ಸೋಮವಾರ, ಮಾರ್ಚ್ 3, 2025
ರಾಜ್ಯಮಟ್ಟದ ಬುಡಕಟ್ಟು ಉತ್ಸವ ಮುಂದೂಡಿಕೆ
ಬಳ್ಳಾರಿ,ಮಾ.03(ಕರ್ನಾಟಕ ವಾರ್ತೆ):
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2024-25ನೇ ಸಾಲಿನ ಪರಿಶಿಷ್ಟ ಪಂಗಡಗಳ ಉಪಯೋಜನೆಯಡಿ ರಾಜ್ಯ ಮಟ್ಟದ ಬುಡಕಟ್ಟು ಉತ್ಸವ ಕಾರ್ಯಕ್ರಮವನ್ನು ಮಾ.08 ರಂದು ಬಳ್ಳಾರಿಯಲ್ಲಿ ಆಯೋಜಿಸಲು ಉದ್ದೇಶಿಸಲಾಗಿತ್ತು. ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು, ವಿಧಾನ ಮಂಡಲದ ಬಜೆಟ್ ಅಧಿವೇಶನ ನಡೆಯುತ್ತಿರುವುದರಿಂದ ಅಧಿವೇಶನ ಮುಕ್ತಾಯವಾದ ನಂತರ ಉತ್ಸವ ಆಯೋಜಿಸಲು ಸೂಚಿಸಿದ್ದು, ಹಾಗಾಗಿ ಮಾ.08 ರಂದು ನಡೆಯಬೇಕಿದ್ದ ರಾಜ್ಯ ಮಟ್ಟದ ಬುಡಕಟ್ಟು ಉತ್ಸವ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ