ಶನಿವಾರ, ಮಾರ್ಚ್ 1, 2025

ಸರ್ಕಾರಿ ಆದರ್ಶ ವಿದ್ಯಾಲಯದ 6ನೇ ತರಗತಿ ದಾಖಲಾತಿಗೆ ಅರ್ಜಿ ವಿಸ್ತರಣೆ

ಬಳ್ಳಾರಿ,ಮಾ.01(ಕರ್ನಾಟಕ ವಾರ್ತೆ): ನಗರದ ಹಿರಿಯಾಳಕುಡಂನ ಈದ್ಗಾ ರಸ್ತೆಯ ಸರ್ಕಾರಿ ಆದರ್ಶ ವಿದ್ಯಾಲಯ ಶಾಲೆಗೆ 2025-26ನೇ ಸಾಲಿನ 6ನೇ ತರಗತಿ ದಾಖಲಾತಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ವಿಸ್ತರಿಸಲಾಗಿದೆ ಎಂದು ಶಾಲೆಯ ಮುಖ್ಯ ಗುರುಗಳು ತಿಳಿಸಿದ್ದಾರೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಈಗ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಪ್ರವೇಶ ಪರೀಕ್ಷೆಗೆ ಅರ್ಜಿಯನ್ನು ಅಂತರ್ ಜಾಲದಲ್ಲಿ (ಆನ್‌ಲೈನ್)WWW.viಜಥಿಚಿvಚಿhiಟಿi.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಯನ್ನು ಮಾ.05 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕುರುಗೋಡು ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಮಾನ್ವಯಾಧಿಕಾರಿಗಳ ಕಚೇರಿ ಮತ್ತು ಕುರುಗೋಡು ಆದರ್ಶ ವಿದ್ಯಾಲಯ ಶಾಲೆಯ ಮುಖ್ಯಗುರುಗಳ ಕಚೇರಿ ಅಥವಾ ಮೊ.9740738762 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ