ಶುಕ್ರವಾರ, ಏಪ್ರಿಲ್ 4, 2025
ಅನಾಮಧೇಯ ಮೃತ ವ್ಯಕ್ತಿ ವಾರಸುದಾರರ ಪತ್ತೆಗೆ ಮನವಿ
ಬಳ್ಳಾರಿ,ಏ.04(ಕರ್ನಾಟಕ ವಾರ್ತೆ):
ನಗರದ ಹೆಚ್.ಆರ್ ಗವಿಯಪ್ಪ (ಮೋತಿ ವೃತ್ತ) ವೃತ್ತದ ನೀಲಕಂಠ ದೇವಸ್ಥಾನದ ಹತ್ತಿರ ಅಂದಾಜು 55 ವಷÀðದ ಅನಾಮದೇಯ ವ್ಯಕ್ತಿಯು ಯಾವುದೋ ಖಾಯಿಲೆಯಿಂದ ಬಳಲುತ್ತಿದ್ದು, ಅನಾರೋಗ್ಯದಿಂದ ಏ.02 ರಂದು ಮೃತಪಟ್ಟಿದ್ದು, ಮೃತನ ವಾರಸುದಾರರು ತಿಳಿದಿರುವುದಿಲ್ಲ. ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಬ್ರೂಸ್‌ಪೇಟೆ ಪೋಲಿಸ್ ಠಾಣೆಯ ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ಚಹರೆ ಗುರುತು:
ಎತ್ತರ 5.5 ಅಡಿ, ಕೋಲು ಮುಖ, ಎಣ್ಣೆಗೆಂಪುü ಮೈಬಣ್ಣ, ತೆಳುವಾದ ಮೈಕಟ್ಟು ಹೊಂದಿದ್ದು, ಮೃತನ ತಲೆಯ ಮೇಲೆ ಕಪ್ಪು ಕೂದಲು ಮತ್ತು ಮುಖದಲ್ಲಿ ಕಪ್ಪು ಗಡ್ಡ ಇರುತ್ತದೆ.
ಈ ಮೇಲ್ಕಂಡ ಚಹರೆ ಗುರುತುಗಳುಳ್ಳ ಮೃತ ವ್ಯಕ್ತಿಯ ವಾರಸುದಾರರ ಬಗ್ಗೆ ಮಾಹಿತಿ ಇದ್ದಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100,258102 ಬ್ರೂಸ್‌ಪೇಟೆ ಪೊಲೀಸ್ ಠಾಣೆ ದೂ.08392-272022, ಪಿ.ಎಸ್.ಐ ಮೊ:9480803081 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ