ಗುರುವಾರ, ಏಪ್ರಿಲ್ 17, 2025

ಕುರುಗೋಡು: ಏ.19 ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ

ಬಳ್ಳಾರಿ,ಏ.17(ಕರ್ನಾಟಕ ವಾರ್ತೆ): ಕುರುಗೋಡು ಜೆಸ್ಕಾಂ ಉಪ-ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಸಮಸ್ಯೆಗಳನ್ನು ಇತ್ಯರ್ಥಗೊಳಿಸಲು ಏ.19 ರಂದು ಬೆಳಿಗ್ಗೆ 11 ಗಂಟೆಗೆ ಕುರುಗೋಡು ಜೆಸ್ಕಾಂ ಉಪ-ವಿಭಾಗದ ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆ ಆಯೋಜಿಸಲಾಗಿದ್ದು, ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ರಾಜೇಂದ್ರ ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ