ಸೋಮವಾರ, ಏಪ್ರಿಲ್ 7, 2025
ವೃದ್ಧ ಕಾಣೆ: ಪತ್ತೆಗೆ ಮನವಿ
ಬಳ್ಳಾರಿ,ಏ.07(ಕರ್ನಾಟಕ ವಾರ್ತೆ):
ಬಳ್ಳಾರಿ ತಾಲ್ಲೂಕಿನ ಜೋಳದರಾಶಿ ಗ್ರಾಮದ ನಿವಾಸಿಯಾದ ಚನ್ನ ಬಸವನಗೌಡ ಎನ್ನುವ 82 ವರ್ಷದ ವ್ಯಕ್ತಿಯು 03.08.2020 ರಂದು ಕಾಣೆಯಾಗಿದ್ದು, ಈ ಕುರಿತು ಪಿ.ಡಿ.ಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿಗಳು ಮನವಿ ಮಾಡಿದ್ದಾರೆ.
ಚಹರೆ: ಅಂದಾಜು 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ದುಂಡು ಮುಖ ಹೊಂದಿರುತ್ತಾನೆ.
ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ಅಂಗಿ, ಬಿಳಿ ಬಣ್ಣದ ಲುಂಗಿ ಧರಿಸಿರುತ್ತಾನೆ.
ಕಾಣೆಯಾದ ವೃದ್ಧನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100, 102 ಬಳ್ಳಾರಿ ಎಸ್.ಪಿ ಅವರ ಕಚೇರಿ ದೂ.08392-258400, ಸಿರುಗುಪ್ಪ ಡಿ.ಎಸ್.ಪಿ ದೂ.08392-276000, ಪಿ.ಡಿ.ಹಳ್ಳಿ ವೃತ್ತ ಸಿ.ಪಿ.ಐ ಮೊ.08392-276461, ಪಿ.ಡಿ.ಹಳ್ಳಿ ಪೊಲೀಸ್ ಠಾಣೆ ದೂ.08392-265010 ಮತ್ತು ಪಿಎಸ್‌ಐ ಮೊ.9480803052 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ