ಶುಕ್ರವಾರ, ಮಾರ್ಚ್ 14, 2025
ಮಾ.21 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 | ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ
ಬಳ್ಳಾರಿ,ಮಾ.14(ಕರ್ನಾಟಕ ವಾರ್ತೆ):
ಜಿಲ್ಲೆಯಾದ್ಯಂತ 64 ಪರೀಕ್ಷಾ ಕೇಂದ್ರಗಳಲ್ಲಿ ಮಾ.21 ರಿಂದ ಏ.04 ರವರೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣವನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ರ ಕಲಂ 163 ಮೇರೆಗೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣದಲ್ಲಿನ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‌ನೆಟ್ ಸೆಂಟರ್‌ಗಳನ್ನು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಿ ಆದೇಶಿಸಿದ್ದಾರೆ.
ಆ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶವನ್ನು ನಿಷೇಧಿಸಿದೆ. ಈ ಆದೇಶವು ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ