ಸೋಮವಾರ, ಮಾರ್ಚ್ 17, 2025

ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬಳ್ಳಾರಿ,ಮಾ.17(ಕರ್ನಾಟಕ ವಾರ್ತೆ): ನಗರದ 03 ಪರೀಕ್ಷಾ ಕೇಂದ್ರಗಳಲ್ಲಿ ಮಾ.18 ರಿಂದ 21 ರ ವರೆಗೆ ಲೋಕೋಪಯೋಗಿ ಇಲಾಖೆಯ ಹೈದರಾಬಾದ್ ಕರ್ನಾಟಕ ವೃಂದದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ (ಗ್ರೇಡ್-1) ಗ್ರೂಪ್-ಎ ವೃಂದದ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣವನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ರ ಕಲಂ 163 ಮೇರೆಗೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣದಲ್ಲಿನ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‌ನೆಟ್ ಸೆಂಟರ್‌ಗಳನ್ನು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಿ ಆದೇಶಿಸಿದ್ದಾರೆ. ಆ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶವನ್ನು ನಿಷೇಧಿಸಿದೆ. ಈ ಆದೇಶವು ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ