ಬುಧವಾರ, ಏಪ್ರಿಲ್ 23, 2025
ಅನಾಮಧೇಯ ಮೃತ ಮಹಿಳೆ ವಾರಸುದಾರರ ಪತ್ತೆಗೆ ಮನವಿ
ಬಳ್ಳಾರಿ,ಏ.23(ಕರ್ನಾಟಕ ವಾರ್ತೆ):
ಕುರುಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ಪಟ್ಟಣಸೆರಗು ಗ್ರಾಮದ ಎಲ್.ಎಲ್.ಸಿ. ಕಾಲುವೆಯಲ್ಲಿ 2024 ರ ಏ.17 ರಂದು ಅಂದಾಜು 50 ವಷÀðದ ಅನಾಮಧೇಯ ಮಹಿಳೆಯ ಮೃತ ಶವ ಪತ್ತೆಯಾಗಿದ್ದು, ಮೃತಳ ವಾರಸುದಾರರ ಬಗ್ಗೆ ತಿಳಿದಿರುವುದಿಲ್ಲ. ಮೃತಳÀ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ಚಹರೆ ಗುರುತು:
ಎತ್ತರ 4.8 ಅಡಿ, ದುಂಡು ಮುಖ, ಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಮೃತಳ ಮೈಮೇಲೆ ಕೆಂಪು ಬಣ್ಣದ ಬ್ಲೌಸ್ ಮತ್ತು ಹಸಿರು ಬಣ್ಣದ ಸೀರೆ ಧರಿಸಿರುತ್ತಾಳೆ. ಈ ಮೇಲ್ಕಂಡ ಚಹರೆ ಗುರುತುಗಳುಳ್ಳ ಮೃತಳ ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕುರುಗೋಡು ಪೊಲೀಸ್ ಠಾಣೆ ದೂ.08392-263433, ಮೊ.9480803051, 9480803033 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ