ಮಂಗಳವಾರ, ಏಪ್ರಿಲ್ 15, 2025

ಏ.17 ರಂದು ವಿಶೇಷ ಆಯ್ಕೆ ಶಿಬಿರ

ಬಳ್ಳಾರಿ,ಏ.15(ಕರ್ನಾಟಕ ವಾರ್ತೆ): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26ನೇ ಸಾಲಿನ ಕ್ರೀಡಾ ವಸತಿ ಶಾಲೆ/ನಿಲಯಗಳಿಗೆ 8ನೇ ತರಗತಿ ಮತ್ತು ಪ್ರಥಮ ಪಿಯುಸಿ ಮಟ್ಟದ ಅರ್ಹ ಕ್ರೀಡಾಪಟುಗಳನ್ನು ಆಯ್ಕೆ ಮಾಡಿ ಪ್ರವೇಶಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಈಗಾಗಲೇ ಜಿಲ್ಲಾ ಹಾಗು ವಿಭಾಗ ಮಟ್ಟದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಗಿದ್ದು, ಆಯ್ಕೆ ಶಿಬಿರಗಳಲ್ಲಿ ವಿವಿಧ ಕಾರಣಗಳಿಂದ ಭಾಗವಹಿಸಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲು ಬಳ್ಳಾರಿ ಜಿಲ್ಲೆಯಲ್ಲಿ ಫುಟ್ಬಾಲ್ ಕ್ರೀಡೆಗೆ ಏ.17 ರಂದು ನಗರದ ಬಿಡಿಎಎ ಫುಟ್‌ಬಾಲ್ ಮೈದಾನದಲ್ಲಿ ವಿಶೇಷ ಆಯ್ಕೆ ಶಿಬಿರ ಆಯೋಜಿಸಲಾಗುವುದು. ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳ ದೈಹಿಕ ಪರೀಕ್ಷೆಯನ್ನು ನಡೆಸಲಾಗುವುದು. ಭಾಗವಹಿಸುವ ಕ್ರೀಡಾ ಪಟುಗಳು 7ನೇ ತರಗತಿ, 10 ತರಗತಿ ವ್ಯಾಸಂಗ ಮಾಡುತ್ತಿರುವ ಕ್ರೀಡಾಪಟುಗಳು ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬಹುದು. 8 ನೇ ತರಗತಿಗೆ ಪ್ರವೇಶ ಬಯಸುವ ಅಭ್ಯರ್ಥಿಗಳು ಪ್ರಸ್ತುತ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, 8 ನೇ ತರಗತಿ ಪ್ರವೇಶಕ್ಕೆ ಜೂನ್ 2025 ಕ್ಕೆ ಅನ್ವಯವಾಗುವಂತೆ 14 ವರ್ಷ ವಯಸ್ಸು ಹೊಂದಿರಬೇಕು. ಪ್ರಥಮ ಪಿಯುಸಿ ಪ್ರವೇಶ ಬಯಸುವ ಅಭ್ಯರ್ಥಿಗಳ ವಯಸ್ಸು ಜೂನ್ 2025 ಕ್ಕೆ ಅನ್ವಯವಾಗುವಂತೆ 18 ವರ್ಷ ವಯಸ್ಸು ಹೊಂದಿರಬೇಕು. ಈ ಪ್ರಕ್ರಿಯೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಪ್ರಯಾಣ ಭತ್ಯೆ ಮತ್ತು ದಿನಭತ್ಯೆ ಇಲಾಖೆಯಿಂದ ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಹಾಕಿ ತರಬೇತುದಾರರಾದ ಎಂ.ಜಾಕೀರ್ (ಮೊ.9036335986) ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ