ಮಂಗಳವಾರ, ಏಪ್ರಿಲ್ 29, 2025

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ: ಪ್ರವೇಶ ಪರೀಕ್ಷೆ ಸುಸೂತ್ರ

ಬಳ್ಳಾರಿ,ಏ.28(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ (ಆಂಗ್ಲ ಮಾಧ್ಯಮ) ಶಾಲೆ ಮತ್ತು ಡಾ.ಎ.ಪಿ.ಜಿ ಅಬ್ದುಲ್ ಕಲಾಂ ವಸತಿ (ಸಿಬಿಎಸ್‌ಸಿ) ಶಾಲೆಗಳ ದಾಖಲಾತಿಗಾಗಿ 2025-26 ನೇ ಶೈಕ್ಷಣಿಕ ವರ್ಷಕ್ಕೆ 6ನೇ ತರಗತಿ ಪ್ರವೇಶ ಪರೀಕ್ಷೆಯು ಭಾನುವಾರ ಸುಸೂತ್ರವಾಗಿ ನಡೆದಿದೆ. ಜಿಲ್ಲೆಯಾದ್ಯಂತ ಒಟ್ಟು 1571 ಅರ್ಜಿಗಳು ಸಲ್ಲಿಕೆಯಾಗಿದ್ದವು. 05 ಕೇಂದ್ರಗಳಲ್ಲಿ ಪ್ರವೇಶ ಪರೀಕ್ಷೆ ನಡೆದಿದ್ದು, 595 ಗಂಡು ಮತ್ತು 473 ಹೆಣ್ಣು ಸೇರಿ ಒಟ್ಟು 1038 ವಿದ್ಯಾರ್ಥಿಗಳು ಹಾಜರಾಗಿದ್ದರು. ಅದರಲ್ಲಿ 503 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ