ಶುಕ್ರವಾರ, ಏಪ್ರಿಲ್ 11, 2025
ಏ.15 ರಂದು ಬಸವ ಜಯಂತಿ ಕುರಿತು ಪೂರ್ವಭಾವಿ ಸಭೆ
ಬಳ್ಳಾರಿ,ಏ.11(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಏ.30 ರಂದು ಬಸವ ಜಯಂತಿ ಆಚರಣೆ ಕುರಿತು ಚರ್ಚಿಸಲು ಏ.15 ರಂದು ಸಂಜೆ 04.30 ಗಂಟೆಗೆ ಜಿಲ್ಲಾಧಿಕಾರಿಗಳ ಹಳೆಯ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ.
ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಅಧ್ಯಕ್ಷತೆ ವಹಿಸುವರು.
ಸಭೆಗೆ ಸಮುದಾಯದ ಮುಖಂಡರು, ಜಿಲ್ಲಾ ಮಟ್ಟದ ಅಧಿಕಾರಿಗಳು ತಪ್ಪದೇ ಹಾಜರಾಗಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ