ಸೋಮವಾರ, ಏಪ್ರಿಲ್ 28, 2025

ಮೇ 14 ರಂದು ಬಳ್ಳಾರಿ ತಾಲ್ಲೂಕು ಮಟ್ಟದ ಕುಂದು-ಕೊರತೆಗಳ ಸಭೆ

ಬಳ್ಳಾರಿ,ಏ.28(ಕರ್ನಾಟಕ ವಾರ್ತೆ): ಬಳ್ಳಾರಿ ತಾಲ್ಲೂಕಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಜನಾಂಗದವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸಲು ಬಳ್ಳಾರಿ ತಾಲ್ಲೂಕು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಕುಂದುಕೊರತೆ ಸಭೆಯನ್ನು ಮೇ 14 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕೌಲ್ ಬಜಾರ್ ನ 1ನೇ ರೈಲ್ವೇ ಗೇಟ್ ಬಳಿಯ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ. ಬಳ್ಳಾರಿ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಸಂಘದ ಮುಖ್ಯಸ್ಥರು, ಸದಸ್ಯರು, ದಲಿತ ಮುಖಂಡರು ಹಾಗೂ ಸಮುದಾಯದ ಜನರು ಸಮಸ್ಯೆಗಳಿದಲ್ಲಿ ಅಂದು ನಡೆಯುವ ಕುಂದು ಕೊರತೆ ಸಭೆಯಲ್ಲಿ ಭಾಗವಹಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ