ಮಂಗಳವಾರ, ಮಾರ್ಚ್ 18, 2025
ರಾಮಕೃಷ್ಣ ವಿದ್ಯಾಶಾಲೆ: ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
ಬಳ್ಳಾರಿ,ಮಾ.18(ಕರ್ನಾಟಕ ವಾರ್ತೆ):
ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-2026ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಹಾಗೂ ಶುಚಿತ್ವ ವೃತ್ತಿಯಲ್ಲಿ ತೊಡಗಿರುವ ಪೋಷಕರ ಪ್ರತಿಭಾವಂತ ಗಂಡು ಮಕ್ಕಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ನೀಡಿ ಶ್ರೀ ರಾಮಕೃಷ್ಣ ವಿದ್ಯಾಶಾಲೆ ಮೈಸೂರು, ಇಲ್ಲಿಗೆ 9ನೇ ತರಗತಿಗೆ ಸೇರಿಸಲು ಜಿಲ್ಲೆಯಿಂದ 04 ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ 6 ಮತ್ತು 7ನೇ ತರಗತಿಯ ಅಂಕಪಟ್ಟಿಯೊAದಿಗೆ ಮಾ.25 ರೊಳಗಾಗಿ ಇದೇ ಕಚೇರಿ ಅರ್ಜಿ ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಮಮತಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ