ಮಂಗಳವಾರ, ಮಾರ್ಚ್ 18, 2025

ಕರ್ನಾಟಕ ಸಾಹಿತ್ಯ ಅಕಾಡೆಮಿ: ಅರ್ಜಿ ಆಹ್ವಾನ

ಬಳ್ಳಾರಿ,ಮಾ.18(ಕರ್ನಾಟಕ ವಾರ್ತೆ): ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೊಟಗೋಡಿ ಹಾವೇರಿ ಜಿಲ್ಲೆ ಇವರ ಸಹಯೋಗದಲ್ಲಿ ಗಿರಿಜನ ಉಪಯೋಜನೆಯಡಿ ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳು ಎಂಬ ಹೆಸರಿನಲ್ಲಿ 3 ದಿನಗಳ ಕಮ್ಮಟವನ್ನು ಏಪ್ರಿಲ್ 21, 22 ಮತ್ತು 23 ರಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೊಟಗೋಡಿ, ಹಾವೇರಿ ಜಿಲ್ಲೆಯಲ್ಲಿ ನಡೆಸಲು ಉದ್ದೇಶಿಸಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿಯಿರುವ 20 ರಿಂದ 45 ವರ್ಷ ವಯಸ್ಸುಳ್ಳ ಪರಿಶಿಷ್ಟ ಪಂಗಡಕ್ಕೆ ಸೇರಿದ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಏ.05 ಕೊನೆಯ ದಿನ. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್ ಸೈಟ್ http://karnatakasahithyaacademy.org ಇಂದ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟಾçರ್ ಕರಿಯಪ್ಪ.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ