ಸೋಮವಾರ, ಮಾರ್ಚ್ 17, 2025
ವ್ಯಕ್ತಿ ನಾಪತ್ತೆ: ಪತ್ತೆಗೆ ಮನವಿ
ಬಳ್ಳಾರಿ,ಮಾ.17(ಕರ್ನಾಟಕ ವಾರ್ತೆ):
ನಗರದ ಕಂಟೋನ್‌ಮೆAಟ್ ತಿಲಕ್‌ನಗರದ ವಾರ್ಡ್ ನಂ.30, 3ನೇ ಕ್ರಾಸ್‌ನ ನಿವಾಸಿಯಾದ ರಾಜು ನಾಯ್ಕ ಎನ್ನುವ 30 ವರ್ಷದ ವ್ಯಕ್ತಿಯು ಮಾ.08 ರಂದು ಕಾಣೆಯಾಗಿದ್ದು, ಈ ಕುರಿತು ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೋಲಿಸ್ ಸಬ್ ಇನ್ಸ್ಪೆಕ್ಟರ್ ಅವರು ತಿಳಿಸಿದ್ದಾರೆ.
ಚಹರೆ ಗುರುತು:
ಅಂದಾಜು 5.6 ಅಡಿ ಎತ್ತರ, ದುಂಡು ಮುಖ, ಗೋದಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಕಡು ಸಿಮೆಂಟ್ ಬಣ್ಣದ ಶರ್ಟ್ ಮತ್ತು ನೀಲಿ ಬಣ್ಣದ ಫಾರ್ಮಲ್ ಪ್ಯಾಂಟ್ ಧರಿಸಿರುತ್ತಾನೆ.
ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಕೌಲ್ ಬಜಾರ್ ಪೊಲೀಸ್ ಠಾಣೆಯ ದೂ.08392-240731,244145, ಪಿಐ ಮೊ.9480803047, ಪಿಎಸ್‌ಐ ಮೊ.94808203085 ಅಥವಾ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ