ಬುಧವಾರ, ಏಪ್ರಿಲ್ 2, 2025

ತಾಯಿ, ಮಗು ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಏ.02(ಕರ್ನಾಟಕ ವಾರ್ತೆ): ನಗರದ ತಾಳೂರು ರಸ್ತೆಯ ರೇಣುಕಾ ನಗರದ 9ನೇ ಕ್ರಾಸ್ ನಿವಾಸಿ ಲಲಿತಾ ಎನ್ನುವ 25 ವರ್ಷದ ಮಹಿಳೆ ಮತ್ತು ಮಗಳು ಭವಾನಿ ಎನ್ನುವ 03 ವರ್ಷದ ಮಗು ಮಾ.06 ರಂದು ಕಾಣೆಯಾಗಿರುವ ಕುರಿತು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ತನಿಖಾಧಿಕಾರಿ ಮನವಿ ಮಾಡಿದ್ದಾರೆ. *ಮಹಿಳೆ ಮತ್ತು ಮಗುವಿನ ಚಹರೆ:* ಲಲಿತಾ: ಎತ್ತರ 5.2 ಅಡಿ, ದುಂಡು ಮುಖ, ಗೋಧಿ ಮೈಬಣ್ಣ, ಸಾಧರಣ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಹಳದಿ ಬಣ್ಣದ ಸೀರೆ ಧರಿಸಿರುತ್ತಾಳೆ. ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾಳೆ. ಭವಾನಿ: ಸುಮಾರು 2.5 ಅಡಿ ಎತ್ತರ, ಉದ್ದ ಮುಖ, ಗೋಧಿ ಮೈಬಣ್ಣ, ದಪ್ಪ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ಗೌನ್ ಧರಿಸಿರುತ್ತಾಳೆ. ಕನ್ನಡ ಮಾತನಾಡುತ್ತಾಳೆ. ಮೇಲ್ಕಂಡ ಚಹರೆ ಗುರುತುಗಳುಳ್ಳ ಮಹಿಳೆ ಮತ್ತು ಮಗುವಿನ ಬಗ್ಗೆ ಮಾಹಿತಿ ದೊರೆತಲ್ಲಿ ಮಹಿಳಾ ಪೊಲೀಸ್ ಠಾಣೆಯ ದೂ.08392-268108 ಅಥವಾ ಬಳ್ಳಾರಿ ಎಸ್‌ಪಿ ಅವರ ಕಚೇರಿ ದೂ.08392-258400, ಬಳ್ಳಾರಿ ಡಿಎಸ್‌ಪಿ ಅವರ ಕಚೇರಿ ದೂ.08392-272322, ಮೊ.9480803020, ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ