ಶುಕ್ರವಾರ, ಮಾರ್ಚ್ 14, 2025

ಕಂಪ್ಲಿ: ಮಾ.15 ರಂದು ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ

ಬಳ್ಳಾರಿ,ಮಾ.14(ಕರ್ನಾಟಕ ವಾರ್ತೆ): ಕಂಪ್ಲಿ ಜೆಸ್ಕಾಂ ವತಿಯಿಂದ ಕಂಪ್ಲಿ ವ್ಯಾಪ್ತಿಗೆ ಬರುವ ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರಿಗೆ ವಿದ್ಯುತ್ ಸಂಬAಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಮಾ.15 ರಂದು ಮಧ್ಯಾಹ್ನ 12 ಗಂಟೆಗೆ ಕಂಪ್ಲಿ ಜೆಸ್ಕಾಂ ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ ಆಯೋಜಿಸಲಾಗಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಂಪ್ಲಿ ಜೆಸ್ಕಾಂನ ಸಹಾಯಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ