ಗುರುವಾರ, ಮಾರ್ಚ್ 6, 2025
ಕೃಷಿ ಇಲಾಖೆ: ಆಕ್ಷೇಪಣೆಗಳಿಗೆ ಆಹ್ವಾನ
ಬಳ್ಳಾರಿ,ಮಾ.06(ಕರ್ನಾಟಕ ವಾರ್ತೆ):
ಕೃಷಿ ಇಲಾಖೆ ವತಿಯಿಂದ 2023-24 ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಸಲ್ಲಿಸಿದ ಮುಂಗಾರು ಹಂಗಾಮಿನ ಬೆಳೆ ವಿಮೆ ಪ್ರಸ್ತಾವನೆಗಳು ಬೆಳೆ ಸಮೀಕ್ಷೆಯೊಂದಿಗೆ ಹೊಂದಾಣಿಕೆಯಾಗದೇ ಇರುವ ಕುರಿತು ವಿಮಾ ಸಂಸ್ಥೆಯವರಿAದ ತಿರಸ್ಕೃತಗೊಂಡ ಪ್ರಸ್ತಾವನೆಗಳಿಗೆ ಆಕ್ಷೇಪಣೆ ಸಲ್ಲಿಸಬಹುದು ಎಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಬಳ್ಳಾರಿ ತಾಲ್ಲೂಕಿನಲ್ಲಿ 23 ಪ್ರಸ್ತಾವನೆ ಹಾಗೂ ಕುರುಗೋಡು ತಾಲ್ಲೂಕಿನಲ್ಲಿ 3 ಪ್ರಸ್ತಾವನೆ ತಿರಸ್ಕೃತಗೊಂಡಿರುತ್ತವೆ. ತಿರಸ್ಕೃತಗೊಂಡ ರೈತರ ಪ್ರಸ್ತಾವನೆ ವಿವರಗಳನ್ನು ಈಗಾಗಲೇ ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ.
ಹಾಗಾಗಿ ರೈತರು ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಮಾ.10 ರೊಳಗೆ ಸಲ್ಲಿಸಬೇಕು. ಮುಂದುವರೆದು ನಿಗದಿತ ಸಮಯದಲ್ಲಿ ಆಕ್ಷೇಪಣೆ ಸಲ್ಲಿಸದಿದ್ದಲ್ಲಿ ಅಂತಹ ಪ್ರಸ್ತಾವನೆಗಳನ್ನು ಅಸಿಂಧು ಎಂದು ಪರಿಗಣಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಂಬAಧಪಟ್ಟ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ