ಶುಕ್ರವಾರ, ಏಪ್ರಿಲ್ 25, 2025
ಮೇ 05 ರಂದು ಜಿಲ್ಲಾ ಮಟ್ಟದ ದಿಶಾ ಸಮಿತಿ ಸಭೆ
ಬಳ್ಳಾರಿ,ಏ.24(ಕರ್ನಾಟಕ ವಾರ್ತೆ):
ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲಾ ಅಭಿವೃದ್ಧಿ ಸಮನ್ವಯ ಉಸ್ತುವಾರಿ ಸಮಿತಿ “ದಿಶಾ” ಸಮಿತಿಯ ಸಭೆಯನ್ನು ಮೇ 05 ರಂದು ಬೆಳಿಗ್ಗೆ 10 ಗಂಟೆಗೆ ಸಂಡೂರು ತಾಲ್ಲೂಕಿನ ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದ ಸಭಾಂಗಣದಲ್ಲಿ ನಡೆಸಲು ನಿಗದಿಪಡಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಹಾಗೂ ದಿಶಾ ಸಮಿತಿಯ ಸದಸ್ಯ ಕಾರ್ಯದರ್ಶಿಯೂ ಆದ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ತಿಳಿಸಿದ್ದಾರೆ.
ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದರು ಹಾಗೂ ಜಿಲ್ಲಾ ಮಟ್ಟದ ದಿಶಾ ಸಮಿತಿಯ ಅಧ್ಯಕ್ಷರೂ ಆದ ಈ.ತುಕಾರಾಂ ಅವರು ಸಭೆಯ ಅಧ್ಯಕ್ಷತೆ ವಹಿಸುವರು.
ಸಭೆಗೆ ಸಂಬAಧಪಟ್ಟ ಇಲಾಖಾ ಅಧಿಕಾರಿಗಳು ಅಗತ್ಯಪೂರ್ಣ ಮಾಹಿತಿಯೊಂದಿಗೆ ತಪ್ಪದೇ ಹಾಜರಾಗಬೇಕು ಎಂದು ಅವರು ತಿಳಿಸಿದ್ದಾರೆ.
*ಅಹವಾಲು ಸ್ವೀಕಾರ:*
ಮೇ 05 ರಂದು ಬೆಳಿಗ್ಗೆ 09.30 ಗಂಟೆಗೆ ಸಂಡೂರು ತಾಲ್ಲೂಕು ತಹಶೀಲ್ದಾರರ ಕಚೇರಿಯಲ್ಲಿ ಕೇಂದ್ರ ಮತ್ತು ಕೇಂದ್ರ ಪುರಸ್ಕೃತ ಹಾಗೂ ಇತರೆ ಯೋಜನೆಗಳ ಕುರಿತಂತೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಅಧಿಕಾರಿಗಳು ತಪ್ಪದೇ ಹಾಜರಿರಬೇಕು ಎಂದು ಅವರು ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ