ಮಂಗಳವಾರ, ಏಪ್ರಿಲ್ 1, 2025
ಯುವತಿ ಕಾಣೆ: ಪತ್ತೆಗೆ ಮನವಿ
ಬಳ್ಳಾರಿ,ಏ.01(ಕರ್ನಾಟಕ ವಾರ್ತೆ):
ಸಂಡೂರು ತಾಲ್ಲೂಕಿನ ವಿಠಲಾಪುರ ಗ್ರಾಮದ 2 ನೇ ವಾರ್ಡ್ ನ ಅಂಬೇಡ್ಕರ್ ಕಾಲೋನಿಯ ಹುಲಿಗೆಮ್ಮ ದೇವಸ್ಥಾನದ ಹತ್ತಿರ ನಿವಾಸಿಯಾದ ರೇಣುಕ ಎನ್ನುವ 20 ವರ್ಷದ ಯುವತಿ ಮಾ.19 ರಂದು ಕಾಣೆಯಾಗಿದ್ದು, ಈ ಕುರಿತು ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.
ಚಹರೆ ಗುರುತು: ಅಂದಾಜು 5.1 ಅಡಿ ಎತ್ತರ, ಕೋಲು ಮುಖ, ಗೋದಿ ಮೈಬಣ್ಣ, ತೆಳುವಾದ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಹಳದಿ ಬಣ್ಣದ ಚೂಡಿದಾರ್ ಧರಿಸಿರುತ್ತಾಳೆ. ಕನ್ನಡ ಭಾಷೆ ಮಾತನಾಡುತ್ತಾಳೆ.
ಯುವತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ತೋರಣಗಲ್ಲು ಪೊಲೀಸ್ ಠಾಣೆ ದೂ.08392-258100 ಮತ್ತು ಪಿಎಸ್‌ಐ ಮೊ.9480803062 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ