ಸೋಮವಾರ, ಏಪ್ರಿಲ್ 28, 2025

ವ್ಯಕ್ತಿ ಕಾಣೆ ಪತ್ತೆಗೆ ಮನವಿ

ಬಳ್ಳಾರಿ,ಏ.28(ಕರ್ನಾಟಕ ವಾರ್ತೆ): ಕುರುಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾಜಶೇಖರ್.ಇ ಎನ್ನುವ 44 ವಷÀðದ ವ್ಯಕ್ತಿಯು ಏ.25 ರಂದು ಕಾಣೆಯಾಗಿದ್ದು, ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ತಿಳಿಸಿದ್ದಾರೆ. ಚಹರೆ ಗುರುತು: ಅಂದಾಜು 5.8 ಅಡಿ ಎತ್ತರ, ದುಂಡು ಮುಖ, ಗೋದಿ ಮೈಬಣ್ಣ, ದುಂಡನೆಯ ಮೈಕಟ್ಟು ಮತ್ತು ಕಪ್ಪು ಕೂದಲು ಹೊಂದಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ನಸಿ ಬಣ್ಣದ ಅಂಗಿ ಹಾಗೂ ಕಪ್ಪು ಬಣ್ಣದ ಹಾಫ್ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ ಭಾಷೆ ಮಾತನಾಡುತ್ತಾನೆ. ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಕುರುಗೋಡು ಪೊಲೀಸ್ ಠಾಣೆಯ ದೂ.08393-263433 ಅಥವಾ ಪಿ.ಎಸ್.ಐ ಮೊ.9480803051, ಸಿ.ಪಿ.ಐ ಮೊ.9480803039, ಬಳ್ಳಾರಿ ಎಸ್.ಪಿ ರವರ ಕಚೇರಿ ದೂ.08392-258400,258300 ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ