ಮಂಗಳವಾರ, ಏಪ್ರಿಲ್ 1, 2025
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಬಳ್ಳಾರಿ,ಏ.01(ಕರ್ನಾಟಕ ವಾರ್ತೆ):
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2024-25ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಮೇ 31 ರ ವರೆಗೆ ವಿಸ್ತರಿಸಲಾಗಿದೆ.
ಅರ್ಜಿ ಸಲ್ಲಿಸಲು ವೆಬ್‌ಸೈಟ್ https://ssp.postmatric.karnataka.gov.in ಗೆ ಭೇಟಿ ನೀಡಬಹುದು.
ಹೆಚ್ಚಿನ ಮಾಹಿತಿಗಾಗಿ ದೂ.08392-275751 ಹಾಗೂ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾAಶದ ದೂ.1902 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಭಾನುಮತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ