ಶುಕ್ರವಾರ, ಮಾರ್ಚ್ 14, 2025
ಪ್ರವಾಸೋದ್ಯಮ ಇಲಾಖೆ: ಅಂತಿಮ ಆಯ್ಕೆ ಪಟ್ಟಿ ಪ್ರಕಟ
ಬಳ್ಳಾರಿ,ಮಾ.14(ಕರ್ನಾಟಕ ವಾರ್ತೆ):
ಪ್ರವಾಸೋದ್ಯಮ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಉದ್ಯಮಶೀಲತೆ ತರಬೇತಿ ನೀಡುವುದು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟಿನ್ ನಡೆಸಲು ಸಹಾಯಧನ ನೀಡಲು ಬಳ್ಳಾರಿ ಜಿಲ್ಲೆಗೆ ನಿಗಧಿಪಡಿಸಿರುವ ಗುರಿಗಳಂತೆ ಅಂತಿಮ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ.
ಆಯ್ಕೆ ಪಟ್ಟಿಯನ್ನು ಉಪ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಲೋಟಸ್ ಮಹಲ್ ಹತ್ತಿರ, ಕಮಲಾಪುರದ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.08394-295640 ಗೆ ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಪ್ರಭುಲಿಂಗ ತಳಕೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ