ಸೋಮವಾರ, ಮಾರ್ಚ್ 17, 2025

ವ್ಯಕ್ತಿ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಮಾ.17(ಕರ್ನಾಟಕ ವಾರ್ತೆ): ಸಿರುಗುಪ್ಪ ಪಟ್ಟಣದ ವಿವಿ ನಗರದ 13ನೇ ವಾರ್ಡ್ನ ನಿವಾಸಿ ಎಲ್.ವಸಂತ ಕುಮಾರ್ ಎನ್ನುವ 44 ವರ್ಷದ ವ್ಯಕ್ತಿಯು 2023 ರ ಅ.05 ರಂದು ದುಡಿಯಲು ಬೆಂಗಳೂರಿಗೆ ಹೋಗುತ್ತೇನೆಂದು ಹೇಳಿ ಹೋದವನು ಮರಳಿ ಮನೆಗೆ ಬಾರದೇ ಕಾಣೆಯಾಗಿರುತ್ತಾನೆ. ಈ ಕುರಿತು ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ. ಚಹರೆ ಗುರುತು: 6.1 ಅಡಿ ಎತ್ತರ, ಕೋಲು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಬಲ ಹೊಟ್ಟೆಯ ಭಾಗದಲ್ಲಿ ಹಳೆ ಅಪರೇಷನ್ ಕಲೆ ಗುರುತು ಇರುತ್ತದೆ. ಕನ್ನಡ, ತೆಲುಗು, ಹಿಂದಿ, ಇಂಗ್ಲೀಷ್ ಭಾಷೆ ಮಾತನಾಡುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಕಂದು, ಬಿಳಿ ಚೌಕಳಿ ಬಣ್ಣದ ತುಂಬು ತೋಳಿನ ಅಂಗಿ, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಕಾಣೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಸಿರುಗುಪ್ಪ ಪೊಲೀಸ್ ಠಾಣೆಯ ಪಿಎಸ್‌ಐ ದೂ.08396-220333, ಸಿರುಗುಪ್ಪ ಸಿಪಿಐ ದೂ.08396-220003, ಸಿರುಗುಪ್ಪ ಉಪವಿಭಾಗ ಡಿಎಸ್‌ಪಿ ದೂ.08396-276000, ಬಳ್ಳಾರಿ ಎಸ್‌ಪಿ ಕಚೇರಿ ದೂ.08392-258400 ಗೆ ಸಂಪರ್ಕಿಸಬಹುದು ಎಂದು ಪ್ರಕ ಟಣೆಯಲ್ಲಿ ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ