ಶುಕ್ರವಾರ, ಏಪ್ರಿಲ್ 11, 2025

ಏ.14 ರಂದು ಡಾ.ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆ ಕಾರ್ಯಕ್ರಮ

ಬಳ್ಳಾರಿ,ಏ.11(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಮತ್ತು ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆÀ ಕಾರ್ಯಕ್ರಮವನ್ನು ಏ.14 ರಂದು ಮಧ್ಯಾಹ್ನ 01 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ ಅವರು ಘನಉಪಸ್ಥಿತಿ ಇರುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಾಸಕರಾದ ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಜಿಲ್ಲಾ ಡಾ.ಬಿ.ಆರ್. ಅಂಬೇಡ್ಕರ್ ಸಂಘದ ಅಧ್ಯಕ್ಷ ಬಿ.ಕೆ. ಅನಂತ ಕುಮಾರ್ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ವಿವಿಯ ಡಾ.ಬಿ.ಆರ್. ಅಂಬೇಡ್ಕರ್ ಬಹುಶಿಸ್ತೀಯ ಸಂಶೋಧನಾ ಕೇಂದ್ರದ ಪ್ರಾಧ್ಯಾಪಕರು ಮತ್ತು ನಿರ್ದೇಶಕರಾದ ಡಾ.ಗೌರಿ ಮಾಣಿಕ್ ಮಾನಸ್ ಅವರು ವಿಶೇಷ ಉಪನ್ಯಾಸ ನೀಡುವರು. ಏ.14 ರಂದು ಬೆಳಿಗ್ಗೆ 09 ಗಂಟೆಗೆ ಡಾ.ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. *ಮೆರವಣಿಗೆ:* ಬಳಿಕ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದಿಂದ ಗಡಿಗಿ ಚೆನ್ನಪ್ಪ ವೃತ್ತ-ಬೆಂಗಳೂರು ರಸ್ತೆ-ಬ್ರೂಸ್‌ಪೇಟೆ ಪೊಲೀಸ್ ಠಾಣೆ-ಹೆಚ್.ಆರ್. ಗವಿಯಪ್ಪ ವೃತ್ತ-ರೈಲ್ವೇ ಸ್ಟೇಷನ್ ರಸ್ತೆ ಮೂಲಕ ಮುನಿಸಿಪಲ್ ಕಾಲೇಜು ಮೈದಾನದವರೆಗೆ ಮೆರವಣಿಗೆ ನಡೆಯಲಿದೆ. ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕರಾದ ಬಿ.ಎಸ್ ಲೋಕೇಶ್ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತರು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ.ಬಿ ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಸಂಘ-ಸAಸ್ಥೆಗಳ ಪದಾಧಿಕಾರಿಗಳು, ಮುಖಂಡರು ಹಾಗೂ ಸಾರ್ವಜನಿಕರು ಹಾಗೂ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ