ಶುಕ್ರವಾರ, ಏಪ್ರಿಲ್ 25, 2025

ಮೋಕ ಸರ್ಕಾರಿ ಪ್ರಥಮ ಕಾಲೇಜಿನಲ್ಲಿ ಪದವಿ ಕೋರ್ಸ್ಗಳ ಪ್ರವೇಶಾತಿಗೆ ಪ್ರಕ್ರಿಯೆ ಆರಂಭ

ಬಳ್ಳಾರಿ,ಏ.25(ಕರ್ನಾಟಕ ವಾರ್ತೆ): ತಾಲ್ಲೂಕಿನ ಮೋಕ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2025-26ನೇ ಸಾಲಿಗೆ ಬಿ.ಎ, ಬಿ.ಕಾಂ ಮತ್ತು ಬಿ.ಎಸ್.ಸಿ ಪದವಿ ಸ್ನಾತಕ ಕೋರ್ಸ್ಗಳ ಪ್ರವೇಶಾತಿ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ.ಇಸ್ಮಾಯಿಲ್ ಎಂ ಮಕಾಂದರ್ ಅವರು ತಿಳಿಸಿದ್ದಾರೆ. ಮೋಕ ಗ್ರಾಮದಲ್ಲಿ ಗ್ರಾಮೀಣ ಬಡವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ನೀಡುವ ಸದುದ್ದೇಶದಿಂದ ಸರ್ಕಾರವು 2007ರಲ್ಲಿ ಈ ಕಾಲೇಜನ್ನು ಪ್ರಾರಂಭಿಸಿದ್ದು, ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಅಭಿವೃದ್ಧಿಗಾಗಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿವರ್ಗದವರು ಶ್ರಮಿಸುತ್ತಿದ್ದಾರೆ. ಪ್ರಸ್ತುತ ಕಾಲೇಜು ಗಣಕಯಂತ್ರಗಳ ಪ್ರಯೋಗಾಲಯ, ವಿವಿಧ ಸ್ಪರ್ಧಾತ್ಮಕ ತರಬೇತಿಗಾಗಿ ವಿಶೇಷ ಪುಸ್ತಕಗಳು, ಕೈಪಿಡಿಗಳು, ಮ್ಯಾಗಝೀನ್‌ಗಳು, ಸುಸಜ್ಜಿತ ಗ್ರಂಥಾಲಯ, ಡಿಜಿಟಲ್ ಲೈಬ್ರರಿ, ಇಂಗ್ಲಿಷ್ ತರಬೇತಿಯ ಪ್ರಯೋಗಾಲಯ, ಉತ್ತಮ ಕ್ರೀಡಾ ಸಲಕರಣೆಗಳು, ಸ್ಮಾರ್ಟ್ ಕ್ಲಾಸ್ ರೂಮ್‌ಗಳು, ಸರ್ಕಾರದ ಸ್ಕಾಲರ್‌ಶಿಪ್, ವೈಫೈ, ಸಿ.ಸಿ. ಕ್ಯಾಮರಾ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ವಾಹನಗಳ ನಿಲುಗಡೆಗೆ ಪಾರ್ಕಿಂಗ್ ವ್ಯವಸ್ಥೆ ಇದೆ. ಸರ್ಕಾರ ನಿಗದಿಪಡಿಸಿದ ಶುಲ್ಕ ಮಾತ್ರ ಪಾವತಿಸಿಕೊಳ್ಳಲಾಗುವುದು. ಈಗಾಗಲೇ ಕಾಲೇಜಿನಲ್ಲಿ ಪದವಿ ಕೋರ್ಸ್ಗಳ ಪ್ರವೇಶಾತಿ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಕಾಲೇಜಿನ ಕಚೇರಿಯಲ್ಲಿ ಅರ್ಜಿ ಪಡೆದು ಪ್ರವೇಶ ಪಡೆಯಬಹುದಾಗಿದೆ. ಮೋಕಾ ಹೋಬಳಿಯ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಈ ಅವಕಾಶ ಸದುಪಯೋಗ ಪಡಿಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕೆಂದು ಪ್ರಾಂಶುಪಾಲರು ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು- ಡಾ.ಇಸ್ಮಾಯಿಲ್ ಎಂ ಮಕಾಂದರ್ ಮೊ.ಸಂ:7975795080, ಎಂ.ಬಸವರಾಜ ಅರ್ಥಶಾಸ್ತç ಸಹಾಯಕ ಪ್ರಾಧ್ಯಾಪಕರು 990633024 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ