ಮಂಗಳವಾರ, ಏಪ್ರಿಲ್ 22, 2025
ಸಂಡೂರು: 6ನೇ ತರಗತಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅರ್ಜಿ ಆಹ್ವಾನ
ಬಳ್ಳಾರಿ,ಏ.22(ಕರ್ನಾಟಕ ವಾರ್ತೆ):
ಸಂಡೂರು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ 5ನೇ ತರಗತಿಯಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದಿರುವ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ 6ನೇ ತರಗತಿಗೆ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಅರ್ಹತಾ ಪರೀಕ್ಷೆಯ ಮೂಲಕ ಆಯ್ಕೆ ಮಾಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸಂಡೂರು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಉಚಿತವಾಗಿ ಪಡೆದುಕೊಂಡು ಭರ್ತಿ ಮಾಡಿದ ಅರ್ಜಿಗಳನ್ನು ಮೇ 03 ರೊಳಗೆ ಇದೇ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಂಡೂರು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ದೂ.08395-200073 ಗೆ ಸಂಪರ್ಕಿಸಬಹುದು ಎಂದು ಸಂಡೂರು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ