ಮಂಗಳವಾರ, ಏಪ್ರಿಲ್ 29, 2025

*ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ:2025* | *ವ್ಯವಸ್ಥಿತ ಸಮೀಕ್ಷಾ ಕಾರ್ಯ ಕೈಗೊಳ್ಳಿ: ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್*

ಬಳ್ಳಾರಿ,ಏ.29(ಕರ್ನಾಟಕ ವಾರ್ತೆ): ನ್ಯಾ.ಹೆಚ್.ಎನ್.ನಾಗಮೋಹನ ದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗದ ನಿರ್ದೇಶನದಂತೆ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ ಕಾರ್ಯವು ಮೇ 05 ರಿಂದ 23 ರ ವರೆಗೆ 03 ಹಂತಗಳಲ್ಲಿ ನಡೆಯಲಿದ್ದು, ಸಮೀಕ್ಷೆ ಕಾರ್ಯವನ್ನು ವ್ಯವಸ್ಥಿತವಾಗಿ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ನಿರ್ದೇಶನ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ರಾಜ್ಯ ಮಟ್ಟದಲ್ಲಿ ತರಬೇತಿ ಪಡೆದ ಜಿಲ್ಲಾ ಮಟ್ಟದ ಮಾಸ್ಟರ್ ಟ್ರೆöÊನರ್‌ಗಳಿಂದ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾಸ್ಟರ್ ಟ್ರೆöÊನರ್‌ಗಳಿಗೆ ಮತ್ತು ತಾಂತ್ರಿಕ ಅಧಿಕಾರಿಗಳಿಗೆ ಸೋಮವಾರ ನಗರದ ಜಿಪಂ ಸಭಾಂಗಣದಲ್ಲಿ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಪರಿಶಿಷ್ಟ ಜಾತಿ ಜನಾಂಗದ ಕುಟುಂಬಗಳ ಸಮಗ್ರ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ಕೈಗೊಳ್ಳಲು ಸರ್ಕಾರ ನಿರ್ದೇಶಿಸಿದ್ದು, ವ್ಯವಸ್ಥಿತವಾಗಿ ಯಾವುದೇ ಕುಟುಂಬ ಈ ಸಮೀಕ್ಷೆಯಿಂದ ವಂಚಿತರಾಗದAತೆ ಕೈಗೊಳ್ಳಬೇಕು. ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆಯನ್ನು ಯಾವುದೇ ಲೋಪವಿಲ್ಲದೆ ವ್ಯವಸ್ಥಿತವಾಗಿ ಕೈಗೊಳ್ಳಲು ಸಂಬAಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು. ಮೇ 09 ರಿಂದ 17 ರವರೆಗೆ ಸಮೀಕ್ಷೆ ದಾರರು ಮನೆ ಮನೆಗೆ ಭೇಟಿ ನೀಡಿ ಸಮೀಕ್ಷಾ ಭೇಟಿಯ ಉದ್ದೇಶ ಮನವರಿಕೆ ಮಾಡಿ ಮೊಬೈಲ್ ಆಪ್ ನಲ್ಲಿಯೇ ಮಾಹಿತಿಯನ್ನು ಬ್ಲಾಕ್ ಆಧಾರದಲ್ಲಿ ತಲಾ 300 ಮನೆಗಳ ಕುಟುಂಬಗಳ ಮಾಹಿತಿ ಸಂಗ್ರಹಿಸಬೇಕು. ನಂತರ ಮೇ 19 ರಿಂದ 21 ರವರೆಗೆ ಸಮೀಕ್ಷೆಯಲ್ಲಿ ಕೈಬಿಟ್ಟು ಹೋದ ಕುಟುಂಬಗಳನ್ನು ಗುರುತಿಸಿ ಮಾಹಿತಿ ಸಂಗ್ರಹಿಸಬೇಕು. ಇದರಲ್ಲಿಯೂ ಬಿಟ್ಟು ಹೋದ ಕುಟುಂಬಗಳಿದ್ದಲ್ಲಿ ಆನ್ ಲೈನ್ ಮೂಲಕ ಸಂಬAಧಪಟ್ಟ ಜನಾಂಗದವರು ತಾವಾಗಿಯೇ ಸಮೀಕ್ಷೆಯಡಿ ಮಾಹಿತಿ ನೀಡಲು ಅವಕಾಶ ಕಲ್ಪಿಸಲಾಗಿದೆ. ಕಾರಣ ಸಮೀಕ್ಷೆದಾರರು ಮತ್ತು ಸಂಬAಧಿಸಿದ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವಂತೆ ಅವರು ಸೂಚಿಸಿದರು. ಸಮೀಕ್ಷೆಯ ಮೇಲ್ವಿಚಾರಣೆಗಾಗಿ ರಾಜ್ಯ ಮಟ್ಟದಲ್ಲಿ ಸಮಿತಿ ಇದ್ದು, ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಇದೆ. ರಾಜ್ಯದಲ್ಲಿ ಗುರುತಿಸಿದ 101 ಪರಿಶಿಷ್ಟ ಜಾತಿಗಳ ಜಣಗಣತಿ ನಡೆಯುತ್ತಿದ್ದು, ಇದರ ಅಂಗವಾಗಿ ಜಿಲ್ಲೆಯಲ್ಲಿ ವ್ಯವಸ್ಥಿತವಾಗಿ ಯಾವುದೇ ಲೋಪವಿವಿಲ್ಲದೆ ಪರಿಶಿಷ್ಟ ಜಾತಿ ಜನಾಂಗದ ಸಮೀಕ್ಷೆ ಕಾರ್ಯ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ.ಬಿ ರಾಜ್ಯಮಟ್ಟದಲ್ಲಿ ತರಬೇತಿ ಪಡೆದ ಜಿಲ್ಲಾ ಮಟ್ಟದ ಮಾಸ್ಟರ್ ಟ್ರೆöÊನರ್‌ಗಳಾದ ಸಯ್ಯದ್ ಭಾಷಾ, ಮಲ್ಲಿಕಾರ್ಜುನ, ಕೆ.ಎಸ್.ಶಬರೀಶ್ ಗುಪ್ತ, ಸೇರಿದಂತೆ ತಾಲ್ಲೂಕು ಮಟ್ಟದ ಮಾಸ್ಟರ್ ಟ್ರೆöÊನರ್‌ಗಳು, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಮತ್ತೀತರರು ಉಪಸ್ಥಿತರಿದ್ದರು. ----------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ