ಮಂಗಳವಾರ, ಏಪ್ರಿಲ್ 29, 2025
*ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ:2025* | *ವ್ಯವಸ್ಥಿತ ಸಮೀಕ್ಷಾ ಕಾರ್ಯ ಕೈಗೊಳ್ಳಿ: ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್*
ಬಳ್ಳಾರಿ,ಏ.29(ಕರ್ನಾಟಕ ವಾರ್ತೆ):
ನ್ಯಾ.ಹೆಚ್.ಎನ್.ನಾಗಮೋಹನ ದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗದ ನಿರ್ದೇಶನದಂತೆ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ ಕಾರ್ಯವು ಮೇ 05 ರಿಂದ 23 ರ ವರೆಗೆ 03 ಹಂತಗಳಲ್ಲಿ ನಡೆಯಲಿದ್ದು, ಸಮೀಕ್ಷೆ ಕಾರ್ಯವನ್ನು ವ್ಯವಸ್ಥಿತವಾಗಿ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ನಿರ್ದೇಶನ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ರಾಜ್ಯ ಮಟ್ಟದಲ್ಲಿ ತರಬೇತಿ ಪಡೆದ ಜಿಲ್ಲಾ ಮಟ್ಟದ ಮಾಸ್ಟರ್ ಟ್ರೆöÊನರ್‌ಗಳಿಂದ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾಸ್ಟರ್ ಟ್ರೆöÊನರ್‌ಗಳಿಗೆ ಮತ್ತು ತಾಂತ್ರಿಕ ಅಧಿಕಾರಿಗಳಿಗೆ ಸೋಮವಾರ ನಗರದ ಜಿಪಂ ಸಭಾಂಗಣದಲ್ಲಿ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿ ಜನಾಂಗದ ಕುಟುಂಬಗಳ ಸಮಗ್ರ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ಕೈಗೊಳ್ಳಲು ಸರ್ಕಾರ ನಿರ್ದೇಶಿಸಿದ್ದು, ವ್ಯವಸ್ಥಿತವಾಗಿ ಯಾವುದೇ ಕುಟುಂಬ ಈ ಸಮೀಕ್ಷೆಯಿಂದ ವಂಚಿತರಾಗದAತೆ ಕೈಗೊಳ್ಳಬೇಕು. ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆಯನ್ನು ಯಾವುದೇ ಲೋಪವಿಲ್ಲದೆ ವ್ಯವಸ್ಥಿತವಾಗಿ ಕೈಗೊಳ್ಳಲು ಸಂಬAಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಮೇ 09 ರಿಂದ 17 ರವರೆಗೆ ಸಮೀಕ್ಷೆ ದಾರರು ಮನೆ ಮನೆಗೆ ಭೇಟಿ ನೀಡಿ ಸಮೀಕ್ಷಾ ಭೇಟಿಯ ಉದ್ದೇಶ ಮನವರಿಕೆ ಮಾಡಿ ಮೊಬೈಲ್ ಆಪ್ ನಲ್ಲಿಯೇ ಮಾಹಿತಿಯನ್ನು ಬ್ಲಾಕ್ ಆಧಾರದಲ್ಲಿ ತಲಾ 300 ಮನೆಗಳ ಕುಟುಂಬಗಳ ಮಾಹಿತಿ ಸಂಗ್ರಹಿಸಬೇಕು. ನಂತರ ಮೇ 19 ರಿಂದ 21 ರವರೆಗೆ ಸಮೀಕ್ಷೆಯಲ್ಲಿ ಕೈಬಿಟ್ಟು ಹೋದ ಕುಟುಂಬಗಳನ್ನು ಗುರುತಿಸಿ ಮಾಹಿತಿ ಸಂಗ್ರಹಿಸಬೇಕು. ಇದರಲ್ಲಿಯೂ ಬಿಟ್ಟು ಹೋದ ಕುಟುಂಬಗಳಿದ್ದಲ್ಲಿ ಆನ್ ಲೈನ್ ಮೂಲಕ ಸಂಬAಧಪಟ್ಟ ಜನಾಂಗದವರು ತಾವಾಗಿಯೇ ಸಮೀಕ್ಷೆಯಡಿ ಮಾಹಿತಿ ನೀಡಲು ಅವಕಾಶ ಕಲ್ಪಿಸಲಾಗಿದೆ. ಕಾರಣ ಸಮೀಕ್ಷೆದಾರರು ಮತ್ತು ಸಂಬAಧಿಸಿದ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವಂತೆ ಅವರು ಸೂಚಿಸಿದರು.
ಸಮೀಕ್ಷೆಯ ಮೇಲ್ವಿಚಾರಣೆಗಾಗಿ ರಾಜ್ಯ ಮಟ್ಟದಲ್ಲಿ ಸಮಿತಿ ಇದ್ದು, ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಇದೆ. ರಾಜ್ಯದಲ್ಲಿ ಗುರುತಿಸಿದ 101 ಪರಿಶಿಷ್ಟ ಜಾತಿಗಳ ಜಣಗಣತಿ ನಡೆಯುತ್ತಿದ್ದು, ಇದರ ಅಂಗವಾಗಿ ಜಿಲ್ಲೆಯಲ್ಲಿ ವ್ಯವಸ್ಥಿತವಾಗಿ ಯಾವುದೇ ಲೋಪವಿವಿಲ್ಲದೆ ಪರಿಶಿಷ್ಟ ಜಾತಿ ಜನಾಂಗದ ಸಮೀಕ್ಷೆ ಕಾರ್ಯ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ.ಬಿ ರಾಜ್ಯಮಟ್ಟದಲ್ಲಿ ತರಬೇತಿ ಪಡೆದ ಜಿಲ್ಲಾ ಮಟ್ಟದ ಮಾಸ್ಟರ್ ಟ್ರೆöÊನರ್‌ಗಳಾದ ಸಯ್ಯದ್ ಭಾಷಾ, ಮಲ್ಲಿಕಾರ್ಜುನ, ಕೆ.ಎಸ್.ಶಬರೀಶ್ ಗುಪ್ತ, ಸೇರಿದಂತೆ ತಾಲ್ಲೂಕು ಮಟ್ಟದ ಮಾಸ್ಟರ್ ಟ್ರೆöÊನರ್‌ಗಳು, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಮತ್ತೀತರರು ಉಪಸ್ಥಿತರಿದ್ದರು.
----------------
*ಅನಧೀಕೃತ ಗೈರು; ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ*
ಬಳ್ಳಾರಿ,ಏ.29(ಕರ್ನಾಟಕ ವಾರ್ತೆ):
ಸಂಡೂರು ತಾಲ್ಲೂಕಿನ ಮೆಟ್ರಿಕಿ ಬಿ.ಒ ನ ಜಿಡಿಎಸ್ ಬಿಪಿಎಂ ರವಿಕುಮಾರ್. ಎ ಅವರು 2020 ರ ಫೆ.04 ರಿಂದ ತಮ್ಮ ಕೆಲಸಕ್ಕೆ ಅನಧೀಕೃತವಾಗಿ ಗೈರು ಹಾಜರಾಗಿದ್ದು, ಈ ಕೂಡಲೇ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಬಳ್ಳಾರಿ ಅಂಚೆ ವಿಭಾಗದ ಅಂಚೆ ಅಧೀಕ್ಷಕ ಪಿ.ಚಿದಾನಂದ ಅವರು ತಿಳಿಸಿದ್ದಾರೆ.
ಈಗಾಗಲೇ ಇಲಾಖೆಯ ನಿಯಮಾನುಸಾರ ರವಿಕುಮಾರ್ ಗೆ ತಮ್ಮ ಆರೋಪ ಪಟ್ಟಿಯನ್ನು ಅಂಚೆಯ ಮೂಲಕ ಇಲಾಖೆಗೆ ತಿಳಿದಿರುವ ಎಲ್ಲಾ ವಿಳಾಸಗಳಿಗೆ ಕಳುಹಿಸಲಾಗಿದ್ದು, ಅವು ಬಟವಾಡೆಯಾಗದೇ ಹಿಂತಿರುಗಿ ಬಂದಿರುತ್ತವೆ.
ಹಾಗಾಗಿ ಈ ಬಗ್ಗೆ ಮತ್ತೊಮ್ಮೆ ಅವಕಾಶ ನೀಡುವ ಸಲುವಾಗಿ ಈ ಪ್ರಕಟಣೆಗೊಂಡ 15 ದಿನಗಳೊಳಗಾಗಿ ಖುದ್ದಾಗಿ ಮೆಮೋ ಪಡೆದುಕೊಳ್ಳಬೇಕು. ತಪ್ಪಿದಲ್ಲಿ ಗೈರು ಹಾಜರಿಯಲ್ಲಿ ಇಲಾಖೆಯ ನಿಯಮಗಳ ಪ್ರಕಾರ ಶಿಸ್ತು ಕ್ರಮ ಕೈಗೊಂಡು ಇತ್ಯರ್ಥಪಡಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
*ಮೇ 02 ರಂದು ವಿದ್ಯುತ್ ವ್ಯತ್ಯಯ*
ಬಳ್ಳಾರಿ,ಏ.29(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯಲ್ಲಿ ಗಿಡಗಳನ್ನು ಕಡಿಯುವ ಕಾರ್ಯ ಕೈಗೊಳ್ಳುತ್ತಿರುವುರಿಂದÀ ಮೇ 02 ರಂದು ಬೆಳಿಗ್ಗೆ 8.30 ಗಂಟೆಯಿAದ ಸಂಜೆ 5.30 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ವಿ) ತಿಳಿಸಿದ್ದಾರೆ.
*ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:*
ಎಫ್-33 ವ್ಯಾಪ್ತಿಯ ಕೆ.ಚ್.ಬಿ. ಕಾಲೋನಿ, ನೇತಾಜಿ ನಗರ, ಇನ್ನಾರೆಡ್ಡಿ ಲೇಔಟ್, ಇನ್‌ಫ್ಯಾಂಟರಿ ರಸ್ತೆ, ವಾಸವಿ ಶಾಲೆ, ಕೊಳಗಲ್ ರಸ್ತೆ, ವಿದ್ಯಾನಗರ, ಕಲ್ಯಾಣಿ ಕಾಲೋನಿ, ಭತ್ರಿ ರೋಡ್, ಭತ್ರಿ, ಗುರು ಕಾಲೋನಿ, ಸತ್ಯವಾಣಿ ನಗರ, ಸಿಧ್ಧಾರ್ಥ ನಗರ, ವಿಯಾನಿ ಶಾಲೆ.
ಎಫ್-73 ವ್ಯಾಪ್ತಿಯ ಬಸವನಕುಂಟೆ, ಕೋಟೆ ಪ್ರದೇಶ, 1 ನೇ ಗೇಟ್, 2 ನೇ ಗೇಟ್, ಸಿದ್ದಾರ್ಥ ನಗರ, ಸುಧಾಕ್ರಾಸ್, ಒ.ಪಿ.ಡಿ ಮತ್ತು ಎಫ್-77 ವ್ಯಾಪ್ತಿಯ ಒ.ಪಿ.ಡಿ, ಶಾಂತಿ ನಗರ, ಕೊಳಗಲ್ ರಸ್ತೆ, ಬಿಮ್ಸ್ ಕ್ಯಾಂಪಸ್ ಸೇರಿದಂತೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
*ವಿಜಯನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ: ಅರ್ಜಿ ಆಹ್ವಾನ*
ಬಳ್ಳಾರಿ,ಏ.29(ಕರ್ನಾಟಕ ವಾರ್ತೆ):
ವಿಜಯನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸ್ಥಳೀಯ ಯೋಜನಾ ಪ್ರದೇಶದಲ್ಲಿ ಬರುವ ಗ್ರಾಮಗಳಲ್ಲಿ ಭೂ ಮಾಲೀಕರು ಹಾಗೂ ಪ್ರಾಧಿಕಾರದ ವತಿಯಿಂದ ಜಂಟಿ ಸಹಯೋಗದೊಂದಿಗೆ ಎಲ್ಲಾ ಮೂಲಭೂತ ಸೌಕರ್ಯಗಳೊಂದಿಗೆ ಸುಂದರವಾದ ವಸತಿ ಯೋಜನೆಯನ್ನು ನಿರ್ಮಿಸುತ್ತಿದ್ದು, ನಿವೇಶನ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿಜಯನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸ್ಥಳೀಯ ಯೋಜನಾ ಪ್ರದೇಶದಲ್ಲಿ ಬರುವ ಗ್ರಾಮಗಳಲ್ಲಿ ಪ್ರಾಧಿಕಾರದ ವತಿಯಿಂದ ರೈತರ ಸಹಭಾಗಿತ್ವದ ಶೇ.50:50 ಅನುಪಾತದಡಿ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒಳಗೊಂಡ ವಸತಿ ಯೋಜನೆಯನ್ನು ರಚಿಸಿ ಸರ್ಕಾರದ ಅನುಮೋದನೆ ಪಡೆದುಕೊಂಡು ಸುಂದರವಾದ ವಸತಿ ಯೋಜನೆ ಅಭಿವೃದ್ಧಿಪಡಿಸಲಾಗುತ್ತದೆ.
ಬಡಾವಣೆ ರಚನೆ ಮಾಡಲು ಆಸಕ್ತಿ ಇರುವ ಭೂ ಮಾಲೀಕರು ಭೂ ಪರಿಹಾರಕ್ಕೆ ಬದಲಾಗಿ, ಪ್ರಾಧಿಕಾರದಿಂದ ರಚನೆ ಮಾಡಿದ ಯೋಜನೆಯಲ್ಲಿನ ನಿವೇಶನಗಳನ್ನು ಶೇ.50:50 ರ ಅನುಪಾತದಲ್ಲಿ (ಮೂಲೆ ನಿವೇಶನಗಳನ್ನು ಹೊರತುಪಡಿಸಿ) ರೈತರ ಭಾಗದ ಭಾಗಶಃ ಶೇ.50 ರಷ್ಟು ನಿವೇಶನಗಳನ್ನು (ಮೂಲೆ ನಿವೇಶನಗಳನ್ನು ಹೊರತುಪಡಿಸಿ) ಹಸ್ತಾಂತರಿಸಿ ಉಳಿದ ಪ್ರಾಧಿಕಾರದ ಭಾಗಶಃ ಶೇ.50 ರಷ್ಟು ನಿವೇಶನಗಳನ್ನು ಸಾರ್ವಜನಿಕರಿಗೆ ಯೋಗ್ಯ ದರದಲ್ಲಿ ನಿವೇಶನಗಳನ್ನು ಹಂಚಿಕೆ ಮಾಡಲಾಗುವುದು.
ಆಸಕ್ತಿವುಳ್ಳ ವಿಜಯನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸ್ಥಳೀಯ ಯೋಜನಾ ಪ್ರದೇಶದಲ್ಲಿ ಬರುವ ಗ್ರಾಮಗಳ ಪ್ರದೇಶ ವ್ಯಾಪ್ತಿಯ ಭೂ ಮಾಲೀಕರು / ರೈತರು ಯಾವುದೇ ಋಣಭಾರವಿಲ್ಲದೆ ಬಿಟ್ಟು ಕೊಡಲು ಹಾಗೂ ರಚನೆ ಮಾಡಲ್ಪಡುವ ವಸತಿ ವಿನ್ಯಾಸದಲ್ಲಿ ವಸತಿಗಾಗಿ ಕಾಯ್ದಿರಿಸಿದ ಪ್ರದೇಶದಲ್ಲಿ ಶೇ.50:50 ರಷ್ಟು ನಿವೇಶನಗಳನ್ನು ಪಡೆಯಲು ಇಚ್ಛೆಯುಳ್ಳವರು ತಮ್ಮ ಜಮೀನಿನ ಇತ್ತೀಚಿನ ಪಹಣಿ, ಸರ್ವೆ ನಕಾಶೆ, ಋಣ ಭಾರ ಪ್ರಮಾಣ ಪತ್ರ ಹಾಗೂ ಇನ್ನಿತರೆ ಅಗತ್ಯ ದಾಖಲೆಗಳನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪ್ರಾಧಿಕಾರದ ಕಚೇರಿ ದೂ.08395-295618 ಗೆ ಸಂಪರ್ಕಿಸಬಹುದು ಎಂದು ತೋರಣಗಲ್ಲಿನ ವಿಜಯನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಕೆ.ಹೆಚ್.ರಾಘವೇಂದ್ರ ಗುರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ಮೇ 09 ರಂದು ಕುಡತಿನಿ ಪಟ್ಟಣ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ
ಬಳ್ಳಾರಿ,ಏ.28(ಕರ್ನಾಟಕ ವಾರ್ತೆ):
ತಾಲ್ಲೂಕಿನ ಕುಡತಿನಿ ಪಟ್ಟಣ ಪಂಚಾಯಿತಿಯ ಅಧ್ಯಕ್ಷರ ಸ್ಥಾನಕ್ಕೆ ಮೇ 09 ರಂದು ಚುನಾವಣೆ ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ ಎಂದು ಬಳ್ಳಾರಿ ತಾಲ್ಲೂಕು ತಹಶೀಲ್ದಾರರು ತಿಳಿಸಿದ್ದಾರೆ.
-------------
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ: ಪ್ರವೇಶ ಪರೀಕ್ಷೆ ಸುಸೂತ್ರ
ಬಳ್ಳಾರಿ,ಏ.28(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ (ಆಂಗ್ಲ ಮಾಧ್ಯಮ) ಶಾಲೆ ಮತ್ತು ಡಾ.ಎ.ಪಿ.ಜಿ ಅಬ್ದುಲ್ ಕಲಾಂ ವಸತಿ (ಸಿಬಿಎಸ್‌ಸಿ) ಶಾಲೆಗಳ ದಾಖಲಾತಿಗಾಗಿ 2025-26 ನೇ ಶೈಕ್ಷಣಿಕ ವರ್ಷಕ್ಕೆ 6ನೇ ತರಗತಿ ಪ್ರವೇಶ ಪರೀಕ್ಷೆಯು ಭಾನುವಾರ ಸುಸೂತ್ರವಾಗಿ ನಡೆದಿದೆ.
ಜಿಲ್ಲೆಯಾದ್ಯಂತ ಒಟ್ಟು 1571 ಅರ್ಜಿಗಳು ಸಲ್ಲಿಕೆಯಾಗಿದ್ದವು. 05 ಕೇಂದ್ರಗಳಲ್ಲಿ ಪ್ರವೇಶ ಪರೀಕ್ಷೆ ನಡೆದಿದ್ದು, 595 ಗಂಡು ಮತ್ತು 473 ಹೆಣ್ಣು ಸೇರಿ ಒಟ್ಟು 1038 ವಿದ್ಯಾರ್ಥಿಗಳು ಹಾಜರಾಗಿದ್ದರು. ಅದರಲ್ಲಿ 503 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ.
-------------
ರಂಗಭೂಮಿ ಕಲಾವಿದರೊಂದಿಗೆ ಸಮಾಲೋಚನಾ ಸಭೆ | ಬಳ್ಳಾರಿಯು ರಂಗಭೂಮಿಯ ತವರೂರು: ಡಾ.ಸುಜಾತ ಜಂಗಮಶೆಟ್ಟಿ
ಬಳ್ಳಾರಿ,ಏ.28(ಕರ್ನಾಟಕ ವಾರ್ತೆ):
ಬಳ್ಳಾರಿ ಜಿಲ್ಲೆಯು ರಂಗಭೂಮಿಯ ತವರೂರರಾಗಿದೆ ಎಂದು ಕಲಬುರಗಿ ರಂಗಾಯಣದ ನಿರ್ದೇಶಕರಾದ ಡಾ.ಸುಜಾತ ಜಂಗಮಶೆಟ್ಟಿ ಅವರು ಹೇಳಿದರು.
ನಗರದ ಡಾ.ರಾಜ್ ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯದ ಹೊಂಗಿರಣ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ರಂಗಭೂಮಿ ಕಲಾವಿದರೊಂದಿಗೆ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕಲಬುರಗಿ ರಂಗಾಯಣವು ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳಿಗೂ ಹೊಂದಿಕೊಂಡಿದೆ. ಕಲಬುರಗಿ ರಂಗಾಯಣವನ್ನು ಕ.ಕ ಭಾಗದ ಹೋಬಳಿ ಮಟ್ಟದಲ್ಲಿಯೂ ತಲುಪಬೇಕು ಎಂಬುದು ಕಲಬುರಗಿ ರಂಗಾಯಣದ ಮುಖ್ಯ ಉದ್ದೇಶವಾಗಿದೆ ಎಂದರು.
ಬಳ್ಳಾರಿ ಜಿಲ್ಲೆಗೆ ಡಾ.ಜೋಳದರಾಶಿ ದೊಡ್ಡನಗೌಡ, ರಾಘವ, ಬೆಳಗಲ್ಲು ವೀರಣ್ಣ, ಸುಭದ್ರಮ್ಮ ಮಾನ್ಸೂರು ಸೇರಿದಂತೆ ಹಲವಾರು ಗಣ್ಯರ ಕೊಡುಗೆ ಅಪಾರವಿದೆ ಎಂದು ತಿಳಿಸಿದರು.
ಪ್ರಸ್ತುತದಲ್ಲಿ ರಂಗಭೂಮಿಯು ಅಳಿವಿಂಚಿನಲ್ಲಿದೆ. ರಂಗ ಕಲೆಯನ್ನು ಮತ್ತು ರಂಗಭೂಮಿ ಕಲಾವಿದರನ್ನು ಪ್ರೋತ್ಸಾಹಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಯುವಪೀಳಿಗೆಯು ಸಹ ರಂಗ ಪ್ರವೇಶಿಸಲು ಶಾಲಾ-ಕಾಲೇಜುಗಳಲ್ಲಿ ನಾಟಕ ರಂಗದ ಕುರಿತು ಅರಿವು ಸಂವಾದ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಹೇಳಿದರು.
*ರಂಗದಂಗಳದಲ್ಲಿ ಮಾತುಕತೆ:*
ಕಲಬುರಗಿ ವ್ಯಾಪ್ತಿಯ ಏಳು ಜಿಲ್ಲೆಗಳಲ್ಲಿನ ರಂಗಕಲಾವಿದರನ್ನು ಜೊತೆಗೂಡಿಸಿ ರಂಗನಾಟಕ ಉಳಿಯುವಿಕೆ ಮತ್ತು ಬೆಳೆಸುವಿಕೆಗೆ ಅನಿಸಿಕೆ-ಅಭಿಪ್ರಾಯಗಳನ್ನು ಸಂಗ್ರಹಿಸಲು ‘ರಂಗದಂಗಳದಲ್ಲಿ ಮಾತುಕತೆ’ ಸಭೆ ಏರ್ಪಡಿಸಲಾಗುವುದು ಎಂದರು.
*ನಾಟಕ ರಚನಾ ಶಿಬಿರ:*
ಕ.ಕ ಭಾಗದಲ್ಲಿ ಇನ್ನು ಹಳೆಯ ನಾಟಕ ಶೈಲಿ ಒಳಗೊಂಡಿದೆ. ಇದನ್ನು ಹೊಸ ಶೈಲಿಗೆ ಅಭಿವೃದ್ಧಿ ಪಡಿಸಬೇಕಿದೆ ಮತ್ತು ಹೊಸ ನಾಟಕಕಾರರನ್ನು ಪರಿಚಯಿಸಬೇಕಿದೆ. ಈ ನಿಟ್ಟಿನಲ್ಲಿ ರಂಗಾಯಣದಿಂದ ನಾಟಕ ರಚನಾ ಶಿಬಿರ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ಪೋಷಕರು ಮಕ್ಕಳಿಗೆ ರಂಗಭೂಮಿಯ ಕುರಿತು ಆಸಕ್ತಿ ಮೂಡಿಸಬೇಕಿದೆ. ಶಾಲಾ-ಕಾಲೇಜುಗಳಲ್ಲಿ ನಾಟಕಕಾರರನ್ನು ಕರೆಯಿಸಿ ನಾಟಕ ಪ್ರದರ್ಶನ, ನಾಟಕ ಕುರಿತು ಸಂವಾದ ಕಾರ್ಯಕ್ರಮ ಆಯೋಜಿಸುವಂತೆ ಕ್ರಮ ವಹಿಸಲಾಗುವುದು ಎಂದರು.
ಈ ಭಾಗದ ಬಯಲಾಟ, ದೊಡ್ಡಾಟ ಮತ್ತು ತೊಗಲು ಗೊಂಬೆಯಾಟ ರಂಗ ಕಲೆಯನ್ನು ಉಳಿಸುವ ಮತ್ತು ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ. ಕಲೆ ಕುರಿತು ತರಬೇತಿ ನೀಡಲು, ಕಲೆ ಉಳಿಸಲು ಒಂದು ವಾರದ ಶಿಬಿರ ಆಯೋಜಿಸಲಾಗುವುದು. ಇದರಲ್ಲಿ ಲಿಂಗತ್ವ ಅಲ್ಪ ಸಂಖ್ಯಾತರು ಸಹ ಭಾಗವಹಿಸಲು ಒಲವು ತೋರಿಸುತ್ತಿದ್ದು, ಅವರಿಗೂ ಸಹ ಅವಕಾಶ ಕಲ್ಪಿಸಬೇಕಿದೆ ಎಂದರು.
ಗಡಿ ಭಾಗದ ಮರಾಠಿ, ತೆಲುಗು ಭಾಷೆ ರಂಗಭೂಮಿಯೊಂದಿಗೆ ಹೊಂದಿಕೊಂಡು ನಾಟಕ ಶಿಬಿರ ಹಮ್ಮಿಕೊಳ್ಳಲಾಗುವುದು. ಇದರಿಂದ ಅಲ್ಲಿನ ನಾಟಕ ಶೈಲಿ, ಆಯಾಮಗಳನ್ನು ಪರಿಚಯಿಸಿಕೊಳ್ಳಬೇಕಿದೆ. ಈ ಕುರಿತು ಗಡಿ ಅಭಿವೃದ್ಧಿ ಪ್ರಾಧಿಕಾರದ ಜೊತೆ ಚರ್ಚಿಸಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ರಂಗಭೂಮಿಯಲ್ಲಿ ಪ್ರಸ್ತುತದಲ್ಲಿನ ವಾಸ್ತವತೆ, ಬೆಳವಣಿಗೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಬಳ್ಳಾರಿಯ ರಂಗಕಲಾವಿದರೊಂದಿಗೆ ಸಂವಾದ ನಡೆಸಿದರು. ಇದೇ ವೇಳೆ ರಂಗಕಲಾವಿದರಿಂದ ಸಲಹೆ ಪಡೆದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ರಂಗಭೂಮಿಯ ಹಿರಿಯ ಕಲಾವಿದರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
=========
ಸೋಮವಾರ, ಏಪ್ರಿಲ್ 28, 2025
ಬಳ್ಳಾರಿ; ಜಿಲ್ಲಾ ಕೇಂದ್ರದಲ್ಲಿ ಭಗವಾನ್ ಬುದ್ಧ ಜಯಂತಿ ಅರ್ಥಪೂರ್ಣ ಆಚರಣೆ: ಸಹಾಯಕ ಆಯುಕ್ತ ಪಿ.ಪ್ರಮೋದ್
ಬಳ್ಳಾರಿ,ಏ.28(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಮೇ 12 ರಂದು ಭಗವಾನ್ ಬುದ್ಧ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಸಹಾಯಕ ಆಯುಕ್ತ ಪಿ.ಪ್ರಮೋದ್ ಅವರು ಹೇಳಿದರು.
ಸೋಮವಾರ, ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಗವಾನ್ ಬುದ್ಧ ಜಯಂತಿ ಆಚರಣೆ ಕುರಿತು ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಭಗವಾನ್ ಬುದ್ಧನ ಜಯಂತಿ ಕಾರ್ಯಕ್ರಮವನ್ನು ಆಚರಿಸಲು ರಾಜ್ಯ ಸರ್ಕಾರದ ನಿರ್ದೇಶನವಿದ್ದು, ಜಿಲ್ಲಾ ಕೇಂದ್ರದಲ್ಲಿ ಅದ್ದೂರಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಬೇಕಾದ ಎಲ್ಲಾ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಮೇ 12 ರಂದು ಸಂಜೆ 06.30 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಭಗವಾನ್ ಬುದ್ಧ ಜಯಂತಿ ಕಾರ್ಯಕ್ರಮ ಆಚರಿಸಲು ನಿರ್ಧರಿಸಲಾಗಿದ್ದು, ಜಯಂತಿ ಕಾರ್ಯಕ್ರಮ ನಡೆಯುವ ಸ್ಥಳದ ಸ್ವಚ್ಛತೆ, ಆಸನಗಳ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಇತರೆ ವ್ಯವಸ್ಥೆ ಮಾಡಬೇಕು ಎಂದು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅಂದು ಸಂಜೆ 04.30 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದಿಂದ ಜಯಂತಿ ಅಂಗವಾಗಿ ಭವ್ಯ ಮೆರವಣಿಗೆ ನಡೆಯಲಿದೆ. ಮೆರವಣಿಗೆಯು ಮುನಿಸಿಪಲ್ ಕಾಲೇಜು ಮೈದಾನ-ಗಡಿಗಿ ಚೆನ್ನಪ್ಪ ವೃತ್ತ-ಬೆಂಗಳೂರು ರಸ್ತೆ-ಬ್ರೂಸ್‌ಪೇಟೆ ಪೊಲೀಸ್ ಠಾಣೆ ಮುಂಭಾಗ-ಜೈನ್ ಮಾರ್ಕೆಟ್ ರಸ್ತೆ-ಹೆಚ್.ಆರ್.ಗವಿಯಪ್ಪ ವೃತ್ತ-ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದ ವೇದಿಕೆ ಕಾರ್ಯಕ್ರಮದವರೆಗೆ ನಡೆಯಲಿದೆ.
ಜಯಂತಿ ಆಚರಣೆ ಸಂದರ್ಭದಲ್ಲಿ ಶಿಷ್ಠಾಚಾರದನ್ವಯ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರನ್ನು ಆಹ್ವಾನಿಸಲಾಗುವುದು. ಬುದ್ಧ ಗಾಯನ ಕಾರ್ಯಕ್ರಮ ಏರ್ಪಡಿಸಲಾಗುವುದು. ಮಹಾನ್ ವ್ಯಕ್ತಿಗಳ ವಿಚಾರಧಾರೆಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ನುರಿತ ಉಪನ್ಯಾಸಕರಿಂದ ವಿಶೇಷ ಉಪನ್ಯಾಸ ಆಯೋಜಿಸಲಾಗುವುದು ಎಂದರು.
ಜಯAತಿ ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾತಂಡಗಳನ್ನು ನಿಯೋಜಿಸಲಾಗುವುದು. ಜಯಂತಿ ಕಾರ್ಯಕ್ರಮಗಳಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸೂಚಿಸಿದರು.
ಜಿಲ್ಲೆಯಲ್ಲಿ ಬುದ್ಧ ವಿಹಾರ ಧ್ಯಾನ ಕೇಂದ್ರ ಆರಂಭಿಸಬೇಕು ಎಂದು ಸಭೆಯಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪ್ರಸ್ತಾಪಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಮತ್ತೀತರರು ಉಪಸ್ಥಿತರಿದ್ದರು.
-------------
ಏ.30 ರಂದು ಮಹಾಮಾನವತಾವಾದಿ ಸಾಂಸ್ಕೃತಿಕ ನಾಯಕ ಬಸವೇಶ್ವರ ಜಯಂತಿ ಕಾರ್ಯಕ್ರಮ
ಬಳ್ಳಾರಿ,ಏ.28(ಕರ್ನಾಟಕ ವಾರ್ತೆ)
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಮಹಾಮಾನವತಾವಾದಿ ಸಾಂಸ್ಕೃತಿಕ ನಾಯಕ ಬಸವೇಶ್ವರ ಜಯಂತಿ ಕಾರ್ಯಕ್ರಮವನ್ನು ಏ.30 ರಂದು ಸಂಜೆ 7.30 ಗಂಟೆಗೆ ನಗರದ ಡಾ. ಜೋಳದರಾಶಿ ದೊಡ್ಡಗೌಡ ರಂಗಮAದಿರದಲ್ಲಿ ಆಯೋಜಿಸಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಾಸಕರಾದ ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ರಾಷ್ಟಿçÃಯ ಬಸವದಳದ ಗೌರವಾಧ್ಯಕ್ಷ ಸಿರಿಗೇರಿ ಪನ್ನರಾಜ್ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಬಳ್ಳಾರಿಯ ಬಸವತತ್ವ ಚಿಂತಕರಾದ ಡಾ.ರವಿಶಂಕರ್ ಅವರು ಜಯಂತಿ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಬಳ್ಳಾರಿಯ ಕೆ.ದೊಡ್ಡಬಸವ ಗವಾಯಿ ಅವರಿಂದ ವಚನ ಸಂಗೀತ ಇರಲಿದೆ.
*ಮೆರವಣಿಗೆ:*
ಜಯಂತಿ ಅಂಗವಾಗಿ ಅಂದು ಸಂಜೆ 4.30 ಗಂಟೆಗೆ ನಗರದ ಮುನಿಸಿಪಲ್ ಕಾಲೇಜು ಮೈದಾನ-ಗಡಿಗಿ ಚನ್ನಪ ವೃತ್ತ-ಬೆಂಗಳೂರು ರಸ್ತೆ -ಹಳೆ ಬ್ರೂಸ್ ಪೇಟೆ ಪೊಲೀಸ್ ಠಾಣೆ ರಸ್ತೆ-ತೇರು ಬೀದಿ-ಹೆಚ್.ಆರ್.ಗವಿಯಪ್ಪ ವೃತ್ತ-ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದವರೆಗೆ ಮೆರವಣಿಗೆ ನಡೆಯಲಿದೆ.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಮಹಾನಗರ ಪಾಲಿಕೆ ಆಯುಕ್ತರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
---------------
ಮೇ 14 ರಂದು ಬಳ್ಳಾರಿ ತಾಲ್ಲೂಕು ಮಟ್ಟದ ಕುಂದು-ಕೊರತೆಗಳ ಸಭೆ
ಬಳ್ಳಾರಿ,ಏ.28(ಕರ್ನಾಟಕ ವಾರ್ತೆ):
ಬಳ್ಳಾರಿ ತಾಲ್ಲೂಕಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಜನಾಂಗದವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸಲು ಬಳ್ಳಾರಿ ತಾಲ್ಲೂಕು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಕುಂದುಕೊರತೆ ಸಭೆಯನ್ನು ಮೇ 14 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕೌಲ್ ಬಜಾರ್ ನ 1ನೇ ರೈಲ್ವೇ ಗೇಟ್ ಬಳಿಯ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ.
ಬಳ್ಳಾರಿ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಸಂಘದ ಮುಖ್ಯಸ್ಥರು, ಸದಸ್ಯರು, ದಲಿತ ಮುಖಂಡರು ಹಾಗೂ ಸಮುದಾಯದ ಜನರು ಸಮಸ್ಯೆಗಳಿದಲ್ಲಿ ಅಂದು ನಡೆಯುವ ಕುಂದು ಕೊರತೆ ಸಭೆಯಲ್ಲಿ ಭಾಗವಹಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಗಂಭೀರ ಆರೋಗ್ಯ ಸಮಸ್ಯೆಗಳ ಪತ್ತೆಗಾಗಿ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಅಳವಡಿಸಿರುವ ಇಸಿಜಿ ಯಂತ್ರಗಳ ಸದುಪಯೋಗ ಪಡೆಯಿರಿ: ಡಿಹೆಚ್‌ಓ ಡಾ.ಯಲ್ಲಾ ರಮೇಶಬಾಬು
ಬಳ್ಳಾರಿ,ಏ.28(ಕರ್ನಾಟಕ ವಾರ್ತೆ):
ವ್ಯಕ್ತಿಗೆ ಆಕಸ್ಮಿಕವಾಗಿ ಒದಗುವ ಆರೋಗ್ಯದ ಸಮಸ್ಯೆಗಳನ್ನು ಗುರ್ತಿಸಲು ಇಸಿಜಿ ಮಷಿನ್ ಅತ್ಯಂತ ಮಹತ್ವದ್ದಾಗಿದ್ದು, ಅದರಲ್ಲೂ ಮುಖ್ಯವಾಗಿ ಹೃದಯದ ಮೌಲ್ಯಮಾಪನ ಮಾಡುವ ಮೂಲಕ ಅತ್ಯಂತ ಸರಳವಾಗಿ ಮತ್ತು ವೇಗವಾಗಿ ಪರೀಕ್ಷಿಸಿ ಹೃದಯದ ಸಮಸ್ಯೆ ಹಾಗೂ ಆರೋಗ್ಯವನ್ನು ಮೇಲ್ವಿಚಾರಣೆ ಮಾಡುವ ಇಸಿಜಿ ಯಂತ್ರಗಳ ಗ್ರಾಮೀಣ ಜನತೆಯು ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು.
ಸೋಮವಾರ ಕಂಪ್ಲಿ ತಾಲೂಕಿನ ಎಮ್ಮಿಗನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಸಿಜಿ ಮೂಲಕ ವ್ಯಕ್ತಿಯ ಆರೋಗ್ಯ ಪರೀಕ್ಷಾ ಕಾರ್ಯ ಪರಿಶೀಲಿಸಿ ಅವರು ಮಾತನಾಡಿದರು.
ಜಿಲ್ಲೆಯಾದ್ಯಂತ 2 ತಾಲ್ಲೂಕು ಆಸ್ಪತ್ರೆ, 6 ಸಮುದಾಯ ಆರೋಗ್ಯ ಕೇಂದ್ರ, 29 ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು 09 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಇಸಿಜಿ ಮೆಷಿನ್ ಲಭ್ಯವಿದ್ದು, ಇಲ್ಲಿ ತಜ್ಞರು ಹಾಗೂ ತರಬೇತಿ ಪಡೆದ ವೈದ್ಯರು ಪರೀಕ್ಷೆ ಮಾಡಲು ಅವಕಾಶ ಮಾಡಲಾಗಿದೆ ಎಂದರು.
*ಯಾವ ಲಕ್ಷಣಗಳಿಗೆ ಇಸಿಜಿ ಮಾಡಿಸಬೇಕು?”*
ಎದೆ ನೋವು, ತಲೆತಿರುಗುವಿಕೆ, ತಲೆತಿರುಗುವಿಕೆ ಅಥವಾ ಗೊಂದಲ, ಹೃದಯ ಬಡಿತ ಏರಿಳಿತ, ತ್ವರಿತ ನಾಡಿಮಿಡಿತ, ಉಸಿರಾಟದ ತೊಂದರೆ, ದೌರ್ಬಲ್ಯ, ಆಯಾಸ, ಅಥವಾ ವ್ಯಾಯಾಮ ಮಾಡುವ ಸಾಮರ್ಥ್ಯ ಕಡಿಮೆಯಾಗುವುದು.
*ಇಸಿಜಿಯಿಂದ ಸ್ಥಳದಲ್ಲಿಯೇ ಗುರ್ತಿಸಬಹುದಾದ ಸಮಸ್ಯೆಗಳು:*
ಹೃದಯದಲ್ಲಿ ನಿರ್ಬಂಧಿಸಲಾದ ಅಥವಾ ಕಿರಿದಾದ ಅಪಧಮನಿಗಳು (ಕರೋನರಿ ಅಪಧಮನಿ ಕಾಯಿಲೆ) ಎದೆ ನೋವು ಅಥವಾ ಹೃದಯಾಘಾತಕ್ಕೆ ಕಾರಣವಾಗಿದ್ದರೆ. ಈ ಹಿಂದೆ ಹೃದಯಾಘಾತವಾಗಿದ್ದರೆ, ಪೇಸ್‌ಮೇಕರ್‌ನಂತಹ ನಿರ್ದಿಷ್ಟ ಹೃದಯ ಕಾಯಿಲೆ ಚಿಕಿತ್ಸೆಯ ಕಾರ್ಯನಿರ್ವಹಣೆ, ಅನಿಯಮಿತ ಹೃದಯ ಬಡಿತಗಳು (ಆರ್ಹೆತ್ಮಿಯಾ).
*ಟೆಲಿ ಐಸಿಯು ಹಬ್ ಮೂಲಕ ಜಿಲ್ಲೆಯಲ್ಲಿ ಅನೂಕೂಲ:*
ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ತಪಾಸಣೆ ಮಾಡಿದಾಗ ಯಾವುದೇ ವ್ಯತ್ಯಾಸ ಕಂಡುಬAದಲ್ಲಿ ತಕ್ಷಣ ತಾಲೂಕು ಮಟ್ಟದ ಅಸ್ಪತ್ರೆಗೆ ದಾಖಲಿಸಿ, ಅಲ್ಲಿಯ ತಜ್ಞರು ಜಿಲ್ಲಾ ಆಸ್ಪತ್ರೆಯಲ್ಲಿ ಅಳವಡಿಸಿರುವ ಟೆಲಿ ಐಸಿಯು ಹಬ್‌ನ ತಜ್ಞವೈದ್ಯರಿಗೆ ನೇರವಾಗಿ ರೋಗಿಯನ್ನು ವಿಡಿಯೋ ಮುಲಕ ಸಂಪರ್ಕಿಸಿ ಚಿಕಿತ್ಸೆ ಒದಗಿಸಲು ಅಥವಾ ತುರ್ತು ಅಗತ್ಯವೆನಿಸಿದರೆ ಜಿಲ್ಲಾ ಆಸ್ಪತ್ರೆ ಅಥವಾ ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರ ಕ್ಕೆ ದಾಖಲಿಸಲು ಸಹಕಾರಿಯಾಗಿ ವ್ಯಕ್ತಿಯ ಜೀವ ಉಳಿಸಲು ಸಹಾಯಕವಾಗಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರು ಜಿಲ್ಲೆಯ ಎಲ್ಲ ಆಸ್ಪತ್ರೆಗಳಲ್ಲಿ ಲಭ್ಯವಿರುವ ಇಸಿಜಿ ಮೆಷಿನ್‌ಗಳ ಸದುಪಯೋಗ ಪಡೆಯಲು ವಿನಂತಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಆರ್.ಅಬ್ದುಲ್, ಅಡಳಿತ ವೈದ್ಯಾಧಿಕಾರಿ ಡಾ.ಫಾರೂಖ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಅರೋಗ್ಯ ನಿರೀಕ್ಷಣಾಧಿಕಾರಿ ಬಸವನಗೌಡ, ಕೃಷ್ಣಮೂರ್ತಿ, ಸಿಬ್ಬಂದಿಯವರಾದ ಪೂಜಾ, ಉಮಾಮಹೇಶ್ವರಿ, ಕನಕಪ್ಪ, ಅಶ್ವಿನಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
------------
ಮೇ 02 ರಂದು ಆದ್ಯ ಗುರು ಶ್ರೀ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮ
ಬಳ್ಳಾರಿ,ಏ.28(ಕರ್ನಾಟಕ ವಾರ್ತೆ)
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಆದ್ಯ ಗುರು ಶ್ರೀ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮವನ್ನು ಮೇ 02 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸಂಗನಕಲ್ಲು ರಸ್ತೆಯ ಶ್ರೀ ಭಾರತೀತೀರ್ಥ ಸಭಾಭವನದಲ್ಲಿ ಆಯೋಜಿಸಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಾಸಕರಾದ ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಶ್ರೀ ಶೃಂಗೇರಿ ಶಂಕರಮಠದ ಗೌರವ ವ್ಯವಸ್ಥಾಪಕರಾದ ಬಿ.ಕೆ.ಬಿ.ಎನ್.ಮೂರ್ತಿ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ವೇದಬ್ರಹ್ಮ ಶ್ರೀರಾಮ ಸುಬ್ರಹ್ಮಣ್ಯ ಶರ್ಮ ಅವರು ಜಯಂತಿ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಬಳ್ಳಾರಿಯ ರಾಜೇಶ್ವರಿ ಅವರ ತಂಡದಿAದ ಭಕ್ತಿ ಸಂಗೀತ ಇರಲಿದೆ.
*ಮೆರವಣಿಗೆ:*
ಜಯಂತಿ ಅಂಗವಾಗಿ ಮೇ 01 ರಂದು ಸಂಜೆ 4.30 ಗಂಟೆಗೆ ನಗರದ ಸತ್ಯನಾರಾಯಣ ಪೇಟೆ- ವೆಂಕಟೇಶ್ವರ ದೇವಸ್ಥಾನದಿಂದ- ಇಂದಿರಾ ವೃತ್ತ-ಬೆಂಗಳೂರು ರಸ್ತೆ-ಸಭಾಪತಿ ಬೀದಿ-ಶ್ರೀ ಶೃಂಗೇರಿ ಶಂಕರಮಠದವರಗೆ ಮೆರವಣಿಗೆ ನಡೆಯಲಿದೆ.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಮಹಾನಗರ ಪಾಲಿಕೆ ಆಯುಕ್ತರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
-----------------
ಮೇ 09 ರಂದು ಕಂಪ್ಲಿ ತಾಲ್ಲೂಕು ಮಟ್ಟದ ಕುಂದು-ಕೊರತೆಗಳ ಸಭೆ
ಬಳ್ಳಾರಿ,ಏ.28(ಕರ್ನಾಟಕ ವಾರ್ತೆ):
ಕಂಪ್ಲಿ ತಾಲ್ಲೂಕಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಜನಾಂಗದವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸಲು ಕಂಪ್ಲಿ ತಾಲ್ಲೂಕು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಕುಂದುಕೊರತೆ ಸಭೆಯನ್ನು ಮೇ 09 ರಂದು ಬೆಳಿಗ್ಗೆ 11 ಗಂಟೆಗೆ ಕಂಪ್ಲಿಯ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕಂಪ್ಲಿ ಪುರಸಭೆ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಸಂಘದ ಮುಖ್ಯಸ್ಥರು, ಸದಸ್ಯರು, ದಲಿತ ಮುಖಂಡರು ಹಾಗೂ ಸಮುದಾಯದ ಜನರು ಸಮಸ್ಯೆಗಳಿದ್ದಲ್ಲಿ ಅಂದು ನಡೆಯುವ ಕುಂದು ಕೊರತೆ ಸಭೆಯಲ್ಲಿ ಭಾಗವಹಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ವ್ಯಕ್ತಿ ಕಾಣೆ ಪತ್ತೆಗೆ ಮನವಿ
ಬಳ್ಳಾರಿ,ಏ.28(ಕರ್ನಾಟಕ ವಾರ್ತೆ):
ಕುರುಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾಜಶೇಖರ್.ಇ ಎನ್ನುವ 44 ವಷÀðದ ವ್ಯಕ್ತಿಯು ಏ.25 ರಂದು ಕಾಣೆಯಾಗಿದ್ದು, ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.
ಚಹರೆ ಗುರುತು:
ಅಂದಾಜು 5.8 ಅಡಿ ಎತ್ತರ, ದುಂಡು ಮುಖ, ಗೋದಿ ಮೈಬಣ್ಣ, ದುಂಡನೆಯ ಮೈಕಟ್ಟು ಮತ್ತು ಕಪ್ಪು ಕೂದಲು ಹೊಂದಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ನಸಿ ಬಣ್ಣದ ಅಂಗಿ ಹಾಗೂ ಕಪ್ಪು ಬಣ್ಣದ ಹಾಫ್ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ ಭಾಷೆ ಮಾತನಾಡುತ್ತಾನೆ.
ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಕುರುಗೋಡು ಪೊಲೀಸ್ ಠಾಣೆಯ ದೂ.08393-263433 ಅಥವಾ ಪಿ.ಎಸ್.ಐ ಮೊ.9480803051, ಸಿ.ಪಿ.ಐ ಮೊ.9480803039, ಬಳ್ಳಾರಿ ಎಸ್.ಪಿ ರವರ ಕಚೇರಿ ದೂ.08392-258400,258300 ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
--------------
ವ್ಯಕ್ತಿ ಕಾಣೆ ಪತ್ತೆಗೆ ಮನವಿ
ಬಳ್ಳಾರಿ,ಏ.28(ಕರ್ನಾಟಕ ವಾರ್ತೆ)
ನಗರದ ಅಂದ್ರಾಳ್‌ನ ಡಿ.ಸಿ ಕಾಲೋನಿ ನಿವಾಸಿಯಾದ ಖಾಜಾ ಹುಸೇನ್ ಎನ್ನುವ 26 ವರ್ಷದ ವ್ಯಕ್ತಿಯು ಮಾ.31 ರಂದು ಕಾಣೆಯಾಗಿದ್ದು, ಈ ಕುರಿತು ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.
ಚಹರೆ ಗುರುತು:
ಅಂದಾಜು 5.2 ಅಡಿ ಎತ್ತರ, ದುಂಡು ಮುಖ, ಬಿಳಿ ಮೈಬಣ್ಣ, ತೆಳುವಾದ ಮೈಕಟ್ಟು ಹೊಂದಿದ್ದು, ಎಡಗಾಲಿಗೆ ಪೊಲೀಯೊ ಆಗಿರುತ್ತದೆ. ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ತುಂಬು ತೋಳಿನ ಶರ್ಟ್ ಹಾಗೂ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು ಮತ್ತು ಹಿಂದಿ ಭಾಷೆ ಮಾತನಾಡುತ್ತಾನೆ.
ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯ ದೂ.08392-250033, ಮೊ.9480803096 ಅಥವಾ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಅನಾಮಧೇಯ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ
ಬಳ್ಳಾರಿ,ಏ.28(ಕರ್ನಾಟಕ ವಾರ್ತೆ):
ನಗರದ ಹದ್ದಿನಗುಂಡು ರೈಲಿ ನಿಲ್ದಾಣಗಳ ಮಧ್ಯೆ ಅಂದಾಜು 30 ವಷÀðದ ಅನಾಮದೇಯ ವ್ಯಕ್ತಿಯು ಏ.27 ರಂದು ರೈಲ್ವೇ ಕೀ ಮೀ ನಂ:209/2-6 ರ ಮಧ್ಯೆ ಅಪ್ ಲೈನ್ ಹಳಿಯಲ್ಲಿ ಮೃತಪಟ್ಟಿದ್ದು, ಮೃತನ ವಾರಸುದಾರರು ತಿಳಿದಿರುವುದಿಲ್ಲ. ಈ ಕುರಿತು ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಉಪ ನಿರೀಕ್ಷಕರು ತಿಳಿಸಿದ್ದಾರೆ.
ಚಹರೆ ಗುರುತು:
ಅಂದಾಜು 5.5 ಅಡಿ ಎತ್ತರ, ಮುಖ ಚಿದ್ರ ಚಿದ್ರವಾಗಿದೆ. ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ತಲೆಯಲ್ಲಿ 02 ಇಂಚು ಕೂದಲು ಮತ್ತು ಸಣ್ಣ ಮೀಸೆ ಇರುತ್ತದೆ.
ಕೆಂಪು ಬಣ್ಣದ ಮತ್ತು ನೆರಳೆ ಮಿಶ್ರಿತ ಕಟ್ಟಾಗಿರುವ ರೇಡಿಮೇಡ್ ಅಂಗಿ ಖಇಗಿಂಒP ಅಂತಾ ಇರುತ್ತದೆ ಮತ್ತು ಆಕಾಶ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ, ಸೊಂಟದಲ್ಲಿ ಕೆಂಪು ಉಡದಾರ ಅದರಲ್ಲಿ ಒಂದು ತಾಯತ ಮತ್ತು ಬಲಗೈಗೆ ಒಂದು ದಾರ ಕಟ್ಟಿರುತ್ತಾನೆ.
ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ರೈಲ್ವೇ ಪೊಲೀಸ್ ಠಾಣೆಯ ಪಿಎಸ್ ಮೊ.948082131, ರೈಲ್ವೇ ಪೊಲೀಸ್ ಠಾಣೆ ರಾಯಚೂರು ಮೊ.9480800471 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಶುಕ್ರವಾರ, ಏಪ್ರಿಲ್ 25, 2025
ಜೋಳ ಖರೀದಿ: ಹೆಚ್ಚುವರಿ ನೋಂದಣಿ ಮತ್ತು ಖರೀದಿ ಕೇಂದ್ರ ಆರಂಭ
ಬಳ್ಳಾರಿ,ಏ.25(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿ 2024-25 ನೇ ಸಾಲಿನ ಹಿಂಗಾರು ಋತುವಿನಲ್ಲಿ ಬೆಳೆದ ಜೋಳವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ಖರೀದಿಸಲು ಈಗಾಗಲೇ ತೀರ್ಮಾನಿಸಲಾಗಿದ್ದು, ಪ್ರಸ್ತುತ ಇರುವ 10 ಖರೀದಿ ಕೇಂದ್ರಗಳ ಜೊತೆಗೆ 02 ಹೆಚ್ಚುವರಿ ನೋಂದಣಿ ಮತ್ತು ಖರೀದಿ ಕೇಂದ್ರ ತೆರೆಯಲಾಗಿದೆ.
*ಹೆಚ್ಚುವರಿ ರೈತ ನೋಂದಣಿ ಮತ್ತು ಖರೀದಿ ಕೇಂದ್ರ:*
ಸಿರುಗುಪ್ಪ ತಾಲ್ಲೂಕಿನ ಮುದ್ದಟನೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಅರಳಿಗನೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ.
ಬೆAಬಲ ಬೆಲೆ ಯೋಜನೆ ಬಗ್ಗೆ ರೈತರಿಗೆ ಯಾವುದೇ ಸಮಸ್ಯೆಗಳಿದ್ದರೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಹಾಗೂ ತಾಲ್ಲೂಕಿನ ತಹಸಿಲ್ದಾರ್, ಕೃಷಿ ಅಧಿಕಾರಿ, ಎ.ಪಿ.ಎಂ.ಸಿ ಕಾರ್ಯದರ್ಶಿ, ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತದ ಸೈಯದ್ ವಸೀಮ್ ಪಾಷ (ಮೊ.9449864453) ಗೆ ಸಂಪರ್ಕಿಸಬಹುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ಸಕೀನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಕುರುಗೋಡು ಪುರಸಭೆ: ಅರ್ಜಿ ಆಹ್ವಾನ
ಬಳ್ಳಾರಿ,ಏ.25(ಕರ್ನಾಟಕ ವಾರ್ತೆ):
ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ ಮಿಷನ್ (ನ)-2.0 ಯೋಜನೆಯ ಐ.ಇ.ಸಿ ಘಟಕದಡಿ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಕುರಿತು ನಗರ ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ವಿವಿಧ ಬಗೆಯ ಐ.ಇ.ಸಿ ಚಟುವಟಿಕೆಗಳನ್ನು ಕೈಗೊಳ್ಳಲು ಅರ್ಹ ಸ್ವ-ಸಹಾಯ ಗುಂಪುಗಳ ಸದಸ್ಯರುಗಳ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
*ಅರ್ಹತೆ:*
10ನೇ ತರಗತಿ/ತತ್ಸಮಾನ ಶಿಕ್ಷಣ ಹೊಂದಿರತಕ್ಕದ್ದು. ಅಭ್ಯರ್ಥಿಯು ಕನ್ನಡ ಮಾತನಾಡಲು ಹಾಗೂ ಬರೆಯಲು ತಿಳಿದಿರಬೇಕು. ಅರ್ಜಿ ಸಲ್ಲಿಸುವವರು ಸ್ವ-ಸಹಾಯ ಗುಂಪಿನಲ್ಲಿ ಕಾರ್ಯನಿರ್ವಹಿಸಿರುವ ಬಗ್ಗೆ ನಲ್ಮ್/ಭಾರತ/ಕರ್ನಾಟಕ ಸರ್ಕಾರದಿಂದ ಸೂಕ್ತ ದಾಖಲೆ ಹೊಂದಿರಬೇಕು.
ಅರ್ಜಿದಾರರು ಕಂಪ್ಯೂಟರ್ ಸಾಕ್ಷರತೆಯ ಎಮ್.ಎಸ್.ಆಫೀಸ್, ಎಮ್.ಎಸ್. ಎಕ್ಸ್ಎಲ್ ನಿರ್ವಹಿಸುವ ಬಗ್ಗೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಪರಿಣಿತರಾಗಿರಬೇಕು. ಮಾಹಿತಿ ಶಿಕ್ಷಣ ಮತ್ತು ಸಂವಹನದಡಿ ಗ್ರಾಮ ಪಂಚಾಯಿತಿ ಅಥವಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿರುವ ಅನುಭವವುಳ್ಳ ಅಭ್ಯರ್ಥಿಗಳಿಗೆ ಆದ್ಯತೆಯ ಮೇರೆಗೆ ಆಯ್ಕೆ ಮಾಡಲಾಗುವುದು.
ಈ ಮೇಲಿನ ಎಲ್ಲಾ ದಾಖಲೆ ಮತ್ತು ಅನುಭವವುಳ್ಳ ಅಭ್ಯರ್ಥಿಗಳಿದ್ದಲ್ಲಿ ಕುರುಗೋಡು ಪುರಸಭೆ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಗಳನ್ನು ಮೇ 04 ರ ಬೆಳಿಗ್ಗೆ 08 ಗಂಟೆಯಿAದ ಮಧ್ಯಾಹ್ನ 01.30 ರವರೆಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕುರುಗೋಡು ಪುರಸಭೆ ಕಚೇರಿಗೆ ಸಂಪರ್ಕಿಸಬಹುದು ಎಂದು ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಮಗುವಿನ ಒಂದು ವರ್ಷದ ವಯಸ್ಸಿನೊಳಗೆ ತಪ್ಪದೇ ಎಲ್ಲಾ ಲಸಿಕೆ ಹಾಕಿಸಿ: ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬು
ಬಳ್ಳಾರಿ,ಏ.25(ಕರ್ನಾಟಕ ವಾರ್ತೆ):
ಮಗುವಿನ ಜನನದ ನಂತರ 12 ಮಾರಕ ರೋಗಗಳ ತಡೆಗಟ್ಟಲು ಎಲ್ಲಾ ಲಸಿಕೆಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ನೀಡಲಾಗುತ್ತಿದ್ದು, ಪಾಲಕರು ತಪ್ಪದೇ ತಮ್ಮ ಮಕ್ಕಳಿಗೆ ಹಾಕಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು.
ಬಾಲಕ್ಷಯ ತಡೆಗಟ್ಟಲು ಬಿಸಿಜಿ, ಪೋಲಿಯೋ ರೋಗ ತಡೆಗಟ್ಟಲು ಪೋಲಿಯೋ ಹನಿ, ಕಾಮಾಲೆ ರೋಗ ತಡೆಗಟ್ಟಲು ಹೆಪಟೈಟೀಸ್ ಹಾಗೂ ನವಜಾತ ಶಿಶುವಿನ ದೇಹದ ಒಳಗಡೆ ಆಂತರಿಕ ರಕ್ತಸ್ರಾವ ಸಾಧ್ಯತೆಗಳನ್ನು ತಡೆಗಟ್ಟಲು ವಿಟಮಿನ್-ಕೆ ಚುಚ್ಚುಮದ್ದನ್ನು ಮೊದಲ ದಿನವೇ ನೀಡಲಾಗುತ್ತದೆ. ನಂತರ ವಯಸ್ಸಿಗೆ ಅನುಸಾರವಾಗಿ ಮಾರಕ ರೋಗಗಳನ್ನು ತಡೆಗಟ್ಟಲು ಒಂದು ವರ್ಷದೊಳಗಡೆ ಎಲ್ಲಾ ಲಸಿಕೆಗಳನ್ನು ಉಚಿತವಾಗಿ ಹಾಕಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಗುಗ್ಗರಹಟ್ಟಿ ಇವರ ಆಶ್ರಯದಲ್ಲಿ ನಗರದ ಬಂಡಿಮೋಟ್‌ನ ಬುಡ ಬುಡಿಕೆಯವರ ಓಣಿಯಲ್ಲಿ ವಿಶ್ವ ಲಸಿಕಾ ಸಪ್ತಾಹದ ಅಂಗವಾಗಿ ಲಸಿಕಾ ಸ್ಥಳಕ್ಕೆ ಭೇಟಿ ನೀಡಿ ಸಾರ್ವಜನಿಕರೊಂದಿಗೆ ಅವರು ಮಾತನಾಡಿದರು.
ಈಗಾಗಲೇ ಪ್ರತಿ ಗುರುವಾರ ಎಲ್ಲಾ ಗ್ರಾಮ, ವಾರ್ಡ್ಗಳಲ್ಲಿ ಲಸಿಕೆ ಹಾಕಲಾಗುತ್ತಿದ್ದು, ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತಿ ದಿನ ಲಸಿಕೆ ಹಾಕಲಾಗುತ್ತಿದೆ. ಮಗು ಲಸಿಕೆ ವಂಚಿತರಾಗಬಾರದೆAಬ ಹಿನ್ನಲೆಯಲ್ಲಿ ಸರ್ಕಾರವು ಏಪ್ರಿಲ್, ಮೇ, ಜೂನ್ ಮೂರು ತಿಂಗಳುಗಳ ಕಾಲ ನಿಗಧಿತ ಅವಧಿಯಲ್ಲಿ ಲಸಿಕೆ ಪಡೆಯದ ಹಾಗೂ ಒಂದು ಲಸಿಕೆಯನ್ನು ಪಡೆಯದೇ ಇರುವ ಮಕ್ಕಳನ್ನು ಗುರ್ತಿಸಿ ಲಸಿಕೆ ಹಾಕುವ ಕಾರ್ಯ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.
ಸರಿಯಾದ ಸಮಯದಲ್ಲಿ ಮಗುವಿನ ಒಂದುವರೆ ತಿಂಗಳು, ಎರಡುವರೆ ತಿಂಗಳು ಹಾಗೂ ಮೂರುವರೆ ತಿಂಗಳ ವಯಸ್ಸಿನಲ್ಲಿ ಕ್ರಮವಾಗಿ ಗಂಟಲು ಮಾರಿ, ನಾಯಿಕೆಮ್ಮು ಧನುರ್ವಾಯು ರೋಟ ವೈರಸ್, ಹೆಚ್ ಇನ್‌ಪ್ಲ್ಯುಯೆಂಜಾ, ಕಾಮಾಲೆಗಾಗಿ ಪೆಂಟಾವೈಲೆAಟ್ ಲಸಿಕೆ, ರೋಟಾವೈರಸ್ ಅತಿಸಾರಬೇದಿ ಗೆ ನಿಮೋಕಾಕಲ್ ಲಸಿಕೆ ಹಾಕಲಾಗುವುದು. ಮಗುವಿನ ಒಂಬತ್ತು ತಿಂಗಳು ವಯಸ್ಸು ತುಂಬಿದ ನಂತರ ಮೆದುಳು ಜ್ವರ ರೋಗಕ್ಕೆ ಜಾಪನೀಸ್ ಎನ್ಸ್÷್ಪಲಿಟಿಸ್ ಲಸಿಕೆ, ದಡಾರ ರೂಬೇಲ್ಲಾ ರೋಗಕ್ಕೆ ಮಿಸಲ್ಸ್ ರೂಬೆಲ್ಲಾ ಲಸಿಕೆ, ಹಾಗೂ ಸಂಜೆಯ ಹೊತ್ತು ಕಂಡುಬರುವ ಇರುಳುಗಣ್ಣು ರೋಗಕ್ಕೆ ವಿಟಾಮಿನ್-ಎ ಅನ್ನಾಂಗ ದ್ರಾವಣ, ನೀಡಲಾಗುತ್ತದ್ದು ತಪ್ಪದೇ ಹಾಕಿಸಲು ವಿನಂತಿಸಿದರು.
ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಹನುಮಂತಪ್ಪ ಅವರು ಮಾತನಾಡಿ, ಲಸಿಕೆ ನೀಡುವಲ್ಲಿ ಸಾರ್ವಜನಿಕರ ಅಭಿಪ್ರಾಯಗಳನ್ನು ಮತ್ತು ಅನಿಸಿಕೆಗಳನ್ನು ಕ್ರೂಢೀಕರಿಸಿ ತಪ್ಪು ನಂಬಿಕೆಗಳ ಕುರಿತು ಜಾಗೃತಿ ನೀಡಲಾಗುತ್ತಿದೆ ಎಂದರು.
ಕೆಲವು ರೋಗಗಳಿಗೆ ಅಂದರೆ ಪೋಲಿಯೋ, ಗಂಟಲುಮಾರಿ, ನಾಯಿ ಕೆಮ್ಮು, ಧನುರ್ವಾಯು, ದಡಾರ-ರೂಬೆಲ್ಲಾ ಮೆದುಳು ಜ್ವರ, ಕ್ಕೆ 16 ರಿಂದ 23 ತಿಂಗಳು ಒಳಗೆ ಹೆಚ್ಚುವರಿಯಾಗಿ ಬೂಸ್ಟರ್ ಡೋಸ್ ರೂಪದಲ್ಲಿ ನೀಡಲಾಗುವುದು. 5 ರಿಂದ 6 ವರ್ಷದಲ್ಲಿ ಪುನಃ ಗಂಟಲುಮಾರಿ, ನಾಯಿ ಕೆಮ್ಮು, ಧನುರ್ವಾಯು, ರೋಗಿಗಳಿಗೆ ಎರಡನೇಯ ಬಾರಿ ಬೂಸ್ಟರ್ ಡೋಸ್ ನೀಡಲಾಗುವುದು. ಈ ಹಿನ್ನಲೆಯಲ್ಲಿ ಗಾಳಿಸುದ್ದಿ ನಂಬಿ ಲಸಿಕೆ ಬೇಡವೆನ್ನುವವರಿಗೆ ಮನೆ ಭೇಟಿ, ಗುಂಪು ಸಭೆ, ಸಮುದಾಯ ಮುಖಂಡರ ಮೂಲಕ ಮಾಹಿತಿ ಒದಗಿಸಿ ಅವರಲ್ಲಿಯ ತಪ್ಪು ನಂಬಿಕೆಗಳನ್ನು ಹೋಗಲಾಡಿಸಿ ಎಲ್ಲಾ ಲಸಿಕೆಗಳನ್ನು ಹಾಕಿಸಲಾಗುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಆರ್.ಅಬ್ದುಲ್ಲಾ, ಡಾ.ಶಗುಪ್ತಾ ಶಾಹಿನ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಹೆಚ್‌ಐಒ ನಿರಂಜನ್ ಪತ್ತಾರ್, ಆಶಾ, ರೇಷ್ಮಾ ಹಾಗೂ ಇತರರು ಉಪಸ್ಥಿತರಿದ್ದರು.
-----------
ಸಾರ್ವಜನಿಕರು ಯಾವುದೇ ಜ್ವರವಿರಲಿ, ರಕ್ತಲೇಪನ ಪರೀಕ್ಷೆ ಮಾಡಿಸಿ: ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬು
ಬಳ್ಳಾರಿ,ಏ.25(ಕರ್ನಾಟಕ ವಾರ್ತೆ):
ಸಾರ್ವಜನಿಕರು ಯಾವುದೇ ಜ್ವರವಿರಲಿ, ಮೊದಲು ರಕ್ತಲೇಪನ ಪರೀಕ್ಷೆ ಮಾಡಿಸಬೇಕು. ಶೂನ್ಯ ಮಲೇರಿಯಾ ಗುರಿ ತಲುಪಲು ಮತ್ತು ರೋಗ ತಡೆಗಟ್ಟಲು ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾ ಕಚೇರಿ ವತಿಯಿಂದ ವಿಶ್ವ ಮಲೇರಿಯಾ ದಿನಾಚರಣೆ-2025 ಅಂಗವಾಗಿ “ಮಲೇರಿಯಾ ನಮ್ಮೊಂದಿಗೆ ಕೊನೆಗೊಳ್ಳುತ್ತದೆ. ಮರು ಹೂಡಿಕೆ ಮಾಡಿ, ಮರು ಕಲ್ಪನೆ ಮಾಡಿ, ಮರು ಉತ್ತೇಜನ ನೀಡೋಣ” ಎಂಬ ಘೋಷವಾಕ್ಯದೊಂದಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಮಲೇರಿಯಾ ರೋಗಕ್ಕೆ ಉಚಿತವಾಗಿ ರಕ್ತ ಪರೀಕ್ಷೆ ಹಾಗೂ ಸೂಕ್ತ ಚಿಕಿತ್ಸೆ ನೀಡಲಾಗುತ್ತದೆ. ಇದರ ಸದುಯೋಗಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಆರ್.ಅಬ್ದುಲ್ಲಾ ಅವರು ಮಾತನಾಡಿ, ಮಲೇರಿಯಾ ಜ್ವರವು ಪ್ಲಾಸ್ಮೋಡಿಯಂ ಎಂಬ ಪರಾವಲಂಭಿ ಸೂಕ್ಷ್ಮಾಣುವಿನಿಂದ ಉಂಟಾಗಬಹುದಾಗಿದ್ದು, ಹೆಣ್ಣು ಅನಾಫಿಲೀಸ್ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಚಳಿ, ನಡುಕ, ಬಿಟ್ಟು ಬಿಟ್ಟು ಜ್ವರ ಬರುವುದು, ವಾಕರಿಕೆ, ಮೈ ಬೆವರುವುದು ಲಕ್ಷಣಗಳು ಕಂಡು ಬಂದಲ್ಲಿ ಮಲೇರಿಯಾ ಜ್ವರ ಇರಬಹುದು ಎಂದು ಭಾವಿಸಿ ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆಗೆ ಒಳಪಟ್ಟು ಸೂಕ್ತ ಉಚಿತ ಚಿಕಿತ್ಸೆ ಪಡೆಯಬೇಕು ಎಂದು ಹೇಳಿದರು.
ಮಲೇರಿಯಾ ಪ್ರಕರಣಗಳು ಕಂಡು ಬಂದ ಸಂದರ್ಭದಲ್ಲಿ ಮನೆಯ ಸುತ್ತಮುತ್ತಲು ಆರೋಗ್ಯ ಇಲಾಖೆಯಿಂದ ಕೈಗೊಳ್ಳುವ ಕೀಟನಾಶಕ ಸಿಂಪರಣೆಗೆ ಸಾರ್ವಜನಿಕರು ಅವಕಾಶ ಸಹಕರಿಸಬೇಕು. ಸ್ವಯಂ ರಕ್ಷಣಾ ಕ್ರಮಗಳಾದ ಮಲಗುವಾಗ ಸೊಳ್ಳೆ ಪರದೆ ಬಳಕೆ ಮಾಡಬೇಕು. ಕಿಟಕಿಗಳಿಗೆ ಸೊಳ್ಳೆಗಳು ನುಸುಳದಂತೆ ಜಾಲರಿ ಅಳವಡಿಸುವುದು. ಆರೋಗ್ಯ ಇಲಾಖೆಯಿಂದ ನೀಡಲ್ಪಡುವ ಲಾರ್ವಹಾರಿ ಗಪ್ಪಿ ಮತ್ತು ಗಂಬೂಷಿಯಾ ಮೀನುಗಳನ್ನು ಶಾಶ್ವತವಾಗಿ ನೀರು ನಿಲ್ಲುವ ಸ್ಥಳಗಳಲ್ಲಿ ಬಿಡಲು ಉಚಿತವಾಗಿ ಪಡೆಯಬಹುದಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ವೀರೇಂದ್ರಕುಮಾರ್, ಜಿಲ್ಲಾ ವಿಬಿಡಿಸಿ ಸಮಾಲೋಚಕರಾದ ಪ್ರತಾಪ್.ಹೆಚ್., ಜಿಲ್ಲಾ ಆರೋಗ್ಯ ಶಿಕ್ಷ್ಷಣಾಧಿಕಾರಿ ಈಶ್ವರ ದಾಸಪ್ಪನವರ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಶಕುಂತಲಾ ಮ್ಯಾಳಿ, ನಾಗರಾಜ, ರವೀಂದ್ರ ಜಿನಗ, ಆರೋಗ್ಯ ನಿರೀಕ್ಷಣಾಧಿಕಾರಿ ಮರಿಬಸವನಗೌಡ, ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿಗಳಾದ ಅಂಭುಜ, ನಂದಿನಿ, ಶಕುಂತಲಾ, ವಿಬಿಡಿಸಿ ಸಿಬ್ಬಂದಿ ವರ್ಗದವರು, ತಾಲೂಕು ಆರೋಗ್ಯಾಧಿಕಾರಿಗಳ ಸಿಬ್ಬಂದಿಗಳು ಹಾಗೂ ಮಲೇರಿಯಾ ಲಿಂಕ್ ವಾಲಂಟೀರ‍್ಸ್ ಮತ್ತು ಇತರೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಸಿಬ್ಬಂದಿಗಳು ಹಾಜರಿದ್ದರು.
ಜಾಗೃತಿ ಜಾಥವು ಬಳ್ಳಾರಿ ನಗರದ ಪ್ರಮುಖ ಬೀದಿಗಳಲ್ಲಿ ಹಾಗೂ ವಾರ್ಡ್ಗಳಲ್ಲಿ ಸಂಚರಿಸಿ ಸಾರ್ವಜನಿಕರಿಗೆ ಮಲೇರಿಯಾ ರೋಗದ ಕುರಿತು ಮಾಹಿತಿ ನೀಡಲಾಯಿತು.
--------------
ಮೋಕ ಸರ್ಕಾರಿ ಪ್ರಥಮ ಕಾಲೇಜಿನಲ್ಲಿ ಪದವಿ ಕೋರ್ಸ್ಗಳ ಪ್ರವೇಶಾತಿಗೆ ಪ್ರಕ್ರಿಯೆ ಆರಂಭ
ಬಳ್ಳಾರಿ,ಏ.25(ಕರ್ನಾಟಕ ವಾರ್ತೆ):
ತಾಲ್ಲೂಕಿನ ಮೋಕ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2025-26ನೇ ಸಾಲಿಗೆ ಬಿ.ಎ, ಬಿ.ಕಾಂ ಮತ್ತು ಬಿ.ಎಸ್.ಸಿ ಪದವಿ ಸ್ನಾತಕ ಕೋರ್ಸ್ಗಳ ಪ್ರವೇಶಾತಿ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ.ಇಸ್ಮಾಯಿಲ್ ಎಂ ಮಕಾಂದರ್ ಅವರು ತಿಳಿಸಿದ್ದಾರೆ.
ಮೋಕ ಗ್ರಾಮದಲ್ಲಿ ಗ್ರಾಮೀಣ ಬಡವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ನೀಡುವ ಸದುದ್ದೇಶದಿಂದ ಸರ್ಕಾರವು 2007ರಲ್ಲಿ ಈ ಕಾಲೇಜನ್ನು ಪ್ರಾರಂಭಿಸಿದ್ದು, ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಅಭಿವೃದ್ಧಿಗಾಗಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿವರ್ಗದವರು ಶ್ರಮಿಸುತ್ತಿದ್ದಾರೆ.
ಪ್ರಸ್ತುತ ಕಾಲೇಜು ಗಣಕಯಂತ್ರಗಳ ಪ್ರಯೋಗಾಲಯ, ವಿವಿಧ ಸ್ಪರ್ಧಾತ್ಮಕ ತರಬೇತಿಗಾಗಿ ವಿಶೇಷ ಪುಸ್ತಕಗಳು, ಕೈಪಿಡಿಗಳು, ಮ್ಯಾಗಝೀನ್‌ಗಳು, ಸುಸಜ್ಜಿತ ಗ್ರಂಥಾಲಯ, ಡಿಜಿಟಲ್ ಲೈಬ್ರರಿ, ಇಂಗ್ಲಿಷ್ ತರಬೇತಿಯ ಪ್ರಯೋಗಾಲಯ, ಉತ್ತಮ ಕ್ರೀಡಾ ಸಲಕರಣೆಗಳು, ಸ್ಮಾರ್ಟ್ ಕ್ಲಾಸ್ ರೂಮ್‌ಗಳು, ಸರ್ಕಾರದ ಸ್ಕಾಲರ್‌ಶಿಪ್, ವೈಫೈ, ಸಿ.ಸಿ. ಕ್ಯಾಮರಾ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ವಾಹನಗಳ ನಿಲುಗಡೆಗೆ ಪಾರ್ಕಿಂಗ್ ವ್ಯವಸ್ಥೆ ಇದೆ.
ಸರ್ಕಾರ ನಿಗದಿಪಡಿಸಿದ ಶುಲ್ಕ ಮಾತ್ರ ಪಾವತಿಸಿಕೊಳ್ಳಲಾಗುವುದು. ಈಗಾಗಲೇ ಕಾಲೇಜಿನಲ್ಲಿ ಪದವಿ ಕೋರ್ಸ್ಗಳ ಪ್ರವೇಶಾತಿ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಕಾಲೇಜಿನ ಕಚೇರಿಯಲ್ಲಿ ಅರ್ಜಿ ಪಡೆದು ಪ್ರವೇಶ ಪಡೆಯಬಹುದಾಗಿದೆ.
ಮೋಕಾ ಹೋಬಳಿಯ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಈ ಅವಕಾಶ ಸದುಪಯೋಗ ಪಡಿಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕೆಂದು ಪ್ರಾಂಶುಪಾಲರು ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು- ಡಾ.ಇಸ್ಮಾಯಿಲ್ ಎಂ ಮಕಾಂದರ್ ಮೊ.ಸಂ:7975795080, ಎಂ.ಬಸವರಾಜ ಅರ್ಥಶಾಸ್ತç ಸಹಾಯಕ ಪ್ರಾಧ್ಯಾಪಕರು 990633024 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಏ.28 ರಂದು ಭಗವಾನ್ ಬುದ್ಧ ಜಯಂತಿ ಕುರಿತು ಪೂರ್ವಭಾವಿ ಸಭೆ
ಬಳ್ಳಾರಿ,ಏ.25(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಮೇ 12 ರಂದು ಭಗವಾನ್ ಬುದ್ಧ ಜಯಂತಿ ಆಚರಣೆ ಕುರಿತು ಚರ್ಚಿಸಲು ಏ.28 ರಂದು ಸಂಜೆ 11.30 ಗಂಟೆಗೆ ಜಿಲ್ಲಾಧಿಕಾರಿಗಳ ಹಳೆಯ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ.
ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಅಧ್ಯಕ್ಷತೆ ವಹಿಸುವರು. ಸಭೆಗೆ ಸಮುದಾಯದ ಮುಖಂಡರು, ಜಿಲ್ಲಾ ಮಟ್ಟದ ಅಧಿಕಾರಿಗಳು ತಪ್ಪದೇ ಹಾಜರಾಗಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.
-----------
ಕುರೇಕುಪ್ಪ ಪುರಸಭೆ: ಅರ್ಜಿ ಆಹ್ವಾನ
ಬಳ್ಳಾರಿ,ಏ.25(ಕರ್ನಾಟಕ ವಾರ್ತೆ):
ಕುರೇಕುಪ್ಪ ಪುರಸಭೆ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ ಮಿಷನ್ (ನ)-2.0 ಯೋಜನೆಯ ಐ.ಇ.ಸಿ ಘಟಕದಡಿ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಕುರಿತು ನಗರ ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ವಿವಿಧ ಬಗೆಯ ಐ.ಇ.ಸಿ ಚಟುವಟಿಕೆಗಳನ್ನು ಕೈಗೊಳ್ಳಲು ಅರ್ಹ ಸ್ವ-ಸಹಾಯ ಗುಂಪುಗಳ ಸದಸ್ಯರುಗಳ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
*ಅರ್ಹತೆ:*
10ನೇ ತರಗತಿ/ತತ್ಸಮಾನ ಶಿಕ್ಷಣ ಹೊಂದಿರತಕ್ಕದ್ದು. ಅಭ್ಯರ್ಥಿಯು ಕನ್ನಡ ಮಾತನಾಡಲು ಹಾಗೂ ಬರೆಯಲು ತಿಳಿದಿರಬೇಕು. ಅರ್ಜಿ ಸಲ್ಲಿಸುವವರು ಸ್ವ-ಸಹಾಯ ಗುಂಪಿನಲ್ಲಿ ಕಾರ್ಯನಿರ್ವಹಿಸಿರುವ ಬಗ್ಗೆ ನಲ್ಮ್/ಭಾರತ/ಕರ್ನಾಟಕ ಸರ್ಕಾರದಿಂದ ಸೂಕ್ತ ದಾಖಲೆ ಹೊಂದಿರಬೇಕು.
ಅರ್ಜಿದಾರರು ಕಂಪ್ಯೂಟರ್ ಸಾಕ್ಷರತೆಯ ಎಮ್.ಎಸ್.ಆಫೀಸ್, ಎಮ್.ಎಸ್. ಎಕ್ಸ್ಎಲ್ ನಿರ್ವಹಿಸುವ ಬಗ್ಗೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಪರಿಣಿತರಾಗಿರಬೇಕು. ಮಾಹಿತಿ ಶಿಕ್ಷಣ ಮತ್ತು ಸಂವಹನದಡಿ ಗ್ರಾಮ ಪಂಚಾಯಿತಿ ಅಥವಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿರುವ ಅನುಭವವುಳ್ಳ ಅಭ್ಯರ್ಥಿಗಳಿಗೆ ಆದ್ಯತೆಯ ಮೇರೆಗೆ ಆಯ್ಕೆ ಮಾಡಲಾಗುವುದು.
ಈ ಮೇಲಿನ ಎಲ್ಲಾ ದಾಖಲೆ ಮತ್ತು ಅನುಭವವುಳ್ಳ ಅಭ್ಯರ್ಥಿಗಳಿದ್ದಲ್ಲಿ ಕುರೇಕುಪ್ಪ ಪುರಸಭೆ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಗಳನ್ನು ಮೇ 03 ರ ಬೆಳಿಗ್ಗೆ 08 ಗಂಟೆಯಿAದ ಮಧ್ಯಾಹ್ನ 01.30 ರವರೆಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂ.08395-295601 ಗೆ ಸಂಪರ್ಕಿಸಬಹುದು ಎಂದು ಕುರೇಕುಪ್ಪ ಪುರಸಭೆಯ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಸಂಡೂರು ಪುರಸಭೆ: ಅರ್ಜಿ ಆಹ್ವಾನ
ಬಳ್ಳಾರಿ,ಏ.25(ಕರ್ನಾಟಕ ವಾರ್ತೆ):
ಸಂಡೂರು ಪುರಸಭೆ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಷನ್ 2.0 ರಡಿ ಐಇಸಿ ಚಟುವಟಿಕೆ ಕೈಗೊಳ್ಳಲು ಸ್ವಸಹಾಯ ಗುಂಪು ಸದಸ್ಯರ ನೇಮಕಾತಿಗಾಗಿ ಆಸಕ್ತಿಯುಳ್ಳ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಂಡೂರು ಪುರಸಭೆ ವ್ಯಾಪ್ತಿಯಲ್ಲಿ 03 ವರ್ಷಗಳವರೆಗೆ ಪೂರ್ಣಾವಧಿಗೆ ಐಇಸಿ ಚಟುವಟಿಕೆ ಕೈಗೊಳ್ಳಲು ಆಸಕ್ತಿ ಹೊಂದಿರುವ ನಲ್ಮ್ ಡೇ ಅಥವಾ ಎನ್‌ಆರ್‌ಎಲ್‌ಎಂ ಅಡಿ ನೋಂದಾಯಿತ ಸ್ವ-ಸಹಾಯ ಗುಂಪು ಸದಸ್ಯರು ನಿಗಧಿತ ದಾಖಲಾತಿಗಳೊಂದಿಗೆ ಸಂಡೂರು ಪುರಸಭೆ ಕಚೇರಿಗೆ ಮೇ 03 ರೊಳಗೆ ಅರ್ಜಿ ಸಲ್ಲಿಸಬಹುದು.
ಸ್ವಚ್ಚ ಭಾರತ್ ಮಿಷನ್ ನ ಅರಿವು ಮೂಡಿಸುವ ಕಾರ್ಯಕ್ರಮಗಳಲ್ಲಿರುವ ಆಸಕ್ತಿ, ಜ್ಞಾನಕೌಶಲ್ಯ, ಕಂಪ್ಯೂಟರ ಜ್ಞಾನ ಮತ್ತು ಮಾಹಿತಿಯ ಕುರಿತು ನಿರ್ಣಯಿಸಲು ಜಿಲ್ಲಾ ಮಟ್ಟದಲ್ಲಿ ಸಂದರ್ಶನವನ್ನು ಆಯೋಜಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಆಯ್ಕೆ ಪ್ರಕ್ರಿಯೆ ಮತ್ತು ಗೌರವಧನಕ್ಕೆ ಸಂಬAಧಿಸಿದ ಇತರೆ ವಿವರಗಳಿಗಾಗಿ ಸಂಡೂರು ಪುರಸಭೆಯ ಪರಿಸರ ಅಭಿಯಂತರ ಕಚೇರಿ ಅಥವಾ ದೂ.08395-260275 ಗೆ ಸಂಪರ್ಕಿಸಬಹುದು ಎಂದು ಸಂಡೂರು ಪುರಸಭೆಯ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------------
ಕುಡತಿನಿ: ಅರ್ಜಿ ಆಹ್ವಾನ
ಬಳ್ಳಾರಿ,ಏ.25(ಕರ್ನಾಟಕ ವಾರ್ತೆ):
ಕುಡತಿನಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಷನ್ 2.0 ರಡಿ ಐಇಸಿ ಚಟುವಟಿಕೆ ಕೈಗೊಳ್ಳಲು ಸ್ವಸಹಾಯ ಗುಂಪು ಸದಸ್ಯರ ನೇಮಕಾತಿಗಾಗಿ ಆಸಕ್ತಿಯುಳ್ಳ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಂಡೂರು ಪುರಸಭೆ ವ್ಯಾಪ್ತಿಯಲ್ಲಿ 03 ವರ್ಷಗಳವರೆಗೆ ಪೂರ್ಣಾವಧಿಗೆ ಐಇಸಿ ಚಟುವಟಿಕೆ ಕೈಗೊಳ್ಳಲು ಆಸಕ್ತಿ ಹೊಂದಿರುವ ನಲ್ಮ್ ಡೇ ಅಥವಾ ಎನ್‌ಆರ್‌ಎಲ್‌ಎಂ ಅಡಿ ನೋಂದಾಯಿತ ಸ್ವ-ಸಹಾಯ ಗುಂಪು ಸದಸ್ಯರು ನಿಗಧಿತ ದಾಖಲಾತಿಗಳೊಂದಿಗೆ ಕುಡತಿನಿ ಪಟ್ಟಣ ಪಂಚಾಯಿತಿ ಕಚೇರಿಗೆ ಮೇ 03 ರೊಳಗೆ ಅರ್ಜಿ ಸಲ್ಲಿಸಬಹುದು.
ಸ್ವಚ್ಚ ಭಾರತ್ ಮಿಷನ್ ನ ಅರಿವು ಮೂಡಿಸುವ ಕಾರ್ಯಕ್ರಮಗಳಲ್ಲಿರುವ ಆಸಕ್ತಿ, ಜ್ಞಾನಕೌಶಲ್ಯ, ಕಂಪ್ಯೂಟರ ಜ್ಞಾನ ಮತ್ತು ಮಾಹಿತಿಯ ಕುರಿತು ನಿರ್ಣಯಿಸಲು ಜಿಲ್ಲಾ ಮಟ್ಟದಲ್ಲಿ ಸಂದರ್ಶನವನ್ನು ಆಯೋಜಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
*ಬೇಕಾದ ದಾಖಲೆ:*
ಗುರುತಿನ ಪುರಾವೆ, ವಿಳಾಸದ ಪುರಾವೆ, ಸ್ವ-ಸಹಾಯ ಗುಂಪು ಅಡಿ ನೋಂದಾಯಿಸಿದ ದಾಖಲೆ, ಶೈಕ್ಷಣಿಕ ಅರ್ಹತಾ ದಾಖಲೆ ಮತ್ತು ನಲ್ಮ್-ಡೇ ಅವರಿಂದ ಹಿಂಬರಹರ ನಮೂನೆ.
ಆಯ್ಕೆ ಪ್ರಕ್ರಿಯೆ ಮತ್ತು ಗೌರವಧನಕ್ಕೆ ಸಂಬAಧಿಸಿದ ಇತರೆ ವಿವರಗಳಿಗಾಗಿ ಕುಡತಿನಿ ಪಟ್ಟಣ ಪಂಚಾಯಿತಿಯ ಆರೋಗ್ಯ ಶಾಖೆ ಅಥವಾ ದೂ.08395-248025 ಗೆ ಸಂಪರ್ಕಿಸಬಹುದು ಎಂದು ಕುಡತಿನಿ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------------
ಬಳ್ಳಾರಿ: ಡಾ. ರಾಜ್‌ಕುಮಾರ್ ಜನ್ಮದಿನಾಚರಣೆಯ ಅಂಗವಾಗಿ ಕನ್ನಡ ಚಲನಚಿತ್ರ ಗೀತೆಗಳ ಗಾಯನ | ಡಾ.ರಾಜ್ ಕುಮಾರ್ ಮೇರು ವ್ಯಕ್ತಿತ್ವದ ಖ್ಯಾತ ನಟ: ಪಿ.ಪ್ರಮೋದ್
ಬಳ್ಳಾರಿ,ಏ.24(ಕರ್ನಾಟಕ ವಾರ್ತೆ):
ಡಾ.ರಾಜ್ ಕುಮಾರ್ ಅವರು ಮೇರು ವ್ಯಕ್ತಿತ್ವದ ಖ್ಯಾತ ನಟ. ಅವರ ಸಾಮಾಜಿಕ ಕಳಕಳಿ, ಕನ್ನಡದ ಅಪಾರ ಪಾಂಡಿತ್ಯದ ಮೂಲಕ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿದ್ದಾರೆ ಎಂದು ಸಹಾಯಕ ಆಯುಕ್ತ ಪಿ.ಪ್ರಮೋದ್ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಡಾ.ರಾಜ್‌ಕುಮಾರ್ ಜನ್ಮದಿನಾಚರಣೆಯ ಅಂಗವಾಗಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಗುರುವಾರ ಏರ್ಪಡಿಸಿದ್ದ ಕನ್ನಡ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ವರನಟ ಡಾ.ರಾಜ್ ಕುಮಾರ್ ಅವರಂತೆ ಆದರ್ಶಗುಣ ಹಾಗೂ ಆಚಾರ-ವಿಚಾರಧಾರೆಗಳು ಇಂದಿಗೂ ಪ್ರಸ್ತುತವಾಗಿದ್ದು, ಇಂದಿನ ಯುವಜನಾಂಗ ಬೆಳೆಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.
ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ಸಿರಿಗೇರಿ ಪನ್ನರಾಜ್ ಅವರು ವಿಶೇಷ ಉಪನ್ಯಾಸದಲ್ಲಿ ಮಾತನಾಡಿ, ಕನ್ನಡದ ಅಸ್ಮಿತೆ, ಕನ್ನಡದ ಕಣ್ಮಣಿ ಡಾ.ರಾಜ್ ಕುಮಾರ್ ಅವರ ಜನ್ಮದಿನಾಚರಣೆಯನ್ನು ಜಿಲ್ಲಾ ಮಟ್ಟದಲ್ಲಿ ಆಚರಿಸುವಂತೆ ಆದೇಶಿಸಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆ ತಿಳಿಸಿದರು.
ಡಾ.ರಾಜ್ ಕುಮಾರ್ ಅವರ ಪೌರಾಣಿಕ ಹಾಗೂ ಐತಿಹಾಸಿಕ ಹಿನ್ನೆಲೆಯ, ಸಾಮಾಜಿಕ ಕಳಕಳಿಯ ಚಲನಚಿತ್ರಗಳು ಜನರನ್ನು ಪ್ರಭಾವಿತಗೊಳಿಸಿದ್ದವು. ಅವರ ಎಲ್ಲಾ ಚಲನಚಿತ್ರಗಳನ್ನು ಕುಟುಂಬ ಸಮೇತರಾಗಿ ನೋಡುವಂತಹದ್ದಾಗಿದ್ದವು. ಬೀದರ್ ನಿಂದ ಚಾಮರಾಜನಗರ ದವರೆಗೆ ಕನ್ನಡಾಭಿಮಾನಿಯಾಗಿ ಸಮಾನ ಕನ್ನಡ ಭಾಷೆ ಮಾತನಾಡುವಂತೆ ಪ್ರೇರೇಪಿಸಿದವರು ಎಂದರು.
ಅಂದಿನ ಕಾಲದಲ್ಲಿ ಕುವೆಂಪು ಅವರ ಸಾಹಿತ್ಯ ಪುಸ್ತಕಗಳನ್ನು ಕೇವಲ ಅಕ್ಷರಸ್ಥರು ಮಾತ್ರ ಓದುತ್ತಿದ್ದರು. ಆದರೆ ಅವುಗಳ ಸಂದೇಶಗಳನ್ನು ತಮ್ಮದೇ ಆದ ನಟನಾ ಶೈಲಿಯ ಮೂಲಕ ಬೆಳ್ಳಿ ಪರದೆಯ ಮೂಲಕ ಬಿಂಬಿಸುತ್ತಿದ್ದವರು ಡಾ.ರಾಜ್ ಕುಮಾರ್ ಎಂದು ತಿಳಿಸಿದರು.
*ಬಳ್ಳಾರಿಗೆ ಅವಿನಾಭಾವ ಸಂಬಂಧ:*
ಡಾ.ರಾಜ್ ಕುಮಾರ್ ಅವರು ಸರಳ ಜೀವನ ಹೊಂದಿದ್ದವರು. ಅದೇರೀತಿಯಲ್ಲೂ ಗಣಿನಾಡು ಬಳ್ಳಾರಿ ಜೊತೆಗೆ ಅವಿನಾಭಾವ ಸಂಬಂಧವಿತ್ತು. ‘ನಾ ನಿನ್ನ ಮರೆಯಲಾರೆ’ ಚಿತ್ರದ ಕೊನೆಯಲ್ಲಿ ಚಲಿಸುವ ರೈಲ್ವೆಯಲ್ಲಿ ಭೇಟಿ ಮಾಡುವ ಸೀನ್ ನಗರದ ಹೊರವಲಯದ ಓಬಳಾಪುರ ಬಳಿ ಚಿತ್ರೀಕರಿಸಲಾಗಿತ್ತು. ಮಯೂರ ಹೋಟೆಲ್ ಗೆ ಆಗಮಿಸಿದ್ದರು. ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರ ನಿರ್ಮಾಣದ ದೇಣಿಗೆಗೆ ಡಾ.ರಾಜ್ ಕುಮಾರ್ ಅವರು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟಿದ್ದರು. ಆ ಸಂದರ್ಭದಲ್ಲಿ ಜಿಲ್ಲಾಧಿಕಾರಿಯಾಗಿ ಗೌರಿ ಎಸ್.ತ್ರಿವೇದಿ ಇದ್ದರು. ಗೋಕಾಕ ಚಳುವಳಿಗಳಂತಹ ಕನ್ನಡ ಭಾಷೆ ರಕ್ಷಣೆಯ ಹೋರಾಟಕ್ಕೆ ಡಾ.ರಾಜ್ ಕುಮಾರ್ ಅವರು ಬಳ್ಳಾರಿಗೆ ಆಗಮಿಸಿದ್ದರು ಎಂದು ಎಲ್ಲಾ ಸನ್ನಿವೇಶಗಳನ್ನು ಮೆಲುಕು ಹಾಕಿದರು.
ಈ ಹಿಂದೆ ಮಕ್ಕಳು ಮನೆಯಲ್ಲಿ ತಂದೆ-ತಾಯಿಯರ ಮಾತು ಕೇಳದಿದ್ದಾಗ ಡಾ.ರಾಜ್ ಕುಮಾರ್ ಅವರ ಚಲನಚಿತ್ರ ತೋರಿಸುತ್ತಿದ್ದರು. ಅಷ್ಟೊಂದು ಅರ್ಥಗರ್ಭಿತವಾಗಿರುತ್ತಿದ್ದವು. ಮಕ್ಕಳಿಗೆ ಕನ್ನಡದ ಅಕ್ಷರಗಳನ್ನು ಕಳಿಸೋಣ ಎಂದ ಅವರು, ಬರುವ ಡಿಸೆಂಬರ್ ತಿಂಗಳಲ್ಲಿ ಬಳ್ಳಾರಿಯಲ್ಲಿ ಅಖಿಲ ಭಾರತ 88ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗುತ್ತಿದ್ದು, ಕನ್ನಡದ ನಾಡು-ನುಡಿ, ಭಾಷಾಭಿಮಾನ, ಕನ್ನಡದ ಅಸ್ಮಿತೆಯನ್ನು ಇನ್ನಷ್ಟು ಬೆಳೆಸುವ ನಿಟ್ಟಿನಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಸಿದ್ಧರಾಗೋಣ. ತಮ್ಮ ನೆರೆ-ಹೊರೆಯವರು ಸೇರಿ ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲರೂ ತಪ್ಪದೇ ಭಾಗವಹಿಸಬೇಕು. ಇದು ಕನ್ನಡದ ಜಾತ್ರೆ, ನಾವೆಲ್ಲರೂ ಕನ್ನಡದ ಸೇವಕರಾಗೋಣ ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಬಳ್ಳಾರಿಯ ಮಸ್ತಾನ್ ಸೌಂಡ್ಸ್ ನ ಪ್ರತಿಭಾ ಆರ್ಕೆಷ್ಟ್ರಾ ವತಿಯಿಂದ ಕನ್ನಡ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ ನಡೆಸಿಕೊಟ್ಟರು. ತಂಡದ ರಘುಪತಿ, ಸರಸ್ವತಿ ಮತ್ತು ಉಮೇಶ್ ಅವರು ಡಾ.ರಾಜ್ ಕುಮಾರ್ ಅವರ ಚಲನಚಿತ್ರ ಗೀತೆಗಳನ್ನು ಹಾಡುವ ಮೂಲಕ ಎಲ್ಲರ ಮನ ಸೆಳೆದರು.
ಕಾರ್ಯಕ್ರಮದಲ್ಲಿ ಡಾ.ರಾಜ್‌ಕುಮಾರ್ ಜನ್ಮದಿನಾಚರಣೆಯ ಅಂಗವಾಗಿ ಡಾ.ರಾಜ್ ಕುಮಾರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಲಾಯಿತು.
*ಮೌನಾಚರಣೆ:*
ಇದೇ ಸಂದರ್ಭದಲ್ಲಿ ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಂ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಸಾವನಪ್ಪಿದವರ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಸಹಾಯಕ ವಿ.ಸಿ.ಗುರುರಾಜ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ನಿಷ್ಠಿ ರುದ್ರಪ್ಪ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿ, ಕರ್ನಾಟಕ ಯುವ ಸಂಘದ ಅಧ್ಯಕ್ಷ ಬಿ.ಬಸವರಾಜ, ಬಳ್ಳಾರಿ ಮಹಾನಗರ ಪಾಲಿಕೆಯ ಮಾಜಿ ಮೇಯರ್ ಗಳಾದ ಮಲ್ಲನಗೌಡ, ವಲಿಸಾಬ್ ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು, ಡಾ.ರಾಜ್ ಕುಮಾರ್ ಅಭಿಮಾನಿಗಳು, ಸಾರ್ವಜನಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
-------------
ಸಾರ್ವಜನಿಕರು ಅಂಬುಲೆನ್ಸ್ ಸೇವೆಯ ಸದುಪಯೋಗ ಪಡೆದುಕೊಳ್ಳಿ: ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬು
ಬಳ್ಳಾರಿ,ಏ.24(ಕರ್ನಾಟಕ ವಾರ್ತೆ):
ಗ್ರಾಮೀಣ ಜನರ ಆರೋಗ್ಯ ಸೇವೆಗಳಿಗಾಗಿ ತುರ್ತು ಸಂದರ್ಭದಲ್ಲಿ ಉಪಯುಕ್ತವಾದ ಅಂಬುಲೆನ್ಸ್ ಸೇವೆಯನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಲಕುಂದಿ ಗ್ರಾಮ ಪಂಚಾಯತ್, ಪ್ರಾಥಮಿಕ ಆರೋಗ್ಯ ಕೇಂದ್ರ ಶಿಡಿಗಿನಮೊಳ ಇವರೊಂದಿಗೆ ವಿ.ಆರ್.ಕೆ.ಪಿ ಸ್ಪಾಂಜ್ ಅಂಡ್ ಪವರ್ ಪ್ಲಾಂಟ್ ಎಲ್.ಎಲ್.ಪಿ ಹಲಕುಂದಿ ಇವರು ಹಲಕುಂದಿ, ಹೊನ್ನಳ್ಳಿ ತಾಂಡ ಹಾಗೂ ಹೊನ್ನಳ್ಳಿ ಗ್ರಾಮಗಳಿಗೆ ಒಳಗೊಂಡAತೆ ತುರ್ತು ಸನ್ನಿವೇಶಗಳಲ್ಲಿ ಸಹಾಯಕವಾಗುವ ಮಿನಿ ಅಂಬುಲೆನ್ಸ್ ಚಾಲನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಆರೋಗ್ಯದ ಸಮಸ್ಯೆಗಳು ವ್ಯಕ್ತಿಗೆ ಯಾವ ಸಂದರ್ಭದಲ್ಲಿ ಯಾವ ರೀತಿ ಬಂದೆರುಗುವುದನ್ನು ಊಹಿಸಲು ಯಾರಿಗೂ ಸಾಧ್ಯವಿಲ್ಲ. ಅಂತಹ ಸಂದರ್ಭದಲ್ಲಿ ಮನೆಯ ಹತ್ತಿರವೇ ಆಗಮಿಸಿ ಜಿಲ್ಲಾ ಮಟ್ಟದ ಆಸ್ಪತ್ರೆಗಳಿಗೆ ರೋಗಿಗಳನ್ನು ಕರೆದುಕೊಂಡು ಹೋಗುವ ಸೌಲಭ್ಯವನ್ನು ಅವಶ್ಯಕತೆ ಇರುವ ತುರ್ತು ಸಂದರ್ಭದಲ್ಲಿ ಪಡೆಯುವ ಮೂಲಕ ಸ್ವಾಸ್ಥö್ಯ ಸಮಾಜ ನಿರ್ಮಾಣಕ್ಕೆ ಜನತೆಯು ಕೈ ಜೋಡಿಸಬೇಕು ಎಂದು ಹೇಳಿದರು.
ಸರ್ಕಾರವು ಸಾರ್ವಜನಿಕರ ಸೇವೆಗೆ ತುರ್ತು ಸಂದರ್ಭಗಳಲ್ಲಿ ಮನೆಯಿಂದ ಹತ್ತಿರದ ಆಸ್ಪತ್ರೆಗಳಿಗೆ ತೆರಳಲು 108 ತುರ್ತು ವಾಹನದ ಸೌಲಭ್ಯ ಒದಗಿಸಿದ್ದು, ಪ್ರಸ್ತುತ ಸಮುದಾಯದ ಆರೋಗ್ಯ ಸೇವೆಯನ್ನು ಮನಗಂಡು ವಿ.ಆರ್.ಕೆ.ಪಿ ಕಂಪನಿಯ ಸಿಎಸ್‌ಆರ್ ಅನುದಾನದ ಅಡಿ ಒದಗಿಸಿರುವ ಅಂಬುಲೆನ್ಸ್ ಅನ್ನು ಗರ್ಭಿಣಿ ಮಹಿಳೆಯರು, ಅಪಘಾತ ಸಂದರ್ಭದಲ್ಲಿ, ಬೆಂಕಿ ಅವಘಡ ಮತ್ತು ಇತರೆ ಯಾವುದೇ ತುರ್ತು ಸನ್ನಿವೇಶಗಳಲ್ಲಿ ಸದುಪಯೋಗ ಪಡಿಸಿಕೊಂಡು ಆರೋಗ್ಯ ಸುಧಾರಣೆಗೆ ಕೈ ಜೋಡಿಸಲು ವಿನಂತಿಸಿದರು.
ವಿ.ಆರ್.ಕೆ.ಪಿ ಕಂಪನಿಯ ಮಾನವ ಸಂಪನ್ಮೂಲ ಅಧಿಕಾರಿ ಸಂದೀಪ್ ಮಾತನಾಡಿ ಸಿ.ಎಸ್.ಆರ್ ಅನುದಾನದಡಿ ರೂ.8 ಲಕ್ಷ ವೆಚ್ಚದಲ್ಲಿ ಅಂಬುಲೆನ್ಸ್ ಒದಗಿಸಲಾಗಿದ್ದು, ಇಬ್ಬರು ತರಬೇತಿ ಪಡೆದ ವಾಹನ ಚಾಲಕರು ಸರತಿಯ ಮೇಲೆ ಕಾರ್ಯನಿರ್ವಹಿಸುತ್ತಾರೆ. ಅಂಬುಲೆನ್ಸ್ನಲ್ಲಿ ಆಕ್ಸಿಜನ್ ಸೌಲಭ್ಯ ಹಾಗೂ ಸ್ಟೆçಚರ್ ಹೊಂದಿದ ಬೆಡ್‌ನೊಂದಿಗೆ ರೋಗಿಗಳೊಂದಿಗೆ ಪಾಲಕರು ಕುಳಿತುಕೊಳ್ಳುವ ಆಸನದ ವ್ಯವಸ್ಥೆ ಇದ್ದು, ಸಾರ್ವಜನಿಕರು ಬಳ್ಳಾರಿಯ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ಕರೆದುಕೊಂಡು ಹೋಗುವ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿನಂತಿಸಿದರು.
ಹಲಕುAದಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಹೊನ್ನೂರಮ್ಮ ಅಂಬುಲೆನ್ಸ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಸುವರ್ಣಮ್ಮ, ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಡಾ.ಆರ್.ಅಬ್ದುಲ್ಲಾ, ವೈದ್ಯಾಧಿಕಾರಿ ಡಾ.ಸಂತೋಷ್ ಹೆಬ್ಬಾಳ್, ಗ್ರಾಮ ಪಂಚಾಯಿತಿ ಸದಸ್ಯರಾದ ಕೇಶವ್, ನಾಗರಾಜ್, ಕಟ್ಟಿಮನಿ ಬಸಪ್ಪ, ಶಿವಣ್ಣ, ಬುಡೇಂಸಾಬ್, ಕುಮಾರಸ್ವಾಮಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ಹೆಚ್ ದಾಸಪ್ಪನವರ, ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಎಂ.ಪ್ರಭಾಕರ್, ಕಾರ್ಯದರ್ಶಿ ರುದ್ರಪ್ಪ, ವಿ.ಆರ್.ಕೆ.ಪಿ ಕಂಪನಿಯ ಸಹಾಯಕ ಜನರಲ್ ಮ್ಯಾನೇಜರ್ ಗೌರಿ ಪ್ರಸಾದ್, ಪಿ.ಆರ್.ಒ ಪೀರಸಾಬ್, ಮುಖಂಡರಾದ ಗಾದಿಲಿಂಗಪ್ಪ, ತಿಮ್ಮನಗೌಡ, ಸಿಹೆಚ್‌ಒ ವಿಜಯಕುಮಾರ್, ಹೆಚ್‌ಐಒ ಹನುಮಂತಪ್ಪ, ಆಶಾಕಾರ್ಯಕರ್ತೆಯರಾದ ಪಲ್ಲವಿ, ರೇಣುಕ, ಗಂಗಮ್ಮ ಚೆನ್ನಮ್ಮ ಉಪಸ್ಥಿತರಿದ್ದರು.
--------------
ಮೇ 05 ರಂದು ಜಿಲ್ಲಾ ಮಟ್ಟದ ದಿಶಾ ಸಮಿತಿ ಸಭೆ
ಬಳ್ಳಾರಿ,ಏ.24(ಕರ್ನಾಟಕ ವಾರ್ತೆ):
ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲಾ ಅಭಿವೃದ್ಧಿ ಸಮನ್ವಯ ಉಸ್ತುವಾರಿ ಸಮಿತಿ “ದಿಶಾ” ಸಮಿತಿಯ ಸಭೆಯನ್ನು ಮೇ 05 ರಂದು ಬೆಳಿಗ್ಗೆ 10 ಗಂಟೆಗೆ ಸಂಡೂರು ತಾಲ್ಲೂಕಿನ ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದ ಸಭಾಂಗಣದಲ್ಲಿ ನಡೆಸಲು ನಿಗದಿಪಡಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಹಾಗೂ ದಿಶಾ ಸಮಿತಿಯ ಸದಸ್ಯ ಕಾರ್ಯದರ್ಶಿಯೂ ಆದ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ತಿಳಿಸಿದ್ದಾರೆ.
ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದರು ಹಾಗೂ ಜಿಲ್ಲಾ ಮಟ್ಟದ ದಿಶಾ ಸಮಿತಿಯ ಅಧ್ಯಕ್ಷರೂ ಆದ ಈ.ತುಕಾರಾಂ ಅವರು ಸಭೆಯ ಅಧ್ಯಕ್ಷತೆ ವಹಿಸುವರು.
ಸಭೆಗೆ ಸಂಬAಧಪಟ್ಟ ಇಲಾಖಾ ಅಧಿಕಾರಿಗಳು ಅಗತ್ಯಪೂರ್ಣ ಮಾಹಿತಿಯೊಂದಿಗೆ ತಪ್ಪದೇ ಹಾಜರಾಗಬೇಕು ಎಂದು ಅವರು ತಿಳಿಸಿದ್ದಾರೆ.
*ಅಹವಾಲು ಸ್ವೀಕಾರ:*
ಮೇ 05 ರಂದು ಬೆಳಿಗ್ಗೆ 09.30 ಗಂಟೆಗೆ ಸಂಡೂರು ತಾಲ್ಲೂಕು ತಹಶೀಲ್ದಾರರ ಕಚೇರಿಯಲ್ಲಿ ಕೇಂದ್ರ ಮತ್ತು ಕೇಂದ್ರ ಪುರಸ್ಕೃತ ಹಾಗೂ ಇತರೆ ಯೋಜನೆಗಳ ಕುರಿತಂತೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಅಧಿಕಾರಿಗಳು ತಪ್ಪದೇ ಹಾಜರಿರಬೇಕು ಎಂದು ಅವರು ತಿಳಿಸಿದ್ದಾರೆ.
-----------
ಗುರುವಾರ, ಏಪ್ರಿಲ್ 24, 2025
ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ: ಅರಿವು ಯೋಜನೆಯಡಿ ಅರ್ಜಿ ಅಹ್ವಾನ
ಬಳ್ಳಾರಿ,ಏ.24(ಕರ್ನಾಟಕ ವಾರ್ತೆ):
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ವತಿಯಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಅರಿವು ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತರಿAದ (ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಭೌದ್ದರು, ಸಿಖ್ಖರು, ಪಾರ್ಸಿಗಳು ಜನಾಂಗದವರಿAದ) ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿನಲ್ಲಿ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ಖ್, ಪಾರ್ಸಿ ಅಲ್ಪಸಂಖ್ಯಾತ ಸಮುದಾಯದ ವಿಧ್ಯಾರ್ಥಿಗಳಿಂದ ಅರಿವು (ಸಿಇಟಿ/ನೀಟ್) ಶೈಕ್ಷಣಿಕ ಸಾಲ ಯೋಜನೆಯಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
2025-26ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಸಿಇಟಿ/ನೀಟ್) ನಲ್ಲಿ ಆಯ್ಕೆಯಾಗುವ ವೈದ್ಯಕೀಯ ಎಂ.ಬಿ.ಬಿ.ಎಸ್ ಹಾಗೂ ದಂತ ವೈಧ್ಯಕೀಯ (ಬಿ.ಡಿ.ಎಸ್) ಹಾಗೂ ಬಿ.ಇ/ಬಿ.ಟೆಕ್, ಬ್ಯಾಚುಲರ್ ಆಫ್ ಆರ್ಕಿಟೇಕ್ಚರ್ , ಬಿ.ಆಯುಷ್ , ಫಾರ್ಮಸಿ, ಕೃಷಿ ವಿಜ್ಙಾನ ಮತ್ತು ಪಶು ವೈದ್ಯಕೀಯ ಇಂತಹ ಕೋರ್ಸಗಳಿಗೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ನಿಗಮದ ವೆಬ್ ಸೈಟ್ kmdconline.karnataka.gov.in ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
*ಅರಿವು ಸಾಲದ ಯೋಜನೆ (ರಿನ್ಯೂವಲ್) ಗೆ ಸಲ್ಲಿಸಬೇಕಾದ ದಾಖಲೆ:*
ಬೊನಾಫೈಡ್ / ಅಧ್ಯಯನ ಪ್ರಮಾಣ ಪತ್ರ, ಕಾಲೇಜು ಶುಲ್ಕದ ವಿವರ, ಹಿಂದಿನ ವರ್ಷ ಪಾಸಾದ ಅಂಕಪಟ್ಟಿ, ಕಾಲೇಜು ಬ್ಯಾಂಕ್ ವಿವರಗಳು, ಭದ್ರತಾ ಠೇವಣಿ (ಸಾಲದ ಮೊತ್ತದ ಶೇ.12) ಪಾವತಿ ಮಾಡಿದ ರಶೀದಿ, ಕೆಇಎ ದಾಖಲಾತಿ ಆದೇಶ ಪ್ರತಿ, ಇಂಡೆಮ್ನಿಟೀ (ನಷ್ಟ ಪರಿಹಾರ) ಬಾಂಡ್, ವಿದ್ಯಾರ್ಥಿಯ ಸ್ವಯಂ ಘೋಷಣೆ ಪತ್ರ, ಪೋಷಕರ ಸ್ವಯಂ ಘೋಷಣೆ ಪತ್ರ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಮೇ 23 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋನ್‌ಮೆAಟ್ ಪ್ರದೇಶದ ವಿಜಯನಗರ ಕಾಲೋನಿಯ ಹಳೇ ಮಾರುಕಟ್ಟೆ ರಸ್ತೆಯ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ)ದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ದೂ.08392-294370 ಗೆ ಸಂಪರ್ಕಿಸಬಹುದು ಎಂದು ಕನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
7 ಮತ್ತು 9ನೇ ತರಗತಿಯಲ್ಲಿ ಖಾಲಿ ಇರುವ ಸ್ಥಾನಗಳಿಗೆ ಭರ್ತಿ: ಅರ್ಜಿ ಆಹ್ವಾನ
ಬಳ್ಳಾರಿ,ಏ.24(ಕರ್ನಾಟಕ ವಾರ್ತೆ):
ತಾಲ್ಲೂಕಿನ ಕೊಳಗಲ್ಲು ಗ್ರಾಮದ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ 7ನೇ ತರಗತಿಯಲ್ಲಿ ಪರಿಶಿಷ್ಟ ವರ್ಗದ 03 (ಬಾಲಕ) ಮತ್ತು 9ನೇ ತರಗತಿಯಲ್ಲಿ ಪರಿಶಿಷ್ಟ ವರ್ಗದ 01 (ಬಾಲಕ) ಸ್ಥಾನ ಖಾಲಿಯಿದ್ದು, ಅರ್ಹತಾ ಪರೀಕ್ಷೆ ಮೂಲಕ ಭರ್ತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಏ.26 ಕೊನೆಯ ದಿನವಾಗಿದ್ದು, ಅರ್ಹತಾ ಪರೀಕ್ಷೆಯು ಏ.27 ರಂದು ಬೆಳಿಗ್ಗೆ 09 ಗಂಟೆಗೆ ಕೊಳಗಲ್ಲಿನ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ನಡೆಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕೊಳಗಲ್ಲು ಗ್ರಾಮದ ಏಕಲವ್ಯ ಮಾದರಿ ವಸತಿ ಶಾಲೆಯ ಪ್ರಾಂಶುಪಾಲರ ಕಚೇರಿಗೆ ಸಂಪರ್ಕಿಸಬಹುದು ಎಂದು ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ಬಳ್ಳಾರಿ: ಡಾ.ರಾಜ್‌ಕುಮಾರ್ ಜನ್ಮದಿನಾಚರಣೆಯ ಅಂಗವಾಗಿ ಗಣ್ಯರಿಂದ ಪುಷ್ಪನಮನ
ಬಳ್ಳಾರಿ,ಏ.24(ಕರ್ನಾಟಕ ವಾರ್ತೆ):
ಡಾ.ರಾಜ್‌ಕುಮಾರ್ ಜನ್ಮದಿನಾಚರಣೆಯ ಅಂಗವಾಗಿ ಗುರುವಾರ ಡಾ.ರಾಜ್‌ಕುಮಾರ್ ಉದ್ಯಾನವನದಲ್ಲಿನ ಡಾ.ರಾಜ್ ಕುಮಾರ್ ಅವರ ಪುತ್ಥಳಿಗೆ ಅಧಿಕಾರಿ ವೃಂದದವರು, ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಮಾತನಾಡಿ, ಕನ್ನಡ ನಾಡು-ನುಡಿ, ಭಾಷಾಭಿಮಾನ ರಾಷ್ಟç ಮಟ್ಟದಲ್ಲಿ ಬೆಳೆಸಲು ತಮ್ಮದೇ ಆದ ನಟನ ಶೈಲಿಯಲ್ಲಿ ಬೆಳ್ಳಿ ಪರದೆ ಮೇಲೆ ಒಲವು ಮೂಡಿಸಿದ ವರನಟ ಡಾ.ರಾಜ್ ಕುಮಾರ್ ಅವರ ಕೊಡುಗೆ ಅಪಾರ ಎಂದು ಹೇಳಿದರು.
ಡಾ.ರಾಜ್ ಕುಮಾರ್ ಅವರ ಎಲ್ಲಾ ಸಿನಿ ಚಿತ್ರಗಳು ಜೀವನದ ಎಲ್ಲಾ ಆಯಾಮಗಳನ್ನು ಪ್ರಸ್ತುತಪಡಿಸುತ್ತಿದ್ದವು. ಬಾಲ್ಯದಲ್ಲಿ ನಾವೆಲ್ಲರೂ ಅವರ ಚಿತ್ರಗಳನ್ನೇ ನೋಡಿಕೊಂಡು ಬೆಳೆದಿದ್ದೇವೆ ಎಂದು ತಿಳಿಸಿದ ಅವರು, ಇದೇ ಸಂದರ್ಭದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನದ ಶುಭಾಶಯ ತಿಳಿಸಿದರು.
ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ಸಿರಿಗೇರಿ ಪನ್ನರಾಜ್ ಅವರು ಮಾತನಾಡಿ, ಡಾ.ರಾಜ್ ಕುಮಾರ್ ಅವರ ಜನ್ಮದಿನಾಚರಣೆಯನ್ನು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆಚರಿಸುವಂತೆ ಆದೇಶಿಸಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆ ತಿಳಿಸಿದರು.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಪಿ.ಪ್ರಮೋದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಸಹಾಯಕ ವಿ.ಸಿ.ಗುರುರಾಜ, ಕರ್ನಾಟಕ ಯುವ ಸಂಘದ ಅಧ್ಯಕ್ಷ ಬಿ.ಬಸವರಾಜ, ಕರ್ನಾಟಕ ಜನಸೈನ್ಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಕೆ.ಎರ್ರಿಸ್ವಾಮಿ, ಸ್ವಾಮಿ ವಿವೇಕಾನಂದ ಯುವಕ ಸಂಘದ ಅಧ್ಯಕ್ಷ ಪಿ.ಗಾದೆಪ್ಪ, ಮುಖಂಡರಾದ ಚಂದ್ರಶೇಖರ್ ಅಚಾರ್, ರಸೂಲ್ ಸಾಬ್ ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು, ಡಾ.ರಾಜ್ ಕುಮಾರ್ ಅಭಿಮಾನಿಗಳು, ಸಾರ್ವಜನಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
*ಇಂದು ಸಂಜೆ ಕನ್ನಡ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ:*
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಡಾ.ರಾಜ್‌ಕುಮಾರ್ ಜನ್ಮದಿನಾಚರಣೆಯ ಅಂಗವಾಗಿ ಇಂದು (ಏ.24 ರಂದು) ಸಂಜೆ 5.30 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಕನ್ನಡ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ.
ಡಾ.ರಾಜ್‌ಕುಮಾರ್ ಜನ್ಮದಿನಾಚರಣೆಯ ಕಾರ್ಯಕ್ರಮ ಕುರಿತು ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಬಳ್ಳಾರಿಯ ಮಸ್ತಾನ್ ಸೌಂಡ್ಸ್ ನ ಪ್ರತಿಭಾ ಆರ್ಕೆಷ್ಟಾç ವತಿಯಿಂದ ಕನ್ನಡ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಡಾ.ರಾಜ್ ಕುಮಾರ್ ಅವರ ಅಭಿಮಾನಿಗಳು, ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿದಂತೆ ರಾಜಕೀಯ ಮುಖಂಡರು, ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ತಪ್ಪದೇ ಹಾಜರಾಗುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕು.
-----------
ಹಾವು ಕಡಿತಕ್ಕೊಳಗಾದ ವ್ಯಕ್ತಿಯನ್ನು ಗಾಬರಿಗೊಳಿಸದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಒದಗಿಸಿ: ಡಾ.ಮರಿಯಂಬಿ ವಿ.ಕೆ
ಬಳ್ಳಾರಿ,ಏ.24(ಕರ್ನಾಟಕ ವಾರ್ತೆ):
ಹಾವು ಕಡಿತಕ್ಕೊಳಗಾದ ವ್ಯಕ್ತಿಯನ್ನು ಗಾಬರಿಗೊಳಿಸದೆ, ಅವರೊಂದಿಗೆ ಶಾಂತವಾಗಿ ವರ್ತಿಸಿ, ಹತ್ತಿರದ ಆಸ್ಪತ್ರೆಗೆ ತಕ್ಷಣವೇ ಕರೆದುಕೊಂಡು ಬಂದು ಚುಚ್ಚುಮದ್ದು ಕೊಡಿಸುವ ಮೂಲಕ ಜೀವ ಹಾನಿಯಾಗದಂತೆ ಮಾಡಲು ಕೈ ಜೋಡಿಸಿ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ.ವಿ.ಕೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಗುಗ್ಗರಹಟ್ಟಿ ಇವರ ಸಂಯುಕ್ತಾಶ್ರಯದಲ್ಲಿ ನಗರದ ಮುಂಡ್ರಿಗಿ ಬಡಾವಣೆಯಲ್ಲಿ ಗುರುವಾರ ಏರ್ಪಡಿಸಿದ್ದ “ಹಾವು ಕಡಿತ ಕುರಿತು ಜಾಗೃತಿ” ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಹಾವು ಕಚ್ಚಿದಾಗ ಗಾಬರಿಯಾಗುವುದು ಸಾಮಾನ್ಯವಾಗಿದ್ದು, ಇದರಿಂದ ವ್ಯಕ್ತಿಯ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇರುತ್ತದೆ. ಅದರಲ್ಲೂ ವಿಷಕಾರಿ ಹಾವು ಕಡಿತದ ಸಂದರ್ಭದಲ್ಲಿ ವ್ಯಕ್ತಿಯನ್ನು ಯಾವುದೇ ವಾಹನ ಅಥವಾ 108 ಅಂಬುಲೆನ್ಸ್ ಮೂಲಕ ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಮೊದಲ ಆದ್ಯತೆ ನೀಡಬೇಕು ಎಂದರು.
ವೈದ್ಯಾಧಿಕಾರಿ ಡಾ.ಕಾಶೀಪ್ರಸಾದ್ ಮಾತನಾಡಿ, ಹಾವು ಕಚ್ಚಿದಾಗ ಕಚ್ಚಿದ ಜಾಗದ ಪಕ್ಕದಲ್ಲಿ ಬಟ್ಟೆಯನ್ನು ಕಟ್ಟುವುದು, ಬ್ಲೇಡ್ ಅಥವಾ ಚಾಕುವಿನಿಂದ ಗಾಯ ಮಾಡುವುದು, ಗಾಯವನ್ನು ಸುಡುವುದು, ನಾಟಿ ಔಷಧಿಗಳನ್ನು ನೀಡುವುದು ಮುಂತಾದವುಗಳನ್ನು ಮಾಡಬೇಡಿ ಎಂದು ಸಾರ್ವಜನಿಕರಲ್ಲಿ ವಿನಂತಿಸಿದರು.
*ಹಾವು ಕಚ್ಚಿದಾಗ ತೆಗೆದುಕೊಳ್ಳಬೇಕಾದ ಕ್ರಮಗಳು:*
ಹಾವು ಕಚ್ಚಿದಾಗ ರೋಗಿಯನ್ನು ಕೂರಿಸಿ ಹಾವು ಕಚ್ಚಿರುವ ಭಾಗ ಹೃದಯದ ಕೆಳಗೆ ಬರುವ ಹಾಗೆ ಇರಲಿ ರಕ್ತಪರಿಚಲನೆಗೆ ತಡೆಯಾಗುವಂತಹ ಕೈ ಗಡಿಯಾರ, ಬಳೆ, ಉಂಗುರ ಮುಂತಾದವುಗಳನ್ನು ತೆಗೆದು, ಕಚ್ಚಿದ ಭಾಗವು ಅಲುಗಾಡದಂತೆ ನೋಡಿಕೊಳ್ಳಬೇಕು.
ಮುಖ್ಯವಾಗಿ ಆಸ್ಪತ್ರೆಗೆ ಹೋಗುವಾಗ ವ್ಯಕ್ತಿಯ ರೋಗ ಲಕ್ಷಣಗಳಾದ ತೇಲುಗಣ್ಣು, ಕಣ್ಣು ಮುಚ್ಚುವುದು, ನಾಲಿಗೆ ತೊದಲುವಿಕೆ, ನುಂಗಲು ಕಷ್ಟವಾಗುವುದು, ಉಸಿರಾಟ ತೊಂದರೆ ಮುಂತಾದವುಗಳನ್ನು ಗಮನಿಸಬೇಕು.
ಹಾಗೆಯೇ ಗಾಯದ ಜಾಗದಲ್ಲಿ ತೀವ್ರ ಉರಿ, ನೋವು ಹರಡುವಿಕೆ ಅಥವಾ ಊದುವಿಕೆ ಗಾಯದ ಸುತ್ತ ಬಣ್ಣಹೀನವಾಗುವುದು, ಕೆಳಬೆನ್ನಿನಲ್ಲಿ ನೋವು ಮುಂತಾದ ಲಕ್ಷಣಗಳು ಅಂಗಾAಗಕ್ಕೆ ಹಾನಿ ಮಾಡುವ ವಿಷದ ಅಂಶವಾಗಿರುತ್ತದೆ.
ಈ ಲಕ್ಷಣಗಳನ್ನು ರೋಗಿಯಲ್ಲಿ ಕಂಡುಬAದರೆ ಜೊತೆಗಿರುವ ವ್ಯಕ್ತಿಯು ವೈದ್ಯರಿಗೆ ತಿಳಿಸುವ ಮೂಲಕ ವ್ಯಕ್ತಿಯ ಜೀವ ಕಾಪಾಡಲು ಸಾಧ್ಯವಾಗುವ ಚಿಕಿತ್ಸೆ ಒದಗಿಸಲು ಸಹಾಯಕವಾಗುತ್ತದೆ ಎಂದರು.
ಇದೇ ವೇಳೆಯಲ್ಲಿ ನಾಯಿ ಕಡಿತ, ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳು, ಬೇಸಿಗೆ ಹಿನ್ನಲೆಯಲ್ಲಿ ಶುದ್ದ ನೀರಿನ ಮಹತ್ವ ಕುರಿತು ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ನಮ್ಮ ಕ್ಲಿನಿಕ್ ನ ಡಾ.ಅಬ್ದುಲ್ಲಾ ಖಲೀಲ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಜಿಲ್ಲಾ ಎನ್‌ಸಿಡಿ ಸಲಹೆಗಾರ ಡಾ.ಜಬೀನ್ ತಾಜ್, ಜಿಲ್ಲಾ ಸಾಂಕ್ರಾಮಿಕ ರೋಗ ತಜ್ಞರಾದ ಡಾ.ವಿಶಾಲಾಕ್ಷಿ, ತಂಬಾಕು ನಿಯಂತ್ರಣಾ ವಿಭಾಗದ ಸರಸ್ವತಿ, ಎಮ್.ಸಿಂಧು, ನವೀನ್, ಆರೋಗ್ಯ ನೀರಿಕ್ಷಣಾಧಿಕಾರಿ ನಿರಂಜನ್ ಪತ್ತಾರ, ಮುದಸ್ಸರ್, ಆಶಾ ಕಾರ್ಯಕರ್ತೆ ಸಲ್ಮಾ ಸೇರಿದಂತೆ ಅಂಗನವಾಡಿ ಕಾರ್ಯಕರ್ತರು, ಗ್ರಾಮಸ್ಥರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
----------------
ಕನಿಷ್ಠ ಬೆಂಬಲ ಯೋಜನೆಯಡಿ ಜೋಳ ಖರೀದಿ
ಬಳ್ಳಾರಿ,ಏ.24(ಕರ್ನಾಟಕ ವಾರ್ತೆ):
2024-25 ನೇ ಸಾಲಿನ ಹಿಂಗಾರು ಋತುವಿನಲ್ಲಿ ಬೆಳೆದ ಜೋಳವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ಖರೀದಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ಸಕೀನ ಅವರು ತಿಳಿಸಿದ್ದಾರೆ.
ಈ ಕುರಿತು ಬಳ್ಳಾರಿ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ತೀರ್ಮಾನಿಸಿದ್ದು, 2024-25 ನೇ ಸಾಲಿನ ಬೆಂಬಲ ಬೆಲೆ ಯೋಜನೆ ಕಾರ್ಯಾಚರಣೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತ, ಬಳ್ಳಾರಿ ನಿರ್ವಹಿಸಲಿದೆ.
ಸರ್ಕಾರದ ಆದೇಶದಂತೆ ಬೆಂಬಲ ಬೆಲೆ ಯೋಜನೆಯಡಿ ಜೋಳವನ್ನು ಮಾರಾಟ ಮಾಡಲು ರೈತರು ಮೊದಲು ಕೃಷಿ ಇಲಾಖೆಯಲ್ಲಿ ಪ್ರೂಟ್ಸ್ ತಂತ್ರಾAಶದಲ್ಲಿ ನೋಂದಣಿ ಮಾಡಿಕೊಳ್ಳಬೇಕು. ನಂತರ ಆಯಾ ತಾಲ್ಲೂಕುಗಳ ಕೃಷಿ ಉತ್ಪನ್ನ ಮಾರುಕಟ್ಟೆ, ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ತಾಲೂಕು ಕೇಂದ್ರ ಕಚೇರಿಗಳಲ್ಲಿ ತೆರೆಯಲಾಗುವ ಖರೀದಿ ಕೇಂದ್ರಗಳಲ್ಲಿ ಜೋಳ ಮಾರಾಟ ಮಾಡಲು ನೋಂದಾಯಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
*ಸರ್ಕಾರ ಘೋಷಿಸಿರುವ ಬೆಂಬಲ ಬೆಲೆ:*
ಬಿಳಿಜೋಳ-ಹೈಬ್ರಿಡ್: ರೂ.3,371 ಮತ್ತು ಬಿಳಿಜೋಳ-ಮಾಲ್ದಂಡಿ: ರೂ.3,421.
*ನೋಂದಣಿ ಮತ್ತು ಖರೀದಿ ಅವಧಿ:*
ನೋಂದಣಿ ಈಗಾಗಲೇ ಪ್ರಾರಂಭಗೊAಡಿದ್ದು, ಮೇ 31 ರ ವರೆಗೆ ಖರೀದಿಸಲಾಗುವುದು.
*ಖರೀದಿ ಕೇಂದ್ರಗಳ ವಿವರ:*
ಬಳ್ಳಾರಿ ತಾಲ್ಲೂಕಿನ ಎಪಿಎಂಸಿ ಆವರಣ ಮತ್ತು ರೂಪನಗುಡಿ. ಸಿರುಗುಪ್ಪ ತಾಲ್ಲೂಕಿನ ಸಿರುಗುಪ್ಪ ಪಟ್ಟಣ, ಕರೂರು, ತಾಳೂರು ಮತ್ತು ಹಚ್ಚೋಳ್ಳಿ. ಕಂಪ್ಲಿ ತಾಲ್ಲೂಕಿನ ಕಂಪ್ಲಿ ಪಟ್ಟಣ, ಎಮ್ಮಿಗನೂರು. ಕುರುಗೋಡು ಮತ್ತು ಸಂಡೂರು.
*ರೈತರ ನೋಂದಣಿ:*
ರೈತರ ನೋಂದಣಿಯನ್ನು ತಾಲೂಕು ಮಟ್ಟದ /ಹೋಬಳಿ ಮಟ್ಟದಲ್ಲಿ ಖರೀದಿ ಕೇಂದ್ರಗಳಲ್ಲಿ ಆನ್‌ಲೈನ್ ಮುಖಾಂತರ ಮಾಡಲಾಗುವುದು. ಖರೀದಿ ಕೇಂದ್ರಕ್ಕೆ ರೈತರು ಕೃಷಿ ಇಲಾಖೆಯಿಂದ ಪಡೆದಿರುವ ಅವರ ಫ್ರೂಟ್ಸ್ ಐ.ಡಿ (ರೈತರ ನೊಂದಣಿ ಮತ್ತು ಏಕೀಕೃತ ಫಲಾನುಭವಿ ಮಾಹಿತಿ ವ್ಯವಸ್ಥೆ) ಮತ್ತು ಆಧಾರ್‌ನೊಂದಿಗೆ ನೋಂದಣಿ ಕೇಂದ್ರಕ್ಕೆ ಬರಬೇಕು.
ಬೆಂಬಲ ಬೆಲೆಗಾಗಿ ರೈತರನ್ನು ಪ್ರತ್ಯೇಕವಾಗಿ ನೊಂದಾಯಿಸದೆ ಕೇವಲ ಅವರ ಫ್ರೂಟ್ಸ್ ಐ.ಡಿ.ಯ ಮೂಲಕ ಖರೀದಿಗೆ ನೋಂದಾಯಿಸಲಾಗುವುದು. ರೈತರ ಫ್ರೂಟ್ಸ್ ಐ.ಡಿಯನ್ನು ರೈತರಿಂದಲೇ ಪ್ರಸ್ತುತ ಸಾಲಿನ ಫ್ರೂಟ್ಸ್ ಐ.ಡಿ ಪಡೆಯುವುದು ಕಡ್ಡಾಯ. ರೈತರ ಬಳಿ ಫ್ರೂಟ್ಸ್ ಐ.ಡಿ ಇಲ್ಲದಿದ್ದಲ್ಲಿ ಅಥವಾ ಅವರ ಫ್ರೂಟ್ಸ್ ಐ.ಡಿ ಮಾಹಿತಿ ಪರಿಷ್ಕರಿಸಲು ಕೃಷಿ ಇಲಾಖೆಯನ್ನು ಸಂಪರ್ಕಿಸಿ ಸರಿಪಡಿಸಿಕೊಳ್ಳಬೇಕು.
ಪ್ರತಿಯೊಬ್ಬ ರೈತರ ಫ್ರೂಟ್ಸ್ ಐ.ಡಿ ನಮೂದಿಸಿದ ನಂತರ ಫ್ರೂಟ್ಸ್ ದತ್ತಾಂಶದಿAದ ರೈತರ ಅಗತ್ಯ ಮಾಹಿತಿ ಲಭ್ಯವಾಗಲಿದೆ. ಮಾಹಿತಿಯಲ್ಲಿ ರೈತರ ಹೆಸರು, ವಿಳಾಸ, ಜಾತಿ, ವಯಸ್ಸು, ಮೊಬೈಲ್ ಸಂಖ್ಯೆ, ಜಮೀನು ಮತ್ತು ಬೆಳೆದಿರುವ ಬೆಳೆಯ ವಿವರಗಳು ಹಾಗೂ ರೈತರ ಬ್ಯಾಂಕ್ ಖಾತೆಯ ವಿವರಗಳು ಲಭ್ಯವಿರುತ್ತವೆ. ಹಾಗಾಗಿ ಪ್ರತ್ಯೇಕವಾಗಿ ಬೇರಾವುದೇ ದಾಖಲೆ ನೀಡುವ ಅವಶ್ಯಕತೆ ಇರುವುದಿಲ್ಲ.
ಫ್ರೂಟ್ಸ್ ದತ್ತಾಂಶದನ್ವಯ ರೈತರ ಬೆಳೆ ಸಮೀಕ್ಷೆ ವಿವರದಂತೆ ಬೆಳೆ ವಿಸ್ತೀರ್ಣಕ್ಕನುಗುಣವಾಗಿ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಬಹುದಾದ ಗರಿಷ್ಠ ಪ್ರಮಾಣವನ್ನು ತೋರಿಸಲಾಗುವುದು. ಖರೀದಿ ಕೇಂದ್ರಗಳಲ್ಲಿ ನೋದಣಿ ಮಾಡಿದಾಗ ಅದೇ ಖರೀದಿ ಕೇಂದ್ರದಲ್ಲೇ ಖರೀದಿ ಮಾಡಿಕೊಳ್ಳುವುದು. ರೈತರು ಖರೀದಿ ವಿವರಗಳನ್ನು ಒಪ್ಪಿ ನಮೂದಿಸಿದ ನಂತರ ಸ್ವೀಕೃತಿಯನ್ನು ಮುದ್ರಿಸಿ ರೈತರರಿಗೆ ನೀಡಲಾಗುವುದು. ರೈತರು ಭತ್ತ/ರಾಗಿ/ಜೋಳ ಸರಬರಾಜು ಮಾಡುವಾಗ ಎಫ್.ಎ.ಕ್ಯೂ ಗುಣಮಟ್ಟವನ್ನು ಪರಿಶೀಲಿಸಿ ಖರೀದಿಸಲಾಗುವುದು
*ರೈತರ ಖರೀದಿ ಮಿತಿ:*
ಜೋಳವನ್ನು ಪ್ರತಿ ರೈತರಿಂದ ಪ್ರತಿ ಎಕರೆಗೆ 20 ಕ್ವಿಂಟಾಲ್ ನಂತೆ ಗರಿಷ್ಠ 150 ಕ್ವಿಂ ಮೀರದಂತೆ ಖರೀದಿಸತಕ್ಕದ್ದು.
*ಹಣ ಪಾವತಿ:*
ಬೆಂಬಲ ಬೆಲೆ ಯೋಜನೆಯಡಿ ಜೋಳÀ ಸರಬರಾಜು ಮಾಡಿದ ರೈತರಿಗೆ ಅವರು ಕೃಷಿ ಇಲಾಖೆಯಲ್ಲಿ ನೋಂದಾಯಿಸಿ ಕೊಂಡಿರುವ ಬ್ಯಾಂಕ್ ಖಾತೆಗೆ ಆರ್.ಟಿ.ಜಿ.ಎಸ್ ಮೂಲಕ ಹಣ ಪಾವತಿಸಲಾಗುವುದು.
*ದಲ್ಲಾಳಿಗಳಿಗೆ/ಏಜೆಂಟರ್‌ಗಳಿಗೆ ಎಚ್ಚರಿಕೆ:*
ಮಧ್ಯವರ್ತಿಗಳು/ಏಜೆಂಟರ್‌ಗಳು ಖರೀದಿ ಕೇಂದ್ರಗಳಿಗೆ ಜೋಳವನ್ನು ತಂದಲ್ಲಿ ಅಂತಹವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು. ಬೆಂಬಲ ಬೆಲೆ ಯೋಜನೆ ಬಗ್ಗೆ ರೈತರಿಗೆ ಯಾವುದೇ ಸಮಸ್ಯೆಗಳಿದ್ದರೆ ಜಿಲ್ಲಾ ವ್ಯವಸ್ಥಾಪಕರು ಕರ್ನಾಟಕ ಕೃಷಿ ಮಾರಾಟ ಮಂಡಳಿ ಬಳ್ಳಾರಿ ಇವರು ಹಾಗೂ ತಾಲ್ಲೂಕಿನ ತಹಸಿಲ್ದಾರ್/ ಕೃಷಿ ಅಧಿಕಾರಿ/ ಎ.ಪಿ.ಎಂ.ಸಿ ಕಾರ್ಯದರ್ಶಿ/ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಲು ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತ, ಬಳ್ಳಾರಿ ಅಥವಾ ಸೈಯದ್ ವಸೀಮ್ ಪಾಷ (ಮೊ.9449864453) ಇವರನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಡೆಂಗ್ಯು ಜ್ವರ: ಚಿಕ್ಕ ಮಕ್ಕಳು, ಗರ್ಭಿಣಿಯರು, ವಯೋವೃದ್ಧರು ಕಾಳಜಿ ವಹಿಸಿ: ಡಾ.ಆರ್.ಅಬ್ದುಲ್ಲಾ
ಬಳ್ಳಾರಿ,ಏ.24(ಕರ್ನಾಟಕ ವಾರ್ತೆ):
ಕೆಲವು ದಿನಗಳಿಂದ ಜಿಲ್ಲೆಯಾದ್ಯಂತ ಸುರಿದ ಅಕಾಲಿಕ ಮಳೆಯಿಂದ ತಗ್ಗು ಗುಂಡಿಗಳು ಸ್ಭೆರಿದಂತೆ ಅಲ್ಲಲ್ಲಿ ನೀರು ನಿಲ್ಲುವ್ಯದರಿಂದ ಡೆಂಗ್ಯು ಹರಡುವ ಈಡಿಸ್ ಇಜಿಪ್ಟ್ ಸೊಳ್ಳೆಯ ಸಚಿತತಿ ಹೆಚ್ಚಾಗುವ್ಯದರಿಂದ ಡೆಂಗ್ಯು ಪ್ರಕರಣಗಳು ಕಂಡು ಬರುವ ಸಾಧ್ಯತೆಗಳಿದ್ದು, ಚಿಕ್ಕ ಮಕ್ಕಳು, ಗರ್ಭಿಣಿಯರು ಹಾಗೂ ವಯೋವೃದ್ಧರು ನಿರ್ಲಕ್ಷö್ಯ ವಹಿಸದೆ ವ್ಶೆದ್ಯರಿಂದ ಪರೀಕ್ಷಿಸಿಕೊಳ್ಳಿ ಎಚಿದು ಜಿಲ್ಲಾ ರೋಗ ವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಆರ್.ಅಬ್ದುಲ್ಲಾ ಅವರು ಸಾರ್ವಜನಿಕರಲ್ಲಿ ವಿನಚಿತಿಸಿದರು.
ನೀರು ನಿಲ್ಲದಂತೆ ಮಾಡುವ ಜೊತೆಗೆ ಬಳಕೆಗಾಗಿ ನೀರು ತುಂಬುವ ಪರಿಕರಣಗಳನ್ಮು ವಾರಕ್ಕೊಮ್ಮೆ ಸ್ವಚ್ಚಗೊಳಿಸಿ ಮತ್ತು ಯಾರಿಗಾದರೂ ಒಚಿದೇ ದಿನ ಜ್ವರ ಕಂಡು ಬಂದರೂ ಸಹ ವೈದ್ಯರ ಬಳಿ ಪರೀಕ್ಷಿಸಿ ಅಗತ್ಯ ಚಿಕಿತ್ಸೆ ಪಡೆಯಿರಿ ಎಚಿದು ತಿಳಿಸಿದರು.
ನಗರದ ಕೌಲ್‌ಬಜಾರ್‌ನ ಕವಾಡಿ ಗಲ್ಲಿಯಲ್ಲಿ ವೈದ್ಯಕೀಯ ತಂಡದೊAದಿಗೆ ಗುರುವಾರ ಮನೆ ಭೇಟಿ ನಡೆಸಿ ಮಾತನಾಡಿದ ಅವರು, ಸಾಮಾನ್ಯವಾಗಿ ಜ್ವರವನ್ನು ನಾವು ನಿರ್ಲ್ಯಕ್ಷಿಸುತ್ತೇವೆ, ಇಚಿತಹ ಸಚಿದರ್ಭದಲ್ಲಿ ಡೆಂಗ್ಯೂ ಸಂಬAಧಿತ ಜ್ವರವಾಗಿದ್ದರೆ ರೋಗಿಯ ಪ್ಲೇಟ್‌ಲೆಟ್ಸ್ಗಳ ಶೀಘ್ರ ಕುಸಿಯುವಿಕೆಯಿಚಿದ ಆರೋಗ್ಯ ಸಮಸ್ಯೆ ಎದುರಾಗಿ ರಕ್ತಸ್ರಾವದಂತಹ ಗಂಭಿರ ಸಮಸ್ಯೆ ಎದುರಿಸಬೇಕಾಗಬಹುದು. ಹಾಗಾಗಿ ಯಾರಿಗಾದರೂ 3 ದಿನಗಳ ಕಡಿಮೆಯಾಗದ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗದಲ್ಲಿ ನೋವು, ಮಾಂಸಖAಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಂಡಲ್ಲಿ ನಿರ್ಲಕ್ಷಿಸಿದೇ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಅಗತ್ಯ ಪರೀಕ್ಷೆ ಮಾಡಿಸಿ ವೈದ್ಯರ ಸಲಹೆಯಂತೆ ಲP್ಪ್ಷಣಗಳ ಆಧಾರದ ಮೇರೆಗೆ ಚಿಕಿತ್ಸೆ ಪಡೆಯಲು ಕೋರಿದರು.
ಆಶ್ರಯ ಕಾಲೋನಿ ವೈದ್ಯಾಧಿಕಾರಿ ಡಾ.ಕಾಶೀಪ್ರಸಾದ್ ಅವರು ಮಾತನಾಡಿ, ಈಗಾಗಲೇ ಮನೆಗಳಿಗೆ ಭೇಟಿ ನೀಡುವಾಗ ಬಾಟಲ್‌ನಲ್ಲಿ ಲಾರ್ವಾ (ಸೊಳ್ಳೆಯ ಮರಿ) ಸಂಗ್ರಹಿಸಿಕೊAಡು ಜನತೆಗೆ ಪ್ರಾತ್ಯಕ್ಷಿಕೆಯನ್ನು ನೀಡಿ, ಡ್ರಮ್, ಬ್ಯಾರಲ್, ನೀರಿನ ತೊಟ್ಟಿ, ಕಲ್ಲಿನ ಡೋಣಿ, ಹೂವಿನ ಕುಂಡಲ ಮುಂತಾದ ಪರಿಕರಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸಲು ಹಾಗೂ ಮುಚ್ಚಳ ಮುಚ್ಚಿ ಬಟ್ಟೆ ಕಟ್ಟಲು ವಿನಚಿತಿಸಿ, ಬಳಕೆ ಮಾಡದ ನೀರು ಸಂಗ್ರಹಕಗಳಿಗೆ ಕೊಬ್ಬರಿ ಎಣ್ಣೆಯನ್ನು ಹಾಕುವ ಮೂಲಕ ಸೊಳ್ಳೆ ಉತ್ಪತ್ತಿ ತಡೆಯಲು ವಿನಚಿತಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಜಿಲ್ಲಾ ಎನ್‌ವಿಬಿಡಿಸಿಪಿ ಸಲಹೆಗಾರ ಪ್ರತಾಪ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ದಾನಕುಮಾರಿ, ಆರೋಗ್ಯ ನಿರೀಕ್ಷಣಾಧಿಕಾರಿ ಮಹಾಲಿಂಗ, ಪ್ರಶಾಂತ್, ಆಶಾ ಕಾರ್ಯಕರ್ತೆ ಸಾವಿತ್ರಿ ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.
----------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳು (Atom)
















































