ಶುಕ್ರವಾರ, ಏಪ್ರಿಲ್ 11, 2025
ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಪ್ರಾಶಂತ್ ಕುಮಾರ್ ಮಿಶ್ರಾ ಆದೇಶ
ಬಳ್ಳಾರಿ,ಏ.11(ಕರ್ನಾಟಕ ವಾರ್ತೆ):
ನಗರದ 11 ಪರೀಕ್ಷಾ ಕೇಂದ್ರಗಳಲ್ಲಿ ಏ.16 ಮತ್ತು 17 ರವರೆಗೆ ಸಾಮಾನ್ಯ ಪ್ರವೇಶ (ಸಿಇಟಿ-2025) ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣವನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ರ ಕಲಂ 163 ರಡಿ ಮೇರೆಗೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣದಲ್ಲಿನ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‌ನೆಟ್ ಸೆಂಟರ್‌ಗಳನ್ನು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಿ ಆದೇಶಿಸಿದ್ದಾರೆ.
ಆ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶವನ್ನು ನಿಷೇಧಿಸಿದೆ.
ಈ ಆದೇಶವು ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ