ಶುಕ್ರವಾರ, ಏಪ್ರಿಲ್ 25, 2025
ಕುರೇಕುಪ್ಪ ಪುರಸಭೆ: ಅರ್ಜಿ ಆಹ್ವಾನ
ಬಳ್ಳಾರಿ,ಏ.25(ಕರ್ನಾಟಕ ವಾರ್ತೆ):
ಕುರೇಕುಪ್ಪ ಪುರಸಭೆ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ ಮಿಷನ್ (ನ)-2.0 ಯೋಜನೆಯ ಐ.ಇ.ಸಿ ಘಟಕದಡಿ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಕುರಿತು ನಗರ ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ವಿವಿಧ ಬಗೆಯ ಐ.ಇ.ಸಿ ಚಟುವಟಿಕೆಗಳನ್ನು ಕೈಗೊಳ್ಳಲು ಅರ್ಹ ಸ್ವ-ಸಹಾಯ ಗುಂಪುಗಳ ಸದಸ್ಯರುಗಳ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
*ಅರ್ಹತೆ:*
10ನೇ ತರಗತಿ/ತತ್ಸಮಾನ ಶಿಕ್ಷಣ ಹೊಂದಿರತಕ್ಕದ್ದು. ಅಭ್ಯರ್ಥಿಯು ಕನ್ನಡ ಮಾತನಾಡಲು ಹಾಗೂ ಬರೆಯಲು ತಿಳಿದಿರಬೇಕು. ಅರ್ಜಿ ಸಲ್ಲಿಸುವವರು ಸ್ವ-ಸಹಾಯ ಗುಂಪಿನಲ್ಲಿ ಕಾರ್ಯನಿರ್ವಹಿಸಿರುವ ಬಗ್ಗೆ ನಲ್ಮ್/ಭಾರತ/ಕರ್ನಾಟಕ ಸರ್ಕಾರದಿಂದ ಸೂಕ್ತ ದಾಖಲೆ ಹೊಂದಿರಬೇಕು.
ಅರ್ಜಿದಾರರು ಕಂಪ್ಯೂಟರ್ ಸಾಕ್ಷರತೆಯ ಎಮ್.ಎಸ್.ಆಫೀಸ್, ಎಮ್.ಎಸ್. ಎಕ್ಸ್ಎಲ್ ನಿರ್ವಹಿಸುವ ಬಗ್ಗೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಪರಿಣಿತರಾಗಿರಬೇಕು. ಮಾಹಿತಿ ಶಿಕ್ಷಣ ಮತ್ತು ಸಂವಹನದಡಿ ಗ್ರಾಮ ಪಂಚಾಯಿತಿ ಅಥವಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿರುವ ಅನುಭವವುಳ್ಳ ಅಭ್ಯರ್ಥಿಗಳಿಗೆ ಆದ್ಯತೆಯ ಮೇರೆಗೆ ಆಯ್ಕೆ ಮಾಡಲಾಗುವುದು.
ಈ ಮೇಲಿನ ಎಲ್ಲಾ ದಾಖಲೆ ಮತ್ತು ಅನುಭವವುಳ್ಳ ಅಭ್ಯರ್ಥಿಗಳಿದ್ದಲ್ಲಿ ಕುರೇಕುಪ್ಪ ಪುರಸಭೆ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಗಳನ್ನು ಮೇ 03 ರ ಬೆಳಿಗ್ಗೆ 08 ಗಂಟೆಯಿAದ ಮಧ್ಯಾಹ್ನ 01.30 ರವರೆಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂ.08395-295601 ಗೆ ಸಂಪರ್ಕಿಸಬಹುದು ಎಂದು ಕುರೇಕುಪ್ಪ ಪುರಸಭೆಯ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ