ಗುರುವಾರ, ಮಾರ್ಚ್ 27, 2025
ಐಎಎಸ್ ಮತ್ತು ಕೆಎಎಸ್ ಪರೀಕ್ಷೆಗಳಿಗೆೆ ತರಬೇತಿ
ಬಳ್ಳಾರಿ,ಮಾ.27(ಕರ್ನಾಟಕ ವಾರ್ತೆ):
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕ ಸೇವಾ ಆಯೋಗದ ಐಎಎಸ್ ಹಾಗೂ ಕರ್ನಾಟಕ ಲೋಕ ಸೇವಾ ಆಯೋಗದ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನೀಡಲು ನಿರ್ಧರಿಸಲಾಗಿದೆ.
ಆಸಕ್ತರು ಏ.02 ರೊಳಗಾಗಿ ಬೆಳಿಗ್ಗೆ 10 ಗಂಟೆಯಿAದ ಸಂಜೆ 04.30 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ದೂ.0821-2515944 ಗೆ ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವÀ ಪ್ರೊ.ಕೆ.ಬಿ ಪ್ರವೀಣ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ