ಮಂಗಳವಾರ, ಮಾರ್ಚ್ 18, 2025
ಅನಾಮಧೇಯ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ
ಬಳ್ಳಾರಿ,ಮಾ.18(ಕರ್ನಾಟಕ ವಾರ್ತೆ):
ನಗರದ ಬ್ರೂಸ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಮಾರ್ಕೆಟ್ ಹತ್ತಿರ ನೀಲಕಂಠೇಶ್ವರ ದೇವಸ್ಥಾನದ ಮುಂದೆ ಸುಮಾರು 45-50 ವರ್ಷದ ಅನಾಮಧೇಯ ವ್ಯಕ್ತಿಯು ಅಸ್ವಸ್ಥರಾಗಿ, ಯಾವುದೋ ಖಾಯಿಲೆಯಿಂದ ಮಾ.18 ರಂದು ಮೃತಪಟ್ಟಿದ್ದು, ಮೃತನ ವಾರಸುದಾರರ ಬಗ್ಗೆ ಮಾಹಿತಿ ಇರುವುದಿಲ್ಲ. ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿಗಳು ಮನವಿ ಮಾಡಿದ್ದಾರೆ.
ಚಹರೆ: ಅಂದಾಜು 5.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ದುಂಡು ಮುಖ, ತಲೆಯ ಮೇಲೆ ಕಪ್ಪು ಕೂದಲು, ಮುಖದಲ್ಲಿ ಕಪ್ಪು ಗಡ್ಡ, ಮುಖದ ಎಡಭಾಗದ ಕನ್ನೆ ಮೇಲೆ ಮಚ್ಚೆ ಹಾಗೂ ಕಲೆ ಇರುತ್ತದೆ. ಬಾದಮಿ ಬಣ್ಣದ ಶರ್ಟ್, ಬಿಳಿ ಬಣ್ಣದ ಲುಂಗಿ ಧರಿಸಿರುತ್ತಾನೆ.
ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬ್ರೂಸ್‌ಪೇಟೆ ಪೊಲೀಸ್ ಠಾಣೆಯ ದೂ.08392-272022, ಪಿಎಸ್‌ಐ ಮೊ.9480803081, ಪಿಐ ಮೊ.9480803045 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100, 258102 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ