ಬುಧವಾರ, ಮಾರ್ಚ್ 19, 2025
ಸರ್ಕಾರಿ ಆದರ್ಶ ವಿದ್ಯಾಲಯ: ಪ್ರವೇಶ ಪತ್ರ ಪ್ರಕಟ
ಬಳ್ಳಾರಿ,ಮಾ.19(ಕರ್ನಾಟಕ ವಾರ್ತೆ):
ನಗರದ ಹಿರಾಳ್ ಕುಡಂನ ಈದ್ಗಾ ರಸ್ತೆಯ ಸರ್ಕಾರಿ ಆದರ್ಶ ವಿದ್ಯಾಲಯ (ಆರ್.ಎಂ.ಎಸ್.ಎ) ಶಾಲೆಗೆ 2025-26ನೇ ಸಾಲಿನ 6ನೇ ತರಗತಿ ದಾಖಲಾತಿಗೆ ಅರ್ಜಿ ಸಲ್ಲಿಕೆಯಾಗಿರುವ ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಗೆ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಆನ್‌ಲೈನ್ ವೆಬ್‌ಸೈಟ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಶಾಲೆಯ ಮುಖ್ಯ ಗುರುಗಳು ತಿಳಿಸಿದ್ದಾರೆ.
ಪ್ರವೇಶ ಪತ್ರಗಳನ್ನು WWW.schooleducation.kar.nic.in ಅಥವಾ WWW.vidyavahini.karnataka.gov.in ಅಂತರ್ ಜಾಲದ (ಆನ್‌ಲೈನ್) ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಮಾ.15 ಕೊನೆಯ ದಿನ ಆಗಿದೆ.
ಕಡ್ಡಾಯವಾಗಿ ದೃಢೀಕರಿಸಿದ ಪ್ರವೇಶ ಪತ್ರವನ್ನು ಪ್ರವೇಶ ಪರೀಕ್ಷೆಗೆ ಹಾಜರುಪಡಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಆದರ್ಶ ವಿದ್ಯಾಲಯ ಅಥವಾ ಮೊ.9740738762 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ