ಸೋಮವಾರ, ಏಪ್ರಿಲ್ 7, 2025

ವ್ಯಕ್ತಿ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಏ.07(ಕರ್ನಾಟಕ ವಾರ್ತೆ): ನಗರದ ದೇವಿನಗರ ಬಡಾವಣೆಯ 5ನೇ ಕ್ರಾಸ್ ನ ಕುರುಬರ ಹಾಸ್ಟೆಲ್ ಹಿಂಭಾಗ ನಿವಾಸಿಯಾದ ಸೋಮಶೇಖರ ಎನ್ನುವ 25 ವರ್ಷದ ವ್ಯಕ್ತಿಯು ಮಾ.30 ರಂದು ಕಾಣೆಯಾಗಿದ್ದು, ಈ ಕುರಿತು ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ತಿಳಿಸಿದ್ದಾರೆ. ಚಹರೆ ಗುರುತು: ಅಂದಾಜು 5.5 ಅಡಿ ಎತ್ತರ, ಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಎಡಗೈ ಮೇಲೆ ತ್ರಿಶೂಲದ ಹಚ್ಚೆ ಮತ್ತು ಎಡ ತೋಳಿನ ಮೇಲೆ ಆಂಜನೇಯ ಹಚ್ಚೆ ಹಾಕಿಸಿಕೊಂಡಿರುತ್ತಾನೆ. ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಕೌಲ್ ಬಜಾರ್ ಪೊಲೀಸ್ ಠಾಣೆಯ ದೂ.08392-240731, 244145, ಕೌಲ್ ಬಜಾರ್ ಪಿಎಸ್‌ಐ ದೂ.94808203085, ಪಿಐ ದೂ. 9480803047, ಅಥವಾ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ