ಸೋಮವಾರ, ಏಪ್ರಿಲ್ 14, 2025
ಏ.15 ರಂದು ನೂತನ “ನಮ್ಮ ಕ್ಲಿನಿಕ್” ಉದ್ಘಾಟನಾ ಕಾರ್ಯಕ್ರಮ
ಬಳ್ಳಾರಿ,ಏ.14(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಏ.15 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕರಿಮಾರೆಮ್ಮ ಕಾಲೋನಿ ಮತ್ತು ಶ್ರೀರಾಂಪುರ ಕಾಲೋನಿಗಳಲ್ಲಿ ನೂತನ “ನಮ್ಮ ಕ್ಲಿನಿಕ್” ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಘನಉಪಸ್ಥಿತಿ ಇರುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಉದ್ಘಾಟನೆ ಮತ್ತು ಅಧ್ಯಕ್ಷತೆ ವಹಿಸುವರು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಾಸಕರಾದ ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಕೆ.ವಿ.ತ್ರಿಲೋಕಚಂದ್ರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ, ರಾಷ್ಟಿçÃಯ ಆರೋಗ್ಯ ಅಭಿಯಾನ ನಿರ್ದೇಶಕ ನವೀನ್ ಭಟ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಶಿವಕುಮಾರ್ ಕೆ.ಬಿ., ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕರಾದ ಡಾ.ತ್ರಿವೇಣಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝಬೇರ್.ಎನ್ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ಟಿ.ಗಂಗಾಧರ ಗೌಡ, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ, ಜಿಲ್ಲಾ ಶಸ್ತçಚಿಕಿತ್ಸಕ ಡಾ.ಎನ್ ಬಸರೆಡ್ಡಿ, ಜಿಲ್ಲಾ ರೋಗವಾಹಕ ಅಶ್ರೀತ ರೋಗಗಳ ನಿಯಂತ್ರಣ ಅಧಿಕಾರಿಗಳು ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಆರ್.ಅಬ್ದುಲ್ಲಾ ಸೇರಿದಂತೆ ಸಾರ್ವಜನಿಕರು ಹಾಗೂ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ