ಗುರುವಾರ, ಏಪ್ರಿಲ್ 17, 2025
ಅಲ್ಪಸಂಖ್ಯಾತರ ಮಾದರಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಏ.17(ಕರ್ನಾಟಮೌಲಾನಾ ಆಜಾದ್ಕ ವಾರ್ತೆ):
ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆ(ಆಂಗ್ಲ ಮಾಧ್ಯಮ)ಗಳಲ್ಲಿ 2025-26ನೇ ಶೈಕ್ಷಣಿಕ ವರ್ಷಕ್ಕೆ 6ನೇ ತರಗತಿಗೆ ಉಚಿತ ಪ್ರವೇಶಕ್ಕಾಗಿ ಆನ್‌ಲೈನ್ (ಸೇವಾಸಿಂಧು) ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತಿಯುಳ್ಳ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಲಿಂಕ್ https://sevasindhuservices.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಉಚಿತವಾಗಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಮೇ 10 ಕೊನೆಯ ದಿನವಾಗಿದೆ.
*ಶಾಲೆಗಳ ವಿವರ:*
ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆ ಬಳ್ಳಾರಿ-ಮೊ.8861623814, ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆ ಸಂಡೂರು-ಮೊ.9480933730 ಮತ್ತು ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆ ಕಂಪ್ಲಿ-ಮೊ.7353346069.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ದೂ.08392-200125/224, ಮೊ.8861623814 ಹಾಗೂ ಜಿಲ್ಲೆಯ ಎಲ್ಲಾ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರ, ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆ, ವಸತಿ ಶಾಲೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ