ಸೋಮವಾರ, ಏಪ್ರಿಲ್ 28, 2025

ವ್ಯಕ್ತಿ ಕಾಣೆ ಪತ್ತೆಗೆ ಮನವಿ

ಬಳ್ಳಾರಿ,ಏ.28(ಕರ್ನಾಟಕ ವಾರ್ತೆ) ನಗರದ ಅಂದ್ರಾಳ್‌ನ ಡಿ.ಸಿ ಕಾಲೋನಿ ನಿವಾಸಿಯಾದ ಖಾಜಾ ಹುಸೇನ್ ಎನ್ನುವ 26 ವರ್ಷದ ವ್ಯಕ್ತಿಯು ಮಾ.31 ರಂದು ಕಾಣೆಯಾಗಿದ್ದು, ಈ ಕುರಿತು ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ತಿಳಿಸಿದ್ದಾರೆ. ಚಹರೆ ಗುರುತು: ಅಂದಾಜು 5.2 ಅಡಿ ಎತ್ತರ, ದುಂಡು ಮುಖ, ಬಿಳಿ ಮೈಬಣ್ಣ, ತೆಳುವಾದ ಮೈಕಟ್ಟು ಹೊಂದಿದ್ದು, ಎಡಗಾಲಿಗೆ ಪೊಲೀಯೊ ಆಗಿರುತ್ತದೆ. ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ತುಂಬು ತೋಳಿನ ಶರ್ಟ್ ಹಾಗೂ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು ಮತ್ತು ಹಿಂದಿ ಭಾಷೆ ಮಾತನಾಡುತ್ತಾನೆ. ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯ ದೂ.08392-250033, ಮೊ.9480803096 ಅಥವಾ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ