ಶನಿವಾರ, ಮಾರ್ಚ್ 29, 2025
ಜೆಎಸ್‌ಎಸ್ ಶಾಲೆ ಹಾಗೂ ಉಚಿತ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
ಬಳ್ಳಾರಿ,ಮಾ.29(ಕರ್ನಾಟಕ ವಾರ್ತೆ):
ಮೈಸೂರಿನ ಸುತ್ತೂರು ಶ್ರೀಕ್ಷೇತ್ರದ ಜೆಎಸ್‌ಎಸ್ ಶಾಲೆಗೆ ಹಾಗೂ ಉಚಿತ ವಿದ್ಯಾರ್ಥಿ ನಿಲಯಕ್ಕೆ 2025-26ನೇ ಸಾಲಿನ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕನ್ನಡ ಮಾಧ್ಯಮಕ್ಕೆ 1 ರಿಂದ 8ನೇ ತರಗತಿವರೆಗೆ ಮತ್ತು ಇಂಗ್ಲೀಷ್ ಮಾಧ್ಯಮಕ್ಕೆ 1, 5, 6 ಹಾಗೂ 8ನೇ ತರಗತಿಗಳಿಗೆ ಮಾತ್ರ ಪ್ರವೇಶಕ್ಕೆ ಅವಕಾಶವಿದೆ. ಗ್ರಾಮಾಂತರ ಪ್ರದೇಶದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಬಾಲಕ ಹಾಗೂ ಬಾಲಕಿಯರಿಗೆ ಪ್ರವೇಶ ನೀಡಲಾಗುವುದು.
ಅರ್ಜಿಯನ್ನು ಶಾಲಾ ಕಚೇರಿಯಲ್ಲಿ ಖುದ್ದಾಗಿ ಪಡೆಯಬಹುದು ಅಥವಾ www.jssschoolsuttur.org ಹಾಗೂ www.jssonline.org ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ದೂರವಾಣಿಯಿಂದ ಸಂಪರ್ಕಿಸಿದರೆ ವಾಟ್ಸ್ಆಪ್ ಮೂಲಕವೂ ಅರ್ಜಿ ನಮೂನೆ ಕಳುಹಿಸಿಕೊಡಲಾಗುವುದು.
ಅಂಚೆ ಮುಖಾಂತರ ಅರ್ಜಿ ಪಡೆಯಲು ಇಚ್ಛಿಸುವವರು, ವಿದ್ಯಾರ್ಥಿಯು ಪ್ರವೇಶ ಬಯಸುವ ತರಗತಿಯ ವಿವರ ಹಾಗೂ ಸ್ವ-ವಿಳಾಸವುಳ್ಳ 5 ರೂ.ಗಳ ಪೋಸ್ಟಲ್ ಸ್ಟಾö್ಯಂಪ್ ಹಚ್ಚಿದ ಲಕೋಟೆಯನ್ನು ಆಡಳಿತಾಧಿಕಾರಿಗಳು, ಜೆಎಸ್‌ಎಸ್ ಸಂಸ್ಥೆಗಳು, ಸುತ್ತೂರು-571129, ನಂಜನಗೂಡು ತಾಲ್ಲೂಕು, ಮೈಸೂರು ಜಿಲ್ಲೆ. ಈ ವಿಳಾಸಕ್ಕೆ ಕಳುಹಿಸಿ ಪಡೆಯಬಹುದು.
ಅರ್ಜಿಗಳನ್ನು ಏ.02 ರಿಂದ ನೀಡಲಾಗುವುದು. ಭರ್ತಿ ಮಾಡಿದ ಅರ್ಜಿಗಳನ್ನು ಮೇ.15 ರ ಒಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಮೊ.7411486938 ಅಥವಾ ದೂ.08221-232332 ಗೆ ಸಂಪರ್ಕಿಸಬಹುದು ಎಂದು ಜೆಎಸ್‌ಎಸ್ ಶಾಲೆಯ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ