ಬುಧವಾರ, ಮಾರ್ಚ್ 19, 2025

ಅನಾಮಧೇಯ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ

ಬಳ್ಳಾರಿ,ಮಾ.19(ಕರ್ನಾಟಕ ವಾರ್ತೆ): ನಗರದ ಬಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಒಬಿಜಿ ವಾರ್ಡ್ ಹತ್ತಿರ ಸುಮಾರು 40 ವರ್ಷದ ಅಸ್ವಸ್ಥ ಅನಾಮಧೇಯ ವ್ಯಕ್ತಿಯು ಮಾ.17 ರಂದು ಮೃತಪಟ್ಟಿದ್ದು, ಮೃತನ ವಾರಸುದಾರರ ಬಗ್ಗೆ ಮಾಹಿತಿ ಇರುವುದಿಲ್ಲ. ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಕೌಲ್ ಬಜಾರ್ ಪೋಲಿಸ್ ಠಾಣಾಧಿಕಾರಿಗಳು ಮನವಿ ಮಾಡಿದ್ದಾರೆ. ಚಹರೆ: ಅಂದಾಜು 5.6 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ಕೋಲು ಮುಖ, ಕಪ್ಪು ಮತ್ತು ಬಿಳಿ ಕೂದಲು, ಹಾಗೂ ಎದೆಯ ಮೇಲೆ ಹಳೆಗಾಯದ ಗುರುತು ಇರುತ್ತದೆ. ಬೂದಿ ಬಣ್ಣದ ಚಕ್ಸ್ ಶರ್ಟ್, ಬಿಳಿ ಬಣ್ಣದ ಲುಂಗಿ ಧರಿಸಿರುತ್ತಾನೆ. ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕೌಲ್ ಬಜಾರ್ ಪೊಲೀಸ್ ಠಾಣೆಯ ದೂ.08392-240731, ಪಿಎಸ್‌ಐ ಮೊ.9480803084, ಪಿಐ ಮೊ.9480803047 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100, 258102 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ