ಶುಕ್ರವಾರ, ಏಪ್ರಿಲ್ 25, 2025

ಸಾರ್ವಜನಿಕರು ಯಾವುದೇ ಜ್ವರವಿರಲಿ, ರಕ್ತಲೇಪನ ಪರೀಕ್ಷೆ ಮಾಡಿಸಿ: ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬು

ಬಳ್ಳಾರಿ,ಏ.25(ಕರ್ನಾಟಕ ವಾರ್ತೆ): ಸಾರ್ವಜನಿಕರು ಯಾವುದೇ ಜ್ವರವಿರಲಿ, ಮೊದಲು ರಕ್ತಲೇಪನ ಪರೀಕ್ಷೆ ಮಾಡಿಸಬೇಕು. ಶೂನ್ಯ ಮಲೇರಿಯಾ ಗುರಿ ತಲುಪಲು ಮತ್ತು ರೋಗ ತಡೆಗಟ್ಟಲು ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾ ಕಚೇರಿ ವತಿಯಿಂದ ವಿಶ್ವ ಮಲೇರಿಯಾ ದಿನಾಚರಣೆ-2025 ಅಂಗವಾಗಿ “ಮಲೇರಿಯಾ ನಮ್ಮೊಂದಿಗೆ ಕೊನೆಗೊಳ್ಳುತ್ತದೆ. ಮರು ಹೂಡಿಕೆ ಮಾಡಿ, ಮರು ಕಲ್ಪನೆ ಮಾಡಿ, ಮರು ಉತ್ತೇಜನ ನೀಡೋಣ” ಎಂಬ ಘೋಷವಾಕ್ಯದೊಂದಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಮಲೇರಿಯಾ ರೋಗಕ್ಕೆ ಉಚಿತವಾಗಿ ರಕ್ತ ಪರೀಕ್ಷೆ ಹಾಗೂ ಸೂಕ್ತ ಚಿಕಿತ್ಸೆ ನೀಡಲಾಗುತ್ತದೆ. ಇದರ ಸದುಯೋಗಪಡೆದುಕೊಳ್ಳಬೇಕು ಎಂದು ತಿಳಿಸಿದರು. ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಆರ್.ಅಬ್ದುಲ್ಲಾ ಅವರು ಮಾತನಾಡಿ, ಮಲೇರಿಯಾ ಜ್ವರವು ಪ್ಲಾಸ್ಮೋಡಿಯಂ ಎಂಬ ಪರಾವಲಂಭಿ ಸೂಕ್ಷ್ಮಾಣುವಿನಿಂದ ಉಂಟಾಗಬಹುದಾಗಿದ್ದು, ಹೆಣ್ಣು ಅನಾಫಿಲೀಸ್ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಚಳಿ, ನಡುಕ, ಬಿಟ್ಟು ಬಿಟ್ಟು ಜ್ವರ ಬರುವುದು, ವಾಕರಿಕೆ, ಮೈ ಬೆವರುವುದು ಲಕ್ಷಣಗಳು ಕಂಡು ಬಂದಲ್ಲಿ ಮಲೇರಿಯಾ ಜ್ವರ ಇರಬಹುದು ಎಂದು ಭಾವಿಸಿ ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆಗೆ ಒಳಪಟ್ಟು ಸೂಕ್ತ ಉಚಿತ ಚಿಕಿತ್ಸೆ ಪಡೆಯಬೇಕು ಎಂದು ಹೇಳಿದರು. ಮಲೇರಿಯಾ ಪ್ರಕರಣಗಳು ಕಂಡು ಬಂದ ಸಂದರ್ಭದಲ್ಲಿ ಮನೆಯ ಸುತ್ತಮುತ್ತಲು ಆರೋಗ್ಯ ಇಲಾಖೆಯಿಂದ ಕೈಗೊಳ್ಳುವ ಕೀಟನಾಶಕ ಸಿಂಪರಣೆಗೆ ಸಾರ್ವಜನಿಕರು ಅವಕಾಶ ಸಹಕರಿಸಬೇಕು. ಸ್ವಯಂ ರಕ್ಷಣಾ ಕ್ರಮಗಳಾದ ಮಲಗುವಾಗ ಸೊಳ್ಳೆ ಪರದೆ ಬಳಕೆ ಮಾಡಬೇಕು. ಕಿಟಕಿಗಳಿಗೆ ಸೊಳ್ಳೆಗಳು ನುಸುಳದಂತೆ ಜಾಲರಿ ಅಳವಡಿಸುವುದು. ಆರೋಗ್ಯ ಇಲಾಖೆಯಿಂದ ನೀಡಲ್ಪಡುವ ಲಾರ್ವಹಾರಿ ಗಪ್ಪಿ ಮತ್ತು ಗಂಬೂಷಿಯಾ ಮೀನುಗಳನ್ನು ಶಾಶ್ವತವಾಗಿ ನೀರು ನಿಲ್ಲುವ ಸ್ಥಳಗಳಲ್ಲಿ ಬಿಡಲು ಉಚಿತವಾಗಿ ಪಡೆಯಬಹುದಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ವೀರೇಂದ್ರಕುಮಾರ್, ಜಿಲ್ಲಾ ವಿಬಿಡಿಸಿ ಸಮಾಲೋಚಕರಾದ ಪ್ರತಾಪ್.ಹೆಚ್., ಜಿಲ್ಲಾ ಆರೋಗ್ಯ ಶಿಕ್ಷ್ಷಣಾಧಿಕಾರಿ ಈಶ್ವರ ದಾಸಪ್ಪನವರ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಶಕುಂತಲಾ ಮ್ಯಾಳಿ, ನಾಗರಾಜ, ರವೀಂದ್ರ ಜಿನಗ, ಆರೋಗ್ಯ ನಿರೀಕ್ಷಣಾಧಿಕಾರಿ ಮರಿಬಸವನಗೌಡ, ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿಗಳಾದ ಅಂಭುಜ, ನಂದಿನಿ, ಶಕುಂತಲಾ, ವಿಬಿಡಿಸಿ ಸಿಬ್ಬಂದಿ ವರ್ಗದವರು, ತಾಲೂಕು ಆರೋಗ್ಯಾಧಿಕಾರಿಗಳ ಸಿಬ್ಬಂದಿಗಳು ಹಾಗೂ ಮಲೇರಿಯಾ ಲಿಂಕ್ ವಾಲಂಟೀರ‍್ಸ್ ಮತ್ತು ಇತರೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಸಿಬ್ಬಂದಿಗಳು ಹಾಜರಿದ್ದರು. ಜಾಗೃತಿ ಜಾಥವು ಬಳ್ಳಾರಿ ನಗರದ ಪ್ರಮುಖ ಬೀದಿಗಳಲ್ಲಿ ಹಾಗೂ ವಾರ್ಡ್ಗಳಲ್ಲಿ ಸಂಚರಿಸಿ ಸಾರ್ವಜನಿಕರಿಗೆ ಮಲೇರಿಯಾ ರೋಗದ ಕುರಿತು ಮಾಹಿತಿ ನೀಡಲಾಯಿತು. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ