ಸೋಮವಾರ, ಮಾರ್ಚ್ 24, 2025

ಮಾ.25 ರಂದು ಮದ್ಯ ಮತ್ತು ಮಾದಕ ದುಷ್ಪರಿಣಾಮ ಕುರಿತು ವಿಚಾರ ಸಂಕಿರಣ

ಬಳ್ಳಾರಿ,ಮಾ.24(ಕರ್ನಾಟಕ ವಾರ್ತೆ): ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬಳ್ಳಾರಿ ಮತ್ತು ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು (ಸ್ವಾಯತ್ತ), ಬಳ್ಳಾರಿ ಹಾಗೂ ರಾಷ್ಟಿçÃಯ ಸೇವಾ ಯೋಜನೆ ಎ,ಬಿ,ಸಿ ಮತ್ತು ಡಿ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಮಾ.25 ರಂದು ಬೆಳಿಗ್ಗೆ 10 ಗಂಟೆಗೆ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ‘ಮದ್ಯ ಮತ್ತು ಮಾದಕ ದುಷ್ಪರಿಣಾಮ ಕುರಿತು ವಿಚಾರ ಸಂಕಿರಣ’ ಆಯೋಜಿಸಲಾಗಿದೆ. ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರಹ್ಲಾದ ಚೌದ್ರಿ ಅವರು ಕಾರ್ಯಕ್ರಮದ ಉದ್ಘಾಟನೆ ಮತ್ತು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ವೀರೇಂದ್ರ ಕುಮಾರ್ ಅವರು ವಿಶೇಷ ಉಪನ್ಯಾಸಕರಾಗಿ ಭಾಗವಹಿಸುವರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಬಿ.ವಿ.ತುಕಾರಾಂ ರಾವ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ರಾಷ್ಟಿçÃಯ ಸೇವಾ ಯೋಜನೆಯ ಎ ಘಟಕದ ಕಾರ್ಯಕ್ರಮಾಧಿಕಾರಿ ಪ್ರೊ.ಬಿ.ರಾಮಸ್ವಾಮಿ, ಬಿ ಘಟಕದ ಕಾರ್ಯಕ್ರಮಾಧಿಕಾರಿ ಡಾ.ಚನ್ನಬಸವಯ್ಯ ಹೆಚ್.ಎಂ., ಸಿ ಘಟಕದ ಕಾರ್ಯಕ್ರಮಾಧಿಕಾರಿ ಪ್ರೊ.ಪ್ರವೀಣ್ ಕುಮಾರ್, ಡಿ ಘಟಕದ ಕಾರ್ಯಕ್ರಮಾಧಿಕಾರಿ ಪ್ರೊ.ನಾಜಿಯಾ ಖಾಜಿ ಸೇರಿದಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ