ಸೋಮವಾರ, ಏಪ್ರಿಲ್ 21, 2025

ಏ.23 ರಂದು ವಿವಿಧ ಮಹನೀಯರ ಜಯಂತಿಯ ಪೂರ್ವಭಾವಿ ಸಭೆ

ಬಳ್ಳಾರಿ,ಏ.21(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಮೇ 02 ರಂದು ಶಂಕರಾಚಾರ್ಯ ಜಯಂತಿ, ಮೇ 04 ರಂದು ಭಗೀರಥ ಜಯಂತಿ ಮತ್ತು ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ ಕುರಿತು ಚರ್ಚಿಸಲು ಏ.23 ರಂದು ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ. ಏ.23 ರಂದು ಬೆಳಿಗ್ಗೆ 11.30 ಗಂಟೆಗೆ ಶಂಕರಾಚಾರ್ಯ ಜಯಂತಿ, ಮಧ್ಯಾಹ್ನ 12 ಗಂಟೆಗೆ ಭಗೀರಥ ಜಯಂತಿ, ಮಧ್ಯಾಹ್ನ 12.30 ಗಂಟೆಗೆ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ ನಡೆಯಲಿದೆ. ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಅಧ್ಯಕ್ಷತೆ ವಹಿಸುವರು. ಸಭೆಗೆ ಸಮುದಾಯದ ಮುಖಂಡರು, ಜಿಲ್ಲಾ ಮಟ್ಟದ ಅಧಿಕಾರಿಗಳು ತಪ್ಪದೇ ಹಾಜರಾಗಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ