಗೃತಿ ಕಾರ್ಯಾಗಾರವನ್ನು ಮಾ.15 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ಕಾರ್ಯಾಗಾರವನ್ನು ಉದ್ಘಾಟಿಸುವರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಶಸ್ತçಚಿಕಿತ್ಸಕ ಡಾ.ಬಸರೆಡ್ಡಿ, ವಾರ್ತಾ ಮತ್ತು ಸಾರ್ವಜನಿಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ತುಕಾರಾಂ ರಾವ್ ಬಿ.ವಿ., ಜಿಲ್ಲಾ ಆರೋಗ್ಯ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಡಾ.ಹನುಮಂತಪ್ಪ, ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಮರಿಯಂಬಿ ವಿ.ಕೆ., ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಇಂದ್ರಾಣಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ವೀರೇಂದ್ರ ಕುಮಾರ್ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ ಅವರು ಪ್ರಾಸ್ತಾವಿಕವಾಗಿ ಮಾತನಾಡುವರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ ಅವರು ಸ್ವಾಗತ ಹಾಗೂ ನಿರೂಪಣೆ ಮಾಡುವರು ಎಂದು ಪ್ರಕಟಣೆ ತಿಳಿಸಿದೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ